SEARCH HERE

Tuesday, 1 January 2019

ಭಗವದ್ಗೀತೆಯ ಕೆಲವು ಶ್ಲೋಕಗಳು ಮತ್ತು ಸಾರಾಂಶ bhagavadgita some slokas and meaning

click




BEAUTIFUL SUMARY






BHAGAVAD-GITA

" ಯದಾ ಯದಾ ಹಿ ಧರ್ಮಸ್ಯ ಗ್ಲಾನಿರ್ಭವತಿ ಭಾರತ.
  ಅಭ್ಯುತ್ಥಾನಮಧರ್ಮಸ್ಯ ತದಾತ್ಮಾನಂ ಸೃಜಾಮ್ಯಹಂ.
 ಪರಿತ್ರಾಣಾಯ ಸಾದೂನಾಂ ವಿನಾಶಾಯ ಚದುಷ್ಕೃತಾಂ.
 ಧರ್ಮ ಸಂಸ್ಥಾಪನಾರ್ಥಾಯ ಸಂಭವಾಮಿ ಯುಗೇ ಯುಗೇ."

     ☘️ ಭಾವಾರ್ಥ ☘️
ಯಾವಾಗ ಎಲ್ಲೆಲ್ಲಿ  ಧರ್ಮದ ಅವನತಿಯಾಗುವುದೋ ಮತ್ತು ಅಧರ್ಮದ ಪ್ರಾಬಲ್ಯ ಹೆಚ್ಚುತ್ತದೆಯೋ ಆಗ ನಾನು ಸ್ವಯಂ ಅವತರಿಸುತ್ತೇನೆ.
   ಶಿಷ್ಟರನ್ನು ರಕ್ಷಿಸುವುದಕ್ಕಾಗಿ,ದುಷ್ಟರ ನಾಶಕ್ಕಾಗಿ ಧರ್ಮದ ತತ್ವಗಳನ್ನು ಪುನಃ ಸ್ಥಾಪಿಸುವುದಕ್ಕಾಗಿ ಯುಗ ಯುಗಗಳಲ್ಲೂ ಪ್ರಕಟವಾಗುತ್ತೇನೆ.
***


ಭಗವದ್ಗೀತೆ ಓದಬೇಕು ಅಂತ ಬಹುತೇಕ ಹಿಂದೂಗಳಿಗೆ ಆಸೆ ಇರುತ್ತದೆ. ಭಗವದ್ಗೀತೆಯಲ್ಲಿ ಅಂಥದ್ದೇನಿದೆ ತಿಳ್ಕೋಬೇಕೆಂಬ ಕುತೂಹಲ. ಆದರೆ, 700 ಶ್ಲೋಕಗಳಿರುವ ಪುಸ್ತಕದ ಗಾತ್ರ ನೋಡಿ ಕೆಲವರು ಓದಲು ಹಿಂಜರಿದರೆ, ಮತ್ತೆ ಕೆಲವರು ಆ ಶ್ಲೋಕ ಗೀಕ ಎಲ್ಲ ಯಾರು ಓದ್ತಾರೆ ಅಂತ ಸುಮ್ನಾಗಿರ್ತಾರೆ. ನಿಮ್ಮಂಥವರಿಗಾಗಿಯೇ ಸರಳವಾಗಿ ಒಂದೊಂದು ಅಧ್ಯಾಯಗಳ ಸಾರವನ್ನೂ ಒಂದೆರಡು ಸಾಲಿನಲ್ಲಿ ಇಲ್ಲಿ ಕೊಡಲಾಗಿದೆ. 

ಅಧ್ಯಾಯ 1: ತಪ್ಪಾಗಿ ಯೋಚಿಸುವುದೇ ಜೀವನದ ಸಮಸ್ಯೆ
ಅರ್ಜುನನ ದುಃಖ ಇಲ್ಲಿ ಮುಖ್ಯ ವಿಷಯ. ಯುದ್ಧಕ್ಕಾಗಿ ಬಂಧುಗಳನ್ನೇ ಕೊಲ್ಲಬೇಕಾದ ದುಗುಡ ಹಾಗೂ ಖಿನ್ನತೆ. ಧರ್ಮ ಹಾಳುಗೆಡವಿದ್ದನ್ನು ನೋಡುವುದಕ್ಕಿಂತ ಅವರೆಲ್ಲ ತನ್ನ ಬಂಧುಗಳೇ. ಅವರನ್ನು ಹೇಗೆ ಕೊಲ್ಲುವುದು ಎಂದು ಅರ್ಜುನ ಯೋಚಿಸುತ್ತಿರುತ್ತಾನೆ. ಆದರೆ, ಈ ಯೋಚನೆ ತಪ್ಪು. ಧರ್ಮವು ಈ ಭವಬಂಧನಗಳಿಗಿಂತ ಹೆಚ್ಚು. ತಪ್ಪಾಗಿ ಯೋಚಿಸುವುದರಿಂದ ತಪ್ಪಾದ ತೀರ್ಪು ಹೊರಬರುತ್ತದೆ ಎಂಬುದನ್ನು ಶ್ರೀಕೃಷ್ಣ ವಿವರಿಸುತ್ತಾನೆ. ಆದರೆ, ಅರ್ಜುನನಿಗೆ ಸಮಧಾನವಾಗುವುದಿಲ್ಲ. ಆತ ಗೊಂದಲ ಹಾಗೂ ದುಃಖದಿಂದ ಕುಳಿತುಕೊಳ್ಳುತ್ತಾನೆ. 

ಅಧ್ಯಾಯ 2: ಸರಿಯಾದ ಜ್ಞಾನವೇ ಎಲ್ಲ ಸಮಸ್ಯೆಗಳಿಗೆ ಅಂತಿಮ ಪರಿಹಾರ
ಕೃಷ್ಣನು ಅರ್ಜುನನಿಗೆ ಅವನೆಲ್ಲ ದುಃಖದುಮ್ಮಾನ, ಸಮಸ್ಯೆಗಳಿಗೆ ಅಜ್ಞಾನವೇ ಕಾರಣ ಎಂಬುದನ್ನು ತಿಳಿಸುತ್ತಾನೆ. ಭೀಷ್ಮನಿಂದ ಹಿಡಿದು ಯಾರೊಬ್ಬರ ಆತ್ಮಗಳನ್ನೂ ನಾಶಪಡಿಸಲಾಗುವುದಿಲ್ಲ. ಹಾಗಾಗಿ ಅವರೆಲ್ಲ ಶಾಶ್ವತವಾಗಿರುತ್ತಾರೆ. ಯುದ್ಧವನ್ನು ದೂರವಿಡುವುದರಿಂದ ನಿನ್ನ ಧರ್ಮವನ್ನೇ ದೂರವಿಟ್ಟಂತಾಗುತ್ತದೆ. ಅದು ಪಾಪಕಾರ್ಯ. ಹೋರಾಡದಿದ್ದರೆ ಆತನೊಬ್ಬ ಹೇಡಿ ಎನಿಸಿಕೊಳ್ಳುತ್ತಾನೆ ಎಂದು ಎಚ್ಚರಿಸುತ್ತಾನೆ ಕೃಷ್ಣ.

ಅಧ್ಯಾಯ 3: ಅಭಿವೃದ್ಧಿ ಹಾಗೂ ಬೆಳವಣಿಗೆಗೆ ನಿಸ್ವಾರ್ಥವೊಂದೇ ದಾರಿ
ಕೃಷ್ಣ ಇಲ್ಲಿ ನಿಸ್ವಾರ್ಥ ಸೇವೆಯಾದ ಕರ್ಮಯೋಗದ ಕುರಿತು ಮಾತನಾಡುತ್ತಾನೆ. ಕರ್ಮಯೋಗಿಯು ಧರ್ಮದ ಆಧ್ಯಾತ್ಮಕ್ಕೆ ಬೆಲೆ ಕೊಟ್ಟು ತನ್ನೆಲ್ಲ ಕೆಲಸಗಳನ್ನು ದೇವರಿಗೆ ಸಮರ್ಪಿಸುತ್ತಾನೆ. ಫಲಿತಾಂಶದ ಬಗ್ಗೆ ಯೋಚಿಸದೆ  ತನ್ನ ಪಾಡಿಗೆ ತಾನು ಶಾಂತಚಿತ್ತದಿಂದ ಕೆಲಸ ಮಾಡಿಕೊಂಡು ಹೋಗುತ್ತಾನೆ. ನಮ್ಮ ಆಸೆ, ಸಿಟ್ಟು, ಅತಿಯಾದ ಪ್ರೀತಿಯೇ ನಮ್ಮ ನಿಜವಾದ ಶತ್ರುಗಳು. ಇವು ನಮ್ಮನ್ನು ಸ್ವಾರ್ಥಿಗಳಾಗಿಸಿ ಶಾಂತಿಯನ್ನು ಕಸಿದುಕೊಳ್ಳುತ್ತದೆ ಎಂದು ತಿಳಿಸುತ್ತಾನೆ.

ಅಧ್ಯಾಯ 4: ಧರ್ಮಸಂಸ್ಥಾಪನೆಗೆ ಭಗವಂತ ಅವತಾರ ಎತ್ತುತ್ತಾನೆ
ಧರ್ಮಕ್ಕೆ ಹಾನಿಯಾದಾಗ ಭಗವಂತನು ಸಜ್ಜನರನ್ನು ಕಾಪಾಡಿ, ದುರ್ಜನರನ್ನು ನಾಶ ಮಾಡಲು, ಪ್ರತಿ ಯುಗದಲ್ಲಿ ಭೂಮಿಯಲ್ಲಿ ಅವತರಿಸುತ್ತಾನೆ ಎಂದು ಕೃಷ್ಣ ವಿವರಿಸುತ್ತಾನೆ. ಅಷ್ಟೇ ಅಲ್ಲ, ಭಗವಂತನ ಈ  ಜನ್ಮ ರಹಸ್ಯವನ್ನು ಅರಿತವರು ಮೋಕ್ಷ ಪ್ರದರು ಎಂದು ತಿಳಿಸುತ್ತಾನೆ.

ಅಧ್ಯಾಯ 5: ಅಹಂಕಾರದಿಂದ ಹೊರ ಬಂದು ಫಲದಾಸೆ ಇಲ್ಲದೆ ಕರ್ಮ ಮಾಡು
ಹೇಗೆ ಕರ್ತವ್ಯ ನಿಭಾಯಿಸುತ್ತಲೇ ಫಲದಾಸೆಯಿಲ್ಲದೆ ಸನ್ಯಾಸಿಯಂತಿರುವುದು ಎಂದು ಅರ್ಜುನ ಪ್ರಶ್ನಿಸುತ್ತಾನೆ. ಇದಕ್ಕೆ ಕೃಷ್ಣನು ನಿಜವಾದದ ಕರ್ಮಯೋಗಿಯು ಫಲಿತಾಂಶದ ಬಗ್ಗೆ ಯೋಚಿಸದೆ ಫಲವನ್ನು ದೇವರಿಗೆ ಬಿಟ್ಟು ತಾನು ಕರ್ತವ್ಯ ನಿಭಾಯಿಸುತ್ತಾನೆ. ಈ ಮನಸ್ಥಿತಿಯಿಂದಾಗಿ ಆತ ಸ್ವಯಂ ನಿಯಂತ್ರಣ ಸಾಧಿಸಿ ಅಹಂಕಾರದಿಂದ ಹೊರಬರಬಲ್ಲ ಎಂದು ಹೇಳುತ್ತಾನೆ. 

ಅಧ್ಯಾಯ 6: ಧ್ಯಾನಸಾಧಕನಿಗೆ ಕರ್ಮ ಸಾಧನೆ ಸಾಧ್ಯ
ಧ್ಯಾನದ ಕುರಿತು ಇಲ್ಲಿ ಕೃಷ್ಣ ಹೇಳುತ್ತಾನೆ. ಧ್ಯಾನವನ್ನು ಅಭ್ಯಾಸ ಮಾಡುವವನು ಏಕಾಂಗಿಯಾಗಿ, ದೇಹವನ್ನೂ ಮನಸ್ಸನ್ನೂ ಬಿಗಿಹಿಡಿದು, ಮನಸ್ಸನ್ನು ಪರಮಾತ್ಮನಲ್ಲಿ ಕೂಡಿಸಿಕೊಂಡಿರಬೇಕು. ಪ್ರಯತ್ನದಿಂದಲೇ ಇಂದ್ರಿಯಗಳನ್ನೂ, ಮನಸ್ಸನ್ನು ಗೆಲ್ಲಬೇಕು ಎನ್ನುತ್ತಾನೆ. 

ಅಧ್ಯಾಯ 7: ನೀನಾರು ಎಂದು ತಿಳಿದುಕೋ. 
ಧ್ಯಾನ ಮಾಡುತ್ತಿರುವುದರಿಂದ ನಿನಗೆ ನೀನು ಯಾರೆಂಬುದು ಅರಿವಾಗಬೇಕು. ಜ್ಞಾನಿಯು ನನ್ನಲ್ಲಿ ಲೀನನಾಗುತ್ತಾನೆ ಎಂಬ ತತ್ವ ಬೋಧಿಸುತ್ತಾನೆ.

ಅಧ್ಯಾಯ 8: ಪ್ರಯತ್ನ ಬಿಡಬೇಡ
ದೇವರ ಧ್ಯಾನದಲ್ಲಿ ಪ್ರಾಮಾಣಿಕವಾಗಿ ತೊಡಗಿರುವವನಿಗೆ ದೇವರು ಸಿಕ್ಕೇ ಸಿಗುತ್ತಾನೆ. ಪ್ರಯತ್ನ ಬಿಡಕೂಡದು ಎಂದು ಹೇಳುತ್ತಾನೆ.

ಅಧ್ಯಾಯ 9: ದೇವರ ಧ್ಯಾನದಿಂದ ನನ್ನ ಸೇರಬಹುದು
ಈ ಜಗತ್ತೆಲ್ಲಾ ಕಣ್ಣಿಗೆ ಕಾಣದ ನನ್ನಿಂದ ತುಂಬಿರುವುದು. ಈ ಎಲ್ಲಾ ವಸ್ತುಗಳೂ ನನ್ನಲ್ಲಿ ಇರುವುವು, ಆದರೆ ನಾನು ಅವುಗಳಲ್ಲಿ ಇಲ್ಲ.ಯಾವ ಜನರು, ತಮ್ಮ ಆತ್ಮವೆಂದು ನನ್ನನ್ನು ಧ್ಯಾನ ಮಾಡುತ್ತಾರೋ, ನಾನು ಅವರ ಯೋಗಕ್ಷೇಮ ಹೊರೆ ಹೊರುತ್ತೇನೆ ಎನ್ನುತ್ತಾನೆ.

ಅಧ್ಯಾಯ 10: ಕರ್ಮಕ್ಕೆ ತಕ್ಕ ಫಲ ಪ್ರಾಪ್ತಿ
ಭೂಮಿಯ ಪ್ರತಿಯೊಂದು ಚರಾಚರಗಳಲ್ಲೂ ನಾನಿದ್ದೇನೆ. ನಿನ್ನ ಸುತ್ತಲ ಬದುಕು ಸಂಪೂರ್ಣ ಪವಾಡಗಳಿಂದಲೇ ತುಂಬಿದೆ. ಅವುಗಳನ್ನು ಕಂಡು ಖುಷಿಪಡು. ಜಗತ್ತಿನಲ್ಲಿ ದೇವರಿರುವುದಲ್ಲ, ದೇವರೊಳಗೆ ಸಂಪೂರ್ಣ ಜಗತ್ತಿದೆ. ನಿನ್ನ ಕರ್ಮಕ್ಕೆ ತಕ್ಕ ಫಲವನ್ನು ನಾನು ನೀಡಿಯೇ ತೀರುತ್ತೇನೆ. 

ಅಧ್ಯಾಯ 11: ವಿಶ್ವರೂಪ ದರ್ಶನ
ಈಶ್ವರತ್ವದ ರೂಪವನ್ನು ನೋಡುವ ಆಸೆಯನ್ನು ಅರ್ಜುನ ವ್ಯಕ್ತಪಡಿಸುತ್ತಾನೆ. ಇದರಿಂದ ಕೃಷ್ಣನು ತನ್ನ ಆದಿಅಂತ್ಯವಿಲ್ಲದ ಪ್ರಕಾಶಮಾನವಾದ ವಿಶ್ವರೂಪ ದರ್ಶನ ಮಾಡಿಸುತ್ತಾನೆ. ಇದನ್ನು ನೋಡಿ ಅರ್ಜುನ ಬೆರಗಾಗಿ ಶರಣಾಗುತ್ತಾನೆ. ಸತ್ಯವನ್ನು ಅರಿಯದಿದ್ದುದಕ್ಕೆ ಕ್ಷಮೆ ಯಾಚಿಸುತ್ತಾನೆ. 

ಅಧ್ಯಾಯ 12: ವೈರಾಗ್ಯದಿಂದ ಧ್ಯಾನಿಸುವವರೇ ಯೋಗಿ
ಯಾರು ಭಗವಂತನಲ್ಲಿ ಹೆಚ್ಚು ಪ್ರೀತಿಯನ್ನಿಟ್ಟು ವಿಶ್ವರೂಪವನ್ನು ಧ್ಯಾನಿಸುತ್ತಾ ಉಪಾಸನೆ ಮಾಡುವರೋ ಅವರು ಹೆಚ್ಚಿನ ಯೋಗಿಗಳು. ವಿವೇಕ ವೈರಾಗ್ಯಗಳಿಂದ ಅದನ್ನು ಅಭ್ಯಾ ಸಮಾಡಬೇಕು. ಅದು ಕಷ್ಟವಾದರೆ, ಭಗವಂತನ ಪ್ರೀತ್ಯರ್ಥವಾಗಿ ಕರ್ಮಗಳನ್ನು ಮಾಡು. ಅದೂ ಕಷ್ಟವಾದರೆ. ಕರ್ಮಗಳ ಫಲಗಳ ಬಯಕೆಗಳನ್ನೆಲ್ಲಾ ಬಿಡು ಎನ್ನುತ್ತಾನೆ.

ಅಧ್ಯಾಯ 13: ಮಾಯೆಯಿಂದ ಕಳಚಿಕೊಂಡು ಭಗವಂತನನ್ನು ಭಜಿಸು
ಈ ಬ್ರಹ್ಮಾಂಡವೇ ಒಂದು ಮಾಯೆ. ಇವೆಲ್ಲದರ ಸೃಷ್ಟಿಕರ್ತ ಬ್ರಹ್ಮನಾಗಿದ್ದು,ಅವನು ಪ್ರತಿಯೊಂದು ಅಣುರೇಣತೃಣಕಾಷ್ಟಗಳಲ್ಲೂ ನೆಲೆಸಿದ್ದಾನೆ. ನಿನ್ನೊಳಗೂ ಆತ ಇರುವುದನ್ನು ಅರ್ಥ ಮಾಡಿಕೊಂಡು ಮಾಯೆಯಿಂದ ಕಳಚಿಕೊಂಡು ಭಕ್ತಿಯಿಂದ ಜೀವಿಸು ಎಂದು ಕೃಷ್ಣ ವಿವರಿಸುತ್ತಾನೆ. 

ಅಧ್ಯಾಯ 14: ನಿನ್ನದೃಷ್ಟಿಕೋನಕ್ಕೆ ಹೊಂದುವ ಜೀವನಶೈಲಿ ಅಳವಡಿಸಿಕೋ
ಎಲ್ಲರಲ್ಲೂ ಮೂರು ಗುಣಗಳಿರುತ್ತವೆ. ಸಾತ್ವಿಕ ಗುಣವು ಬೆಳಕಿನ, ಸುಖದ, ವಿಚಾರದ ರೂಪ, ರಜೋಗುಣವು ಪ್ರೀತಿ, ಬಯಕೆ ಅಹಂಕಾರದ ಕ್ರಿಯಾಶೀಲ ರೂಪ, ತಮವು ಅಜ್ಞಾನ, ತಪ್ಪು ತಿಳುವಳಿಕೆ, ಆಲಸ್ಯದ ರೂಪ. ಇವುಗಳಲ್ಲಿ ಶಕ್ತವಾದ ಗುಣ ಆತ್ಮವನ್ನು ಕಟ್ಟಿಹಾಕುತ್ತದೆ. ಎಲ್ಲರಲ್ಲಿಯೂ ಇಷ್ಟೂ ಗುಣಗಳಿದ್ದರೂ ಒಂದು ಗುಣ ಮೇಲುಗೈ ಸಾಧಿಸುವುದು. ಸಾತ್ವಿಕ ಗುಣದವನು ಮೋಕ್ಷ, ರಾಜಸಿಕ ಗುಣದವನು ಪುನರ್ಜನ್ಮ ಹಾಗೂ ತಾಮಸಿಕ ಗುಣದವನು ಕೆಳಮಟ್ಟದ ಜನ್ಮವೆತ್ತುತ್ತಾನೆ ಎಂದು ಕೃಷ್ಣ ಹೇಳುತ್ತಾನೆ. 

ಅಧ್ಯಾಯ 15: ದೈವಿಕತ್ವಕ್ಕೆ ಬೆಲೆ ಕೊಡು
ಈ ಪ್ರಾಪಂಚಿಕ ಜೀವನದಲ್ಲಿ ನಾವು ಹೇಗೆ ಸಾವು ಹಾಗೂ ಪುನರ್ಜನ್ಮಗಳ ಮಧ್ಯೆ ಸಿಲುಕಿದ್ದೇವೆ ಎಂಬುದನ್ನು ಕೃಷ್ಣ ಅರ್ಜುನನಿಗೆ ಅರ್ಥ ಮಾಡಿಸುತ್ತಾನೆ. ಆತ ಸಂಸಾರವನ್ನು ತಲೆಕೆಳಗಾದ ಅರಳಿ ಮರಕ್ಕೆ ಹೋಲಿಸಿ ಮಾತನಾಡುತ್ತಾನೆ. ಪಾಪ ಪುಣ್ಯಗಳ ಕರ್ಮಗಳನ್ನು ಅಂಟಿಸುವ ಒಳ ಬೇರುಗಳು ಮೇಲಕ್ಕೂ ಕೆಳಕ್ಕೂ ಹರಡಿಕೊಂಡಿದೆ. ಸುಖದ ಬಯಕೆಗಳೆ ಅದರ ಚಿಗುರುಗಳು. ಇದು ಆದಿ ಅಂತ್ಯವಿಲ್ಲದ್ದು. ಇದನ್ನು ವೈರಾಗ್ಯವೆಂಬ ಶಸ್ತ್ರದಿಂದ ಕತ್ತರಿಸಬೇಕು. ದೈವಿಕತ್ವಕ್ಕೆ ಬೆಲೆ ಕೊಟ್ಟಾಗ ಇದು ಸಾಧ್ಯ ಎಂದು ಕೃಷ್ಣ ಮನ ಮುಟ್ಟುವಂತೆ ಹೇಳುತ್ತಾನೆ.  

ಅಧ್ಯಾಯ 16 : ಉತ್ತಮನಾಗಿರುವುದೇ ವರ
ಸಿಟ್ಟು, ಕ್ರೂರತೆ, ಅಜ್ಞಾನ, ಅಪ್ರಾಮಾಣಿಕತೆ, ಅತಿಯಾಸೆ, ಅನೈತಿಕತೆ, ಅಹಂಕಾರ ಮುಂತಾದವು ವ್ಯಕ್ತಿಯನ್ನು ಆಧ್ಯಾತ್ಮಿಕವಾಗಿ ನಾಶ ಮಾಡುತ್ತವೆ. ಆದರೆ ಮಾನವೀಯತೆ, ಸತ್ಯ, ಅಹಿಂಸೆ, ತಾಳ್ಮೆ, ಇಂದ್ರಿಯಗಳ ನಿಯಂತ್ರಣ ಮುಂತಾದ ಸದ್ಗುಣಗಳು ಜ್ಞಾನಕ್ಕೆ ಕಾರಣವಾಗಿ ಸ್ವತಂತ್ರರನ್ನಾಗಿಸುತ್ತದೆ. 

ಅಧ್ಯಾಯ 17: ಮೇರು ಸತ್ಯ
ಇಲ್ಲಿ ಕೃಷ್ಣ ಓಂ ತತ್ ಸತ್ ಮಂತ್ರದ ಮಹತ್ವ ಹೇಳುತ್ತಾನೆ. ಇದರ ಅರ್ಥ ಮೇರು ಸತ್ಯ ಎಂದು. ಓಂನಾಮದಿಂದಲೇ ಸತ್ಕಾರ್ಯ ಆರಂಭಿಸಬೇಕು. ಯಜ್ಞ, ದಾನ ಹಾಗೂ ತಪಸ್ಸು ಸತ್ಕಾರ್ಯಗಳು ಎಂದು ವಿವರಿಸುತ್ತಾನೆ.

ಅಧ್ಯಾಯ 18: ಪರಮಾತ್ಮನೊಂದಿಗೆ ಐಕ್ಯ

ಫಲದ ಬಯಕೆಯಿಂದ ಮಾಡುವ ಕರ್ಮಗಳನ್ನು ಬಿಡುವುದು ಸಂನ್ಯಾಸ, ಆ ಎಲ್ಲಾ ಕರ್ಮಗಳನ್ನು ಮಾಡಿ ಫಲವನ್ನ ಬಯಸದೇ ಇರುವುದು ತ್ಯಾಗ ಎಂದು ಹೇಳುವ ಕೃಷ್ಣನು, ಕರ್ಮಯೋಗಿಯಾಗಿ ಬದುಕಬೇಕು. ನಿಮ್ಮ ಕೆಲಸವೇ ನಿಮ್ಮನ್ನು ಆತ್ಮದೊಂದಿಗೆ ಜೋಡಿಸುತ್ತದೆ. ಪರಮಾತ್ಮನೊಂದಿಗೆ ಐಕ್ಯವಾಗಲು ದಾರಿ ತೋರುತ್ತದೆ ಎಂದು ವಿವರಿಸುತ್ತಾನೆ.
**************



ಕೆಲವು  ಶ್ಲೋಕಗಳು ಮತ್ತು ಸಾರಾಂಶ

ಅಧ್ಯಾಯ - 09: ಶ್ಲೋಕ – 14

ಸತತಂ ಕೀರ್ತಯಂತೋ ಮಾಂ ಯತಂತಶ್ಚ ದೃಢವ್ರತಾಃ ।
ನಮಸ್ಯಂತಶ್ಚ ಮಾಂ ಭಕ್ತ್ಯಾ ನಿತ್ಯಯುಕ್ತಾ ಉಪಾಸತೇ ॥೧೪॥

ಸತತಮ್ ಕೀರ್ತಯಂತ ಮಾಮ್ ಯತಂತಃ ಚ ದೃಢ ವ್ರತಾಃ।
ನಮಸ್ಯಂತ ಚ ಮಾಮ್ ಭಕ್ತ್ಯಾ ನಿತ್ಯ ಯುಕ್ತಾಃ ಉಪಾಸತೇ –

ಅನುದಿನವು ನನ್ನಲ್ಲಿ ಬಗೆಯಿಟ್ಟು ನನ್ನನ್ನೆ ಸೇವಿಸುತ್ತಾರೆ. ನಿರಂತರ ನನ್ನನ್ನು ಕೊಂಡಾಡುತ್ತಾ ನೇಮಗಳನ್ನುನೆಮ್ಮಿಕೊಂಡು ಹೆಣಗುತ್ತಾ ನನಗಾಗಿ ತಲೆಬಾಗುತ್ತ.

“ದೈವೀ ಸ್ವಭಾವದವರು ನಿರಂತರ ನನ್ನನ್ನು ಕೀರ್ತನ ಮಾಡುತ್ತಾರೆ” ಎನ್ನುತ್ತಾನೆ ಕೃಷ್ಣ. ಅವರ ಪ್ರತಿಯೊಂದು ಚಟುವಟಿಕೆಯಲ್ಲೂ ಭಗವದ್ ಪ್ರಜ್ಞೆ ಗಾಢವಾಗಿರುತ್ತದೆ. ಇನ್ನೊಂದು ಅರ್ಥದಲ್ಲಿ ತತವಾದ್ಯವನ್ನು ಹಿಡಿದು, ತಂತಿಯನ್ನು ಮೀಟುತ್ತಾ ಭಗವಂತನ ಗುಣಗಾನ ಮಾಡುತ್ತಾ, ಹಾಡುತ್ತಾ(ನಾರದ ಮಹರ್ಷಿಗಳಂತೆ) ಸದಾ ಸಂತೋಷವಾಗಿರುವವರು ದೈವೀ ಸ್ವಭಾವದವರು. ಇವರು ನಿರಂತರ, ತಮ್ಮ ಗುರಿ ತಲುಪುವತನಕವೂ ದೃಡ ಧೀಕ್ಷೆಯಿಂದ, ಅನನ್ಯ ಪ್ರೀತಿಯಿಂದ ಗೌರವಿಸುತ್ತಾ ಉಪಾಸನೆ ಮಾಡುತ್ತಾರೆ. ಇವರಲ್ಲಿ ಇನ್ನೊಂದು ವಿಧದ ಭಕ್ತರನ್ನು ಕೃಷ್ಣ ಮುಂದಿನ ಶ್ಲೋಕದಲ್ಲಿ ವಿವರಿಸುತ್ತಾನೆ.- ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು.

सततं कीर्तयन्तो मां यतन्तश्च दृढ़व्रताः।
नमस्यन्तश्च मां भक्त्या नित्ययुक्ता उपासते॥

वे दृढ़ निश्चय वाले भक्तजन निरंतर मेरे नाम और गुणों का कीर्तन करते हुए तथा मेरी प्राप्ति के लिए यत्न करते हुए और मुझको बार-बार प्रणाम करते हुए सदा मेरे ध्यान में युक्त होकर अनन्य प्रेम से मेरी उपासना करते हैं॥14॥

Satatam keertayanto maam yatantashcha dridhavrataah;
Namasyantashcha maam bhaktyaa nityayuktaa upaasate.


Always glorifying Me, striving, firm in vows, prostrating before Me, they worship Mewith devotion, ever steadfast.
**********



ಅಧ್ಯಾಯ - 09: ಶ್ಲೋಕ – 26

ಪತ್ರಂ ಪುಷ್ಪಂ ಫಲಂ ತೋಯಂ ಯೋ ಮೇ ಭಕ್ತ್ಯಾ ಪ್ರಯಚ್ಛತಿ ।
ತದಹಂ ಭಕ್ತ್ಯುಪಹೃತಮಶ್ನಾಮಿ ಪ್ರಯತಾತ್ಮನಃ ॥೨೬॥

ಪತ್ರಮ್ ಪುಷ್ಪಮ್ ಫಲಮ್ ತೋಯಮ್ ಯಃ ಮೇ ಭಕ್ತ್ಯಾ ಪ್ರಯಚ್ಛತಿ ।
ತತ್ ಅಹಮ್ ಭಕ್ತಿ ಉಪಹೃತಮ್ ಅಶ್ನಾಮಿ ಪ್ರಯತ ಆತ್ಮನಃ –
ಯಾರು ಎಲೆಯನ್ನೋ, ಹೂವನ್ನೋ, ನೀರನ್ನೋ ಭಕ್ತಿಯಿಂದ ನನಗೆ ನೀಡುತ್ತಾನೆ ನನ್ನಲ್ಲೇ ಬಗೆಯಿಟ್ಟ ಅವನ ಭಕ್ತಿಯ ಆ ಕೊಡುಗೆಯನ್ನು ನಾನು ನಲ್ಮೆಯಿಂದ ಕೊಳ್ಳುತ್ತೇನೆ.

ಮಹೋನ್ನತನಾದ ಭಗವಂತನ ಪೂಜೆಗೆ ಮೂಲವಾಗಿ ಬೇಕಾಗಿರುವುದು ‘ತನ್ನನ್ನು ತಾನು ಸಂಪೂರ್ಣ ತೊಡಗಿಸಿಕೊಳ್ಳುವುದು(involvement)’, ಮತ್ತು ‘ಮನಸ್ಸು ತುಂಬಿ ಆರಾಧನೆ’ ಮಾಡುವುದು. ಮನಸ್ಸಿನಲ್ಲಿ ಭಕ್ತಿ ತುಂಬಿ ತುಳಸಿ ಪತ್ರೆಯನ್ನೋ, ಹೂವನ್ನೋ ಅರ್ಪಿಸಿದರೆ ಅದನ್ನು ಭಗವಂತ ಪ್ರೀತಿಯಿಂದ ಸ್ವೀಕರಿಸುತ್ತಾನೆ. ಇಲ್ಲಿ ಬಂಗಾರದ ಪೀಠವಾಗಲೀ, ಬೆಳ್ಳಿಯ ಹರಿವಾಣವಾಗಲಿ, ಪಂಚಪಾತ್ರೆಯಾಗಲಿ ಏನೂ ಬೇಡ. ಮನೆಯಲ್ಲಿ, ಮನೆ ತೋಟದಲ್ಲಿ ಏನಿದೆ ಅದನ್ನೇ ಅರ್ಪಿಸು. ಮನೆಯಲ್ಲಿ ಹಾಲಿಲ್ಲದಿದ್ದರೆ ಒಂದು ಲೋಟ ನೀರನ್ನು ಭಕ್ತಿಯಿಂದ ಅರ್ಪಿಸು. ಆದರೆ ಅದರ ಹಿಂದೆ ಭಾವ ಶುದ್ಧಿ ಇರಲಿ ಅಷ್ಟೇ. ಕೃಷ್ಣ ಹೇಳುತ್ತಾನೆ “ಯೋ ಮೇ ಭಕ್ತ್ಯಾ ಪ್ರಯಚ್ಛತಿ” ಎಂದು. ಭಗವಂತ ಬಯಸುವುದು ನಮ್ಮ ಅಂತರಂಗದ ಪ್ರೀತಿಯನ್ನು ಮತ್ತು ಹೃದಯವಂತಿಕೆಯನ್ನು ಹೊರತು ಹೊರಗಿನ ವೈಭವವನ್ನಲ್ಲ. “ತದಹಂ ಭಕ್ತ್ಯುಪಹೃತಮಶ್ನಾಮಿ ಪ್ರಯತಾತ್ಮನಃ”-“ನೀನು ಮನಸ್ಸನ್ನು ನನ್ನಲ್ಲಿ ನೆಲೆಗೊಳಿಸಿ, ಭಕ್ತಿಯಿಂದ ಏನು ಕೊಟ್ಟರೂ ಅದನ್ನು ನಾನು ಸ್ವೀಕರಿಸುತ್ತೇನೆ” ಎನ್ನುತ್ತಾನೆ ಕೃಷ್ಣ. ರಾಮಾಯಣದಲ್ಲಿ ಬರುವ ಶಬರಿಯ ಕಥೆ ಭಗವಂತನ ಈ ನುಡಿಗೆ ಒಂದು ದೃಷ್ಟಾಂತ. - ಶ್ರೀ ಬನ್ನಂಜೆ ಗೋವಿಂದಾಚಾರ್ಯರು

( निष्काम भगवद् भक्ति की महिमा )
पत्रं पुष्पं फलं तोयं यो मे भक्त्या प्रयच्छति।
तदहं भक्त्युपहृतमश्नामि प्रयतात्मनः॥

जो कोई भक्त मेरे लिए प्रेम से पत्र, पुष्प, फल, जल आदि अर्पण करता है, उस शुद्धबुद्धि निष्काम प्रेमी भक्त का प्रेमपूर्वक अर्पण किया हुआ वह पत्र-पुष्पादि मैं सगुणरूप से प्रकट होकर प्रीतिसहित खाता हूँ॥26॥

Patram pushpam phalam toyam yo me bhaktyaa prayacchati;
Tadaham bhaktyupahritamashnaami prayataatmanah.

Whoever offers Me with devotion and a pure mind (heart), a leaf, a flower, a fruit or alittle water—I accept (this offering).

***********

ಅಧ್ಯಾಯ – ೪ ಜ್ಞಾನಕರ್ಮ ಸಂನ್ಯಾಸ ಯೋಗ ಶ್ಲೋಕ – ೧೪ (೧೭೬)||

ಶ್ರೀ ಭಗವಾನುವಾಚ:-

“ನ ಮಾಂ ಕರ್ಮಾಣಿ ಲಿಂಪಂತಿ ನ ಮೇ ಕರ್ಮಫಲೇ ಸ್ಪ್ರಹಾ |
ಇತಿ ಮಾಂ ಯೋಭಿಜಾನಾತಿ ಕರ್ಮಭಿರ್ನ ಸ ಬಧ್ಯತೇ ||೪-೧೪||”

ಅನುವಾದ:-

ಶ್ರೀ ಭಗವಂತನು ಹೇಳುತ್ತಾನೆ:-  
ಆದ್ದರಿಂದಲೇ ನನಗೆ ಕರ್ಮಗಳು ಅಂಟುವುದಿಲ್ಲ. ಕರ್ಮಫಲಗಳಲ್ಲಿ ನನಗೆ ಅಪೇಕ್ಷೆಯೂ ಇಲ್ಲ. 
ಹೀಗೆ ನನ್ನನ್ನು ಯಾವನು ತಿಳಿದುಕೊಳ್ಳುವನೋ ಅಂತಹವನು ತನ್ನ ಕರ್ಮಗಳಿಂದ ಬಂಧಿತನಾಗುವುದಿಲ್ಲ.                          

|| ಕನ್ನಡ ಶ್ಲೋಕ ರೂಪ ||

ಭಗವಂತನುಲಿದ:-
“ಕರ್ಮಗಳು ನನಗಂಟುವುದಿಲ್ಲ, ಕಿಂಚಿತ್ತು ನನಗಿಲ್ಲ ಕರ್ಮಪಲಗಳ ಬಯಕೆ, ಬಂಧ |
ನನ್ನನೀ ಪರಿಯಲ್ಲಿ ಅರಿತ ಮಾನವಜೀವಿ ತೊಳಲಲಾರನು ಕರ್ಮಬಾಧ್ಯತೆಗಳಿಂದ ||೪-೧೪||”. 

ನಾನು ಕರ್ಮಗಳನ್ನು ಮಾಡುವೆನೇ ಹೊರತು ನನಗೆ ಕರ್ಮಗಳು ಅಂಟುವುದಿಲ್ಲ. 
ಕಾರಣ ನನಗೆ ಅಹಂಭಾವವಿಲ್ಲ. 
“ನಾನು ಈ ಕರ್ಮವನ್ನು ಮಾಡಿದೆನು” ಎಂದೇ ನಾನು ಭಾವಿಸುವುದಿಲ್ಲ – ಎನ್ನುತ್ತಾನೆ ಶ್ರೀಕೃಷ್ಣ.

ಕೆಸರಿನಲ್ಲಿ ಇರುವ ಮೀನಿನಂತೆ ಇರಿ – ಎಂದು ಶ್ರೀರಾಮಕೃಷ್ಣರು ಹೇಳುತ್ತಿದ್ದರು. 
ಮೀನು ಕೆಸರಿನಲ್ಲಿ ಇದ್ದರೂ ಅದಕ್ಕೆ ಕೆಸರು ಅಂಟಿಕೊಳ್ಳುವುದಿಲ್ಲ. 
ಅದೇ ರೀತಿಯಲ್ಲಿ ಶ್ರೀಕೃಷ್ಣನು ಕರ್ಮಮಾಡಿದರೂ ಅವನಲ್ಲಿ “ನಾನು ಮಾಡಿದೆನು” ಎಂಬ ಭಾವನೆಯೇ ಇಲ್ಲದೇ ಇರುವುದರಿಂದ “ನನಗೆ ಕರ್ಮಗಳೇ ಅಂಟುವುದಿಲ್ಲ” ಎನ್ನುತ್ತಾನೆ. 

ಹಿಂದಿನ ಶ್ಲೋಕದಲ್ಲಿ “ತಸ್ಯ ಅಕರ್ತಾರಂ ವಿದ್ಧಿ”  ಎನ್ನುತ್ತಾನೆ. “ನಾನು ಆ ಕರ್ಮವನ್ನು ಮಾಡಿದವನಲ್ಲ” ಎಂದು ತಿಳಿ ಎನ್ನುತ್ತಾನೆ.  
“ನಾನು” ಎಂಬುದು ಯಾವಾಗ ಹೊರಟು ಹೋಯಿತೋ ಅದರೊಡನೆ ಮಾಡಿದ ಕರ್ಮವೂ ಹೊರಟು ಹೋಗುತ್ತದೆ. 

ಎರಡನೆಯದಾಗಿ: “ನನಗೆ ಕರ್ಮಫಲದಲ್ಲಿ ಆಸಕ್ತಿಯಿಲ್ಲ” ಎನ್ನುತ್ತಾನೆ. 
ಇದನ್ನು ಶ್ರೀಕೃಷ್ಣನು ಮಾಡಿ ತೋರಿಸಿದ್ದಾನೆ.  
ಕಂಸನನ್ನು ಕೊಂದ. ಸಿಂಹಾಸನವನ್ನು ಹತ್ತಲಿಲ್ಲ. 
ಶಿಶುಪಾಲನನ್ನು ಕೊಂದು ಅವನ ಮಗನಿಗೇ ಪಟ್ಟಗಟ್ಟಿದ. 
ಜರಾಸಂಧನನ್ನು  ಭೀಮನಿಂದ ಕೊಲ್ಲಿಸಿದ. ಅವನ ಮಗನಿಗೇ ಪಟ್ಟಗಟ್ಟಿದ. 
ಪಾಂಡವರ ವಿಜಯಸಾಧನೆಗೆ ಬಂದಿದ್ದಾನೆ. 
ಅವರಿಗೆ ರಾಜ್ಯವು ದೊರೆತನಂತರ ಯಾವ ಪ್ರತಿಫಲವೂ ಇಲ್ಲದೇ ದ್ವಾರಕೆಗೆ ಹಿಂದಿರುಗುತ್ತಾನೆ. 

ಶ್ರೀಕೃಷ್ಣನು ಆದರ್ಶಪುರುಷ. ಈ ಶ್ಲೋಕದ ಉತ್ತರಾರ್ಧದಲ್ಲಿ ಸಾಧಕರಿಗೂ ಮಾರ್ಗದರ್ಶನವನ್ನು ಮಾಡುತ್ತಾನೆ. 

“ಶ್ರೀಕೃಷ್ನನು ಲೋಕಹಿತಾರ್ಥವಾಗಿ ಕರ್ಮಮಾಡುವನೇ ಹೊರತು “ನಾನು ಈ ಕರ್ಮ ಮಾಡಿದೆನು” ಎಂಬ ಭಾವನೆಯಿಂದ ಮಮಕಾರದಿಂದ ಕರ್ಮಮಾಡುವುದಿಲ್ಲ ಮತ್ತು ಅವನಿಗೆ ಕರ್ಮಫಲದ ಆಶೆಯೂ ಇಲ್ಲ” – ಎಂದು ಯಾವನು ತಿಳಿದುಕೊಳ್ಳುವನೋ ಅವನಿಗೂ ಸಹ ಕರ್ಮಬಂಧನ ಇಲ್ಲ. 

"ತಮಪಿ ಕರ್ಮಾಣಿ ನ ಲಿಂಪಂತಿ” ತಿಳಿದುಕೊಂಡ ಮಾತ್ರಕ್ಕೆ ಅವನನ್ನು ಕರ್ಮಗಳು ಬಂಧಿಸುವುದಿಲ್ಲವೇ? ಶ್ರೀಕೃಷ್ಣನ ಈ ಮಹಾಗುಣವನ್ನು ಕುರಿತು ನಾವು ಯಾವಾಗಲೂ ಮನಸ್ಸಿನಲ್ಲಿ ಆಲೋಚಿಸುತ್ತಿದ್ದರೆ ನಮಗೂ ಆ ಗುಣಗಳೇ ಬರುತ್ತವೆ. 
ನಾವು ಹೇಗೆ ಆಲೋಚಿಸುತ್ತವೆಯೋ ಹಾಗೆಯೇ ಆಗುವೆವು. 
ಇದೊಂದು ಮನಃಶಾಸ್ತ್ರದ ರಹಸ್ಯ. 
*****
ಕರ್ಮಗಳು ನನ್ನನ್ನು ಬಂಧಿಸುವುದಿಲ್ಲ. 
ದೇವ-ಮನುಷ್ಯಾದಿ ವೈಚಿತ್ರ್ಯಗಳು ಪುಣ್ಯ-ಪಾಪರೂಪವಾದ ಕರ್ಮವಿಶೇಷದಿಂದ ಉಂಟಾಗತಕ್ಕವುಗಳು. 
ಫಲಸಂಗವೇ ಮುಂತಾದುವುಗಳಿಂದ ಉಂಟಾಗುವ ಸೃಷ್ಟಿಯೇ ಮುಂತಾದ ಕರ್ಮಫಲದಲ್ಲಿ ಅವುಗಳಿಗೆ ಆಸೆಯೇ ಹೊರತು ಭಗವಂತನಿಗೆ ಇಲ್ಲ. 
ಆ ವೈಚಿತ್ರ್ಯಕ್ಕೆ ಕಾರಣವಾದರೋ ಚೇತನದ ಪ್ರಾಚೀನ ಕರ್ಮಶಕ್ತಿಗಳು. 
ಸೃಷ್ಟಾದಿ ಕರ್ಮಫಲ ಸಂಗರಹಿತನಾದುದರಿಂದ ನಾನು ವಿವಿಧ ಸೃಷ್ಟಿಗೆ ಕರ್ತೃವಾಗಿದ್ದರೂ ಅಕರ್ತೃ. 
ನನ್ನ ಸ್ವರೂಪವನ್ನು ಅರಿತವನು ಕರ್ಮಯೊಗಾರಂಭಕ್ಕೆ ವಿರೋಧಿಗಳಾದ ಫಲಸಂಗಾದಿಗಳಿಗೆ ಕಾರಣವಾದ ಪ್ರಾಚೀನ ಕರ್ಮಗಳ ಬಂಧನಕ್ಕೆ ಒಳಗಾಗುವುದಿಲ್ಲ. ಮುಕ್ತಿ ಹೊಂದುತ್ತಾನೆ. 
“ನ ಮೇ ಕರ್ಮಫಲೇ ಸ್ಪೃಹಾ”.                                                    || ಓಂ ತತ್ಸತ್ ||

*******

BHAGAVAD-GITA

ಸತ್ಕರ್ಮ ಮಾಡಿದಾಗ ಆಗುವ ಫಲದ ಅರಿವು🕉 

ಸಂಧ್ಯಾವಂದನೆ, ಜಪ,ತಪಾದಿಗಳನ್ನು ದೇವಪೂಜೆಯನ್ನು ತುಳಸೀ ಪೂಜೆಯನ್ನು, ಅತಿಥಿ ಸತ್ಕಾರವನ್ನು, ತಂದೆ ತಾಯಿಯ ಸೇವೆಯನ್ನು, ಉತ್ತಮವಾಗಿ ಮಾತನಾಡುವದು, ಮೋಸರಹಿತ ಜೀವನ , ಚಾಡಿ ಹೇಳದಿರುವದು, ಇನ್ನೊಬ್ಬರ ಬಗ್ಗೆ ಕೆಟ್ಟದಾಗಿ ಮಾತನಾಡದಿರುವದು ಹೀಗೆ ಉತ್ತಮವಾಗಿ ಸತ್ಕರ್ಮ ಮಾಡುತ್ತ ಹೋದಾಗ ಉತ್ತಮವಾದ ಫಲವನ್ನು ದೇವರು ಕೊಡ್ತಾನೆ. 

ಸತ್ಕರ್ಮ ಮಾಡಿದ ತಕ್ಷಣ ಫಲ ಬೇಕು ಎನ್ನುವದು ಅಹಂ ಭಾವನೆಯ ಪ್ರತೀಕ. ಫಲ ಬಯಸದೇ ಕರ್ಮ ಮಾಡಿದಾಗ ದೇವರು ಕೊಡುವ ಫಲದ ಸುಖ ಅಪಾರ. ಫಲ ಬಯಸದೇ ಕರ್ಮ ಮಾಡಿ , ಫಲದ ಅರಿವು ಆಗುವದು. 

ಶ್ರೀ ಕೃಷ್ಣ ಪರಮಾತ್ಮ ಭಗವದ್ಗೀತೆಯ ಎರಡನೇ ಅಧ್ಯಾಯದ ೪೭ನೇ ಶ್ಲೋಕ ಹೀಗೆ ಹೇಳಿದ್ದಾನೆ ,
ಕರ್ಮಣ್ಯೇವಾಧಿಕಾರಸ್ತೆ ಮಾ ಫಲೇಷು ಕದಾಚನ |
ಮಾ ಕರ್ಮಫಲ ಹೇತುರ್ಭುರ್ಮಾತೇ ಸಂಗೋಸ್ತ್ವ ಕರ್ಮಣಿ||

ಕರ್ಮಾ ಮಾಡುವ ಅಧಿಕಾರ ನಿನಗಿದೆ, ಫಲ ಬಯಸಬೇಡ. ನಿನ್ನ ಕರ್ಮಕ್ಕನುಗುಣವಾಗಿ ಫಲ ನಾನು ಕೊಡುವೆ.

ಮೇಲಿನ ವಾಕ್ಯ ಎಷ್ಟು ಅರ್ಥಪೂರ್ಣವಾಗಿದೆ. ಒಳ್ಳೆಯ ಕರ್ಮ ಮಾಡಪ್ಪ ಒಳ್ಳೆಯ ಕರ್ಮ ಅನುಭವಿಸ್ತೀಯ ಅಂತ ಕೃಷ್ಣ ಪರಮಾತ್ಮ ಭಗವದ್ಗೀತೆಯ ಪ್ರಾರಂಭದಲ್ಲಿ ಹೇಳಿದ್ದಾನೆ. ಆದರೆ ನಾವು ಬಹುತೇಕರು ಹಾಗಲ್ಲ, ದುಷ್ಕರ್ಮ ಮಾಡ್ತೇವೆ ಸತ್ಫಲ ಬೇಡ್ತೇವೆ. ಮಠಕ್ಕೆ ಗುಡಿಮಂದಿರಗಳಿಗೆ ಹೋಗ್ತೇವೆ ದೇವರನ್ನು ಕಣ್ತುಂಬ ನೋಡುವದನ್ನ ಬಿಟ್ಟು ಉಳಿದೆಲ್ಲವನ್ನು ಮಾಡ್ತೇವೆ. ಏನಾದರು ಕೆಟ್ಟದಾಯ್ತು ಎಂದರೆ ದೇವರಿಗೆ ಬೈಯ್ಯೋದು, ಗುಡಿಗೆ ಬಂದು ನಿನ್ನ ದರ್ಶನ ಪಡೆದು ಹೋಗ್ತಿದ್ದೆ ಅಂತ ಬೇರೆ ಹೇಳೋದು. ನಿಜಕ್ಕು ಅದು ತಪ್ಪು. 

ನಿಮ್ಮ ಪಾಲಿಗೆ ಬಂದ ಕರ್ತವ್ಯ ನೀವು ಅಚ್ಚುಕಟ್ಟಾಗಿ ನಿಭಾಯಿಸಿ. ಊಟ ಹೇಗೆ ನಿಮಗೆ ಹೊಟ್ಟೆಗೆ ಹಿಡಿದಷ್ಟು ಮಾಡ್ತೀರೋ ಹಾಗೆ ನಿಮ್ಮ ಕರ್ಮ ನೀವು ಮಾಡಿ. ಉಳಿದವರ ಕರ್ಮ ನೋಡಬೇಡಿ(ಉತ್ತಮರ ಕರ್ಮ ನೋಡಿ.ಅದರಿಂದ ಜ್ಞಾನ ಪಡೆಯಿರಿ. ಡಾಂಭಿಕರ, ಅಧರ್ಮೀಯರ ಕರ್ಮ ನೋಡಬೇಡಿ). ಆಗ ಫಲದ ಅನುಭವ ನೋಡಿ. 

ಗೋಮಾತೆ ಹುಲ್ಲು ತಿನ್ನುವುದು, ದೇವರಿಗೆ ಹುಲ್ಲು ಕೊಡು ಅಂತ ಕೇಳುವದಿಲ್ಲ. ಆದ್ದರಿಂದ ದೇವರು ಕೊಡುವಂತಹ ಫಲ ಅಮೃತ ಕ್ಷೀರ. ಆದ್ದರಿಂದ ಜಗತ್ತಿನಾದ್ಯಂತ ಗೋಮಾತೆಯ ಹಾಲಿನ ಬೇಡಿಕೆ ಬಹಳ ಇದೆ. 
ಅದೇ ವ್ಯಾಘ್ರವನ್ನು ನೋಡಿ, ಹೊಂಚು ಹಾಕಿ ಅಡುಗಿ ಕುಳಿತು ಇನ್ನೊಂದು ಪ್ರಾಣವನ್ನು ತೆಗೆದುಕೊಳ್ಳುವದು. ಅದಕ್ಕೆ ಅದಕ್ಕೆ‌ ಮಾಡಿಕೊಳ್ಳಲು ಸಮಯವನ್ನು ದೇವರು ನೀಡಿಲ್ಲ. 

ಉತ್ತಮ ಕರ್ಮ ಮಾಡಿ, ಉತ್ತಮ ಫಲ ಪಡೆಯಿರಿ.

ಶ್ರೀಕೃಷ್ಣಾರ್ಪಣಮಸ್ತು
*************


ಭಗವಂತನಾದ  ಶ್ರೀಕೃಷ್ಣ  ಪರಮಾತ್ಮ  ಗೀತೆ  ಯಲ್ಲಿ  ಸ್ಪಷ್ಟವಾಗಿ  ಹೇಳಿದ್ದಾನೆ.

ದೇಹಿನೋಸ್ಮಿನ್  ಯಥಾದೇಹೇ
ಕೌಮಾರಂ  ಯೌವನಂ  ಜರಾ !
ತಥಾ  ದೇಹಾಂತರ  ಪ್ರಾಪ್ತಿ ರ್ಧೀರಸ್ತತ್ರನ  ಮುಹ್ಯತಿ

ಈ  ಶರೀರದ  ಮೂಲಕ  ಜೀವಾತ್ಮನಿಗೆ  ಬಾಲ್ಯ,  ಯೌವನ,  ಮುಪ್ಪು  ಹೇಗೆ  ಬರುತ್ತದೆಯೋ  ಹಾಗೆಯೇ  ಮತ್ತೊಂದು  ಶರೀರವೂ  ಬರುತ್ತದೆ.  ದ್ಯೆರ್ಯವಂತರಾದ  ಜ್ಞಾನಿಗಳು  ಈ  ವಿಷಯದಬಗ್ಗೆ  ಮೋಹ  ಗೊಳ್ಳುವುದಿಲ್ಲ.

ಈ  ವಿಷಯ  ತಿಳಿದೂ  ನಾವು,  ನಾನು  ನನ್ನದು  ಯನ್ನುವ  ಬ್ರಾಂತಿಯಲ್ಲೇ  ಇರುತ್ತೀವೆಂದರೆ ?  ಈ  ಜೀವನಕ್ಕೆ  ಅರ್ಥ  ವೇನಿದೆ ?
ಮತ್ತೊಂದು  ವಿಷಯನೂ  ಭಗವಂತ  ಹೇಳುತ್ತಾನೆ.

ವಾಸಾಂಸಿ  ಜೀರ್ಣಾನಿ  ಯಥಾವಿಹಾಯ
ನವಾನಿ  ಗೃಹ್ಣಾತಿ  ನರೋ$ಪರಾಣಿ !
ತಥಾ  ಶರೀರಾಣಿ  ವಿಹಾಯ  ಜೀರ್ಣಾನ್ಯನ್ಯಾನಿ  ಸಂಯಾತಿ  ನವಾನಿ  ದೇಹೀ.

ಹಳೆಯ  ಬಟ್ಟೆಗಳನ್ನು  ಬಿಟ್ಟು  ಹೊಸಬಟ್ಟೆಗಳನ್ನು  ಧರಿಸುವಂತೆ  ಆತ್ಮವು  ಜೀರ್ಣವಾದ  ಶರೀರಗಳನ್ನು  ತೊರೆದು  ಹೊಸ  ಶರೀರವನ್ನು  ಪ್ರವೇಶಿಸುತ್ತದೆ.

ನೋಡಿ  ಈ  ಶರೀರಕ್ಕಾಗಿ  ಪರೆದಾಡಿ,  ನಾನಾ  ಬಗೆಯ  ತಾಪತ್ರಯಗಳನ್ನು  ಪಡುತ್ತಾ,  ಜನರನ್ನು  ವಂಚಿಸುತ್ತಾ,  ನಾನಾ  ಬಗೆಯ  ಆಸೆಗಳನ್ನು  ಮನದಲ್ಲಿ  ತುಂಬಿಕೊಂಡು,  ಆಸ್ತಿ,  ವೊಡವೆ,  ಬಂಗಲೆ,  ಕಾರು,  ನಾನು,  ನನ್ನವರು  ಯಂಬ  ಮೋಹದಲ್ಲಿ  ಸಿಲುಕಿ,  ಕೊನೆಗೆ  ಆ  ಆಸ್ತಿ - ಪಾಸ್ತಿಗಾಗಿ  ಜಗಳವಾಡಿ,  ಮನಸ್ಸಿಗೆ  ನೆಮ್ಮದಿಯಿಲ್ಲದೇ,  ಭಗವಂತನ  ನಾಮಸ್ಮರಣೆ  ಮಾಡಲು  ಸಮಯವಿಲ್ಲದೇ,  ಯಾವುದೋ  ದುರಾಲೋಚನೆ  ಮಾಡುತ್ತಾ  ಈ  ದೇಹತ್ಯಾಗ  ಮಾಡಿದರೇ,  ಬರುವ  ಜನ್ಮದಲ್ಲಿ  ನಮ್ಮ  ಕೊನೆಯ  ಆಸೆಗಳನ್ನು  ಈಡೇರಿಸಲು  ಭಗವಂತ  ಸಿದ್ಧನಾಗಿರುತ್ತಾನೆ.

ಆ  ಬರುವ  ಮುಂದಿನ  ಜನ್ಮದಲ್ಲಾದರೂ  ಆನಂದದಿಂದ  ಇರಲು  ಸಾಧ್ಯವೇ ?

ಅದಕ್ಕಾಗಿ  ನಮ್ಮ  ಅವಸರಕ್ಕಾಗಿ  ಎಷ್ಟುಬೇಕೋ  ಅಷ್ಟನ್ನುಮಾತ್ರ  ಗಳಿಸುತ್ತಾ  ಆನಂದದಿಂದಾ  ಭಗವಂತನ  ನಾಮಸ್ಮರಣೆ  ಮಾಡುತ್ತಾ,  ನಾಲ್ಕು  ಜನರಿಗೆ  ನಮ್ಮಗೆ  ತೋಚಿದಹಾಗೆ  ಸಹಾಯವನ್ನು  ಮಾಡುತ್ತಾ,  ಈ  ದೇಹ  ಮಾಯವಾದರೂ,  ಹೆಸರುಮಾತ್ರ  ಹಾಗೆ  ಉಳಿಯುವಹಾಗೆ  ಪ್ರಯತ್ನ  ಪಡೋಣ.  ನಾವು  ಸಂತೋಷದಿಂದ  ಇರೋಣ,  ಮತ್ತೊಬ್ಬರನ್ನು  ಸಂತೋಷದಿಂದ  ಇರಲು  ಪ್ರಯತ್ನಿಸೋಣ.

ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು
*****

ಅಧ್ಯಾಯ - 10: ಶ್ಲೋಕ – 11
ತೇಷಾಮೇವಾನುಕಂಪಾರ್ಥಮಹಮಜ್ಞಾನಜಂತಮಃ।ನಾಶಯಾಮ್ಯಾತ್ಮಭಾವಸ್ಥೋ ಜ್ಞಾನದೀಪೇನ ಭಾಸ್ವತಾ ॥೧೧॥


ನಾನು ಅವರ ಮೇಲಣ ಕನಿಕರದಿಂದಲೆ, ಅವರ ಬಗೆಯಲ್ಲಿ ನೆಲೆನಿಂತು, ಬೆಳಗುವ ಅರಿವಿನ ಪಂಜಿನಿಂದ ಅಜ್ಞಾನದಿಂದ ಕವಿದ ಕತ್ತಲನ್ನು ಹೋಗಲಾಡಿಸುತ್ತೇನೆ.

ಭಗವಂತ ನಮ್ಮನ್ನು ಉದ್ಧರಿಸುವುದು ಯಾವುದೋ ಸ್ವಾರ್ಥಕ್ಕಾಗಿ ಅಲ್ಲ. ಬದಲಿಗೆ ನಮ್ಮ ಮೇಲಿನ ಕರುಣೆಯಿಂದ. ತನ್ನನ್ನು ಅನನ್ಯ ಭಕ್ತಿಯಿಂದ ಭಜಿಸಿ ಆರಾಧನೆ ಮಾಡುವ ಭಕ್ತನ ಮೇಲಿನ ಅನುಕಂಪದಿಂದ ಆತ ನಮ್ಮನ್ನು ಉದ್ಧರಿಸುತ್ತಾನೆ. ಆತ ನಮಗೆ ಕೇವಲ ಬುದ್ಧಿ ಕೊಡುವುದಷ್ಟೇ ಅಲ್ಲ, ನಮ್ಮ ಬುದ್ಧಿಯನ್ನು ಸದಾ ಕವಿದಿರುವ ತಮಸ್ಸಿನ(ಅಜ್ಞಾನದ) ಪೊರೆಯನ್ನು ಕಳಚುವವನೂ ಅವನೆ. ಭಗವಂತನ ಸಹಾಯವಿಲ್ಲದೆ ನಮ್ಮ ಮನಸ್ಸು-ಬುದ್ಧಿಗೆ ಕವಿದಿರುವ ಅಜ್ಞಾನದ ಪೊರೆಯನ್ನು ನಾವೇ ನೀಗಿಸಿಕೊಳ್ಳಲು ಸಾಧ್ಯವಿಲ್ಲ. ತ್ರಿಗುಣಾತೀತ ಭಗವಂತನೊಬ್ಬನೆ ಈ ಕತ್ತಲನ್ನು ಕಳೆಯಬಲ್ಲ. ಇದರಿಂದ ನಾವು ಯಥಾರ್ಥವನ್ನು ಯಥಾರ್ಥವಾಗಿ ಗ್ರಹಣ ಮಾಡಬಹುದು. ಭಗವಂತ ನಮ್ಮ ಭಾವದಲ್ಲಿ-ಭಕ್ತಿಯಲ್ಲಿ ತುಂಬಿ, ನಮ್ಮ ಸ್ವರೂಪ ಜಾಗೃತಗೊಳಿಸಿ, ಕೃಪೆಯ ದೃಷ್ಟಿ ಬೀರಿ, ಎಲ್ಲ ವಿಧದಿಂದ ಬೆಳಕು ನೀಡಿ, ಯಥಾರ್ಥವನ್ನು ಕಾಣುವಂತೆ ಮಾಡುತ್ತಾನೆ. ಇದಕ್ಕಾಗಿ ‘ನನ್ನೊಳಗಿನ ಕತ್ತಲನ್ನು ನೀಗು ಭಗವಂತ’ ಎಂದು ನಾವು ಆತನಲ್ಲಿ ಶರಣಾಗಬೇಕು. ಒಳಗೆ ಕತ್ತಲನ್ನು ಇಟ್ಟುಕೊಂಡು ಎಷ್ಟು ಅಧ್ಯಯನ ಮಾಡಿದರೂ ಉಪಯೋಗವಿಲ್ಲ. ಶಾಸ್ತ ಓದಿದಾಗ ಯಥಾರ್ಥ ತಿಳಿಯಬೇಕಾದರೆ ಭಗವಂತನಲ್ಲಿ ಶರಣಾಗತಿ ಮುಖ್ಯ.

ಈ ಹಂತದಲ್ಲಿ ಅರ್ಜುನ ಕೃಷ್ಣನ ಉಪದೇಶ ಕೇಳಿ ಮೈಮರೆತು ಹೋದ. ಆತನಿಗೆ ತಾನು ಯುದ್ಧರಂಗದಲ್ಲಿ ನಿಂತಿದ್ದೇನೆ ಎನ್ನುವ ವಿಚಾರವೇ ಮರೆತು ಹೋಗಿ, ಕೇವಲ ಕೃಷ್ಣನೊಬ್ಬನೆ ಕಾಣಲಾರಂಭಿಸುತ್ತಾನೆ. ಮುಂದಿನ ನಾಲ್ಕು ಶ್ಲೋಕದಲ್ಲಿ ಅರ್ಜುನ ಭಗವಂತನ ಅನಂತ ಶಕ್ತಿಯ ಪಾರಮ್ಯದ ಅನುಸಂಧಾನವನ್ನು ವ್ಯಕ್ತಪಡಿಸುವುದನ್ನು ಕಾಣುತ್ತೇವೆ.

तेषामेवानुकम्पार्थमहमज्ञानजं तमः।
नाशयाम्यात्मभावस्थो ज्ञानदीपेन भास्वता॥

हे अर्जुन! उनके ऊपर अनुग्रह करने के लिए उनके अंतःकरण में स्थित हुआ मैं स्वयं ही उनके अज्ञानजनित अंधकार को प्रकाशमय तत्त्वज्ञानरूप दीपक के द्वारा नष्ट कर देता हूँ

Teshaam evaanukampaartham aham ajnaanajam tamah;
Naashayaamyaatmabhaavastho jnaanadeepena bhaaswataa.


Out of mere compassion for them, I, dwelling within their Self, destroy the darknessborn of ignorance by the luminous lamp of knowledge.

BHAGAVAD-GITA🍁
ಅಧ್ಯಾಯ - 10: ಶ್ಲೋಕ – 12,13

ಅರ್ಜುನ ಉವಾಚ ।
ಪರಂ ಬ್ರಹ್ಮ ಪರಂ ಧಾಮ ಪವಿತ್ರಂ ಪರಮಂ ಭವಾನ್ ।
ಪುರುಷಂ ಶಾಶ್ವತಂ ದಿವ್ಯಮಾದಿದೇವಮಜಂ ವಿಭುಮ್ ॥೧೨॥

ಆಹುಸ್ತ್ವಾಮೃಷಯಃ ಸರ್ವೇ ದೇವರ್ಷಿರ್ನಾರದಸ್ತಥಾ ।
ಅಸಿತೋ ದೇವಲೋ ವ್ಯಾಸಃ ಸ್ವಯಂ ಚೈವ ಬ್ರವೀಷಿ ಮೇ ॥೧೩॥

ಅರ್ಜುನಃ ಉವಾಚ--ಅರ್ಜುನನು ಹೇಳಿದನು:

ಪೂಜ್ಯನಾದ ನೀನು ಹಿರಿದಕ್ಕಿಂತ ಹಿರಿಯ ತತ್ವ. ಹಿರಿಯ ಆಸರೆ. ಪಾವನಗಳಿಗೂ ಪಾವನ. ನಿನ್ನನ್ನು ಗುಣಪೂರ್ಣನಾದ, ಪರಮ ‘ಪುರುಷ’ನೆಂದು, ಬದಲಾಗದವನೆಂದು, ಲೀಲಾಮಯನೆಂದು, ಎಲ್ಲ ದೇವತೆಗಳಿಗೂ ಮೊದಲಿಗನೆಂದು, ಜನ್ಮರಹಿತನೆಂದು, ಬಗೆಬಗೆಯ ರೂಪಗಳಿಂದ ಎಲ್ಲೆಡೆ ತುಂಬಿರುವವನೆಂದು ಬಲ್ಲವರೆಲ್ಲ ಹೊಗಳುತ್ತಾರೆ. ದೇವರ್ಷಿ ನಾರದ ಕೂಡ. ಅಸಿತ-ದೇವಲರು ಕೂಡ. ವ್ಯಾಸ ಮುನಿ ಹೇಳಿದ್ದುಂಟು. ಸ್ವತಃ ನೀನೂ ನನಗೆ ಹೇಳುತಿದ್ದೀಯಾ.
ಇಲ್ಲಿ ಅರ್ಜುನ ಕೃಷ್ಣನನ್ನು “ಪರಂಬ್ರಹ್ಮ, ಪರಂಧಾಮ, ಪರಮಪವಿತ್ರ ನೀನು” ಎಂದು ಸಂಬೋಧಿಸುತ್ತಾನೆ. ಯಾವುದು ಎಲ್ಲವುದಕ್ಕಿಂತ ದೊಡ್ಡದೋ ಅದು ಬ್ರಹ್ಮ. ಬ್ರಹ್ಮ ಅನ್ನುವ ಪದವನ್ನು ಇನ್ನೂ ಅನೇಕ ಅರ್ಥದಲ್ಲಿ ಬಳಸುತ್ತಾರೆ. ಅದಕ್ಕಾಗಿ ಇಲ್ಲಿ ಸ್ಪಷ್ಟತೆಗಾಗಿ ‘ಪರಂ ಬ್ರಹ್ಮ’ ಎಂದಿದ್ದಾರೆ. “ಎಲ್ಲಕ್ಕಿಂತ ದೊಡ್ಡವ ಮತ್ತು ನಂಬಿದವರನ್ನು ಎತ್ತರಕ್ಕೇರಿಸುವ ನೀನು ಪರಿಪೂರ್ಣ. ನಾನು ನನ್ನ ವ್ಯಕ್ತಿತ್ವದ ಪೂರ್ಣತೆಯನ್ನು ಕಾಣಲು ನಿನ್ನ ಅನುಗ್ರಹ ಬೇಕು” ಎನ್ನುವ ಧ್ವನಿ ಈ ಸಂಬೋಧನೆಯಲ್ಲಿದೆ. ಇನ್ನು ಪರಂ ಧಾಮ: ‘ಧಾಮ’ ಅಂದರೆ ಆಶ್ರಯ. ಭಗವಂತನನ್ನು ಆಶ್ರಯಿಸದೆ ಇರುವ ಒಂದು ವಸ್ತು ಈ ಜಗತ್ತಿನಲ್ಲಿಲ್ಲ. “ನೀನು ಸರ್ವಸ್ವತಂತ್ರ, ಮತ್ತು ನಾವೆಲ್ಲರೂ ನಿನ್ನ ಅಧೀನ, ನೀನು ಆಶ್ರಯಧಾತ ಮತ್ತು ನಾವು ಆಶ್ರಿತರು” ಎನ್ನುವ ಅರ್ಥದಲ್ಲಿ ಅರ್ಜುನ ಕೃಷ್ಣನನ್ನು ‘ಪರಂ ಧಾಮ’ ಎಂದಿದ್ದಾನೆ. ತತ್ವಾಭಿಮಾನಿ ದೇವತೆಗಳು ಒಂದೊಂದು ರೂಪದಲ್ಲಿ ನಮಗೆ ಆಶ್ರಯ ನೀಡುತ್ತಾರೆ. ಆದರೆ ಇಂತಹ ದೇವತೆಗಳಿಗೂ ಆಶ್ರಯಧಾತನಾಗಿರುವ ಭಗವಂತ ಪರಂ ಧಾಮ. ಸಮಸ್ತ ಜೀವರ ಅನಂತ ಯಾತ್ರೆಯಲ್ಲಿ ಆಶ್ರಯಧಾತನಾಗಿ ಉದ್ಧಾರ ಮಾಡುವ ಭಗವಂತ ಸರ್ವಾಶ್ರಯಧಾತ.
ಭಗವಂತ ‘ಪರಮಪವಿತ್ರ’. ಇಂತಹ ಭಗವಂತನನ್ನು ನಾವು ಪವಿತ್ರತೆಯ ಪ್ರತೀಕವಾದ ಅಗ್ನಿ ಮುಖೇನ ಉಪಾಸನೆ ಮಾಡುತ್ತೇವೆ. ಅಗ್ನಿ ಸ್ವಯಂ ಪವಿತ್ರ ಮತ್ತು ಅದು ಎಂದೂ ಕೊಳಕಾಗುವುದಿಲ್ಲ. ಅಗ್ನಿ ತನ್ನ ಸ್ಪರ್ಶಕ್ಕೆ ಬಂದ ವಸ್ತುವನ್ನು ಕೊಳೆರಹಿತ ಮಾಡುತ್ತದೆ. ಭಗವಂತ ನಮ್ಮನ್ನು ಮತ್ತು ಪ್ರಪಂಚವನ್ನು ಪಾವನಗೊಳಿಸುವ ಪರಮಶಕ್ತಿ.
ಅರ್ಜುನ ಇಲ್ಲಿ ತನ್ನೆಲ್ಲಾ ಭೌತಿಕ ಸಂಬಂಧವನ್ನು ಮೀರಿ ತನ್ನೆದುರು ನಿಂತಿರುವ ಆ ಪರಬ್ರಹ್ಮನನ್ನು ಕಾಣುತ್ತಿದ್ದಾನೆ. “ನನ್ನಲ್ಲಿ ಕೊಳೆ ತುಂಬಿದೆ, ಅಸೂಯೆ ಅಸಹನೆ ತುಂಬಿದೆ. ನಿನ್ನ ಅನುಗ್ರಹದಿಂದ, ಆಶ್ರಯದಿಂದ ನಾನು ಪವಿತ್ರನಾಗಬೇಕು. ನಿನ್ನಿಂದ ನಾನು ಆ ಎತ್ತರಕ್ಕೇರಿ ನನ್ನ ಪೂರ್ಣತೆಯನ್ನು ಪಡೆಯಬೇಕು” ಎನ್ನುವ ಬಯಕೆ ಅರ್ಜುನನ ಈ ಸಂಬೋಧನೆಯಲ್ಲಿದೆ.
ಕೆಲವೊಮ್ಮೆ ನಾವು ಉದ್ವೇಗದಿಂದ ಅತಿಶಯವಾಗಿ ಮಾತನಾಡುತ್ತೇವೆ. ಇಲ್ಲಿ ಅರ್ಜುನ ತಾನು ಉದ್ವೇಗದಿಂದ ಮಾತನಾಡುತ್ತಿಲ್ಲ ಎನ್ನುವುದನ್ನು ಖಚಿತಪಡಿಸಿಕೊಳ್ಳುತ್ತಾನೆ. ಒಬ್ಬ ಸಾಧಕನಿಗೆ ದೇವರ ಉಪಾಸನೆಯಲ್ಲಿ ಇದು ಬಹಳ ಮುಖ್ಯ ಅಂಶ. ಏಕೆಂದರೆ ನಾವು ದೇವರ ಬಗ್ಗೆ ಏನು ಕಲ್ಪನೆ ಮಾಡಿದರೂ ಅದು ಕೇವಲ ಕಲ್ಪನೆ ಹೊರತು ಸಾಕ್ಷಾತ್ಕಾರವಲ್ಲ. ನಮ್ಮ ಕಲ್ಪನೆ ನಮ್ಮ ಮನಸ್ಸಿನ ಸ್ಥಿತಿಯನ್ನು ಹೊಂದಿಕೊಂಡಿರುತ್ತದೆ. ಮನಸ್ಸಿನಲ್ಲಿ ಉತ್ಸಾಹ ಇದ್ದಾಗ ಏನೇನೋ ಹೊಸ-ಹೊಸ ಕಲ್ಪನೆಗಳು ಬರುತ್ತವೆ. ಅವೆಲ್ಲವೂ ಸತ್ಯವಾಗಿರಬೇಕೆಂದಿಲ್ಲ. ಹಾಗಾಗಿ ಅವರವರ ಬುದ್ಧಿ ಮಟ್ಟಕ್ಕೆ ತಕ್ಕಂತೆ ಅವರವರ ಕಲ್ಪನೆ ಹೊರತು ಭಗವಂತ ಹೇಗಿದ್ದಾನೆ ಹಾಗೆ ನಮ್ಮ ಕಲ್ಪನೆ ಇರುವುದಿಲ್ಲ. ಈ ಕಾರಣದಿಂದ ಇಲ್ಲಿ ಅರ್ಜುನ ತನಗೆ ಬಂದ ವಿಚಾರ ತನ್ನ ಬುದ್ಧಿಮಟ್ಟದ ಕಲ್ಪನೆಯಲ್ಲ ಇದು ವಸ್ತುಸ್ಥಿತಿ ಎನ್ನುವುದನ್ನು ಖಚಿತಪಡಿಸಿಕೊಳ್ಳುತ್ತಾನೆ. ಆತ ಋಷಿಗಳು, ದೇವರ್ಷಿ ನಾರದರು ಹೇಳಿರುವ ಮಾತನ್ನು ಇಲ್ಲಿ ನೆನಪಿಸಿಕೊಳ್ಳುತ್ತಾನೆ.
ಅರ್ಜುನ ಹೇಳುತ್ತಾನೆ “ನಿನ್ನನ್ನು ಪುರುಷಃ, ಶಾಶ್ವತಃ, ದಿವ್ಯಃ, ಆದಿದೇವಃ ಅಜಃ , ವಿಭುಃ ಎಂದು ಈ ಮಹಾತ್ಮರು ಹೇಳಿದ್ದಾರೆ” ಎಂದು. ಇಲ್ಲಿ ಬಳಸಿರುವ ಒಂದೊಂದು ಪದದಲ್ಲಿ ಭಗವಂತನ ಅನಂತ ಗುಣ ಅಡಗಿದೆ. ವಿಷ್ಣುಸಹಸ್ರನಾಮದಲ್ಲಿ ಈ ಎಲ್ಲಾ ಪದಗಳನ್ನು ಭಗವಂತನ ನಾಮವಾಗಿ ನಾವು ಕಾಣುತ್ತೇವೆ. ಬನ್ನಿ, ಇಲ್ಲಿ ಸಂಕ್ಷಿಪ್ತವಾಗಿ ಈ ಪದಗಳ ಅರ್ಥಾನುಸಂಧಾನ ಮಾಡೋಣ:
ಪುರುಷಃ : ಇಲ್ಲಿ ಪುರುಷ ಎಂದರೆ ಗಂಡಸು ಎನ್ನುವ ಅರ್ಥವಲ್ಲ. ಪುರದಲ್ಲಿ ವಾಸಿಸುವವನು ‘ಪುರುಷಃ’. ಸಮಸ್ತ ವೇದಗಳ ಸಾರಭೂತವಾದ ಸೂಕ್ತಗಳ ರಾಜ ‘ಪುರುಷಸೂಕ್ತ’ ಭಗವಂತನನ್ನು ‘ಸಹಸ್ರ ಶೀರ್ಷಾ ಪುರುಷಃ' ಎಂದು ಕರೆದಿದೆ. ಸೃಷ್ಟಿ ಕಾಲದಲ್ಲಿ ಏನೂ ಇಲ್ಲದಾಗಲೂ ಇದ್ದು, ಈ ಸೃಷ್ಟಿಯನ್ನು ನಿರ್ಮಾಣ ಮಾಡಿದ ಭಗವಂತ ಪುರಾ+ಷಃ. ಪ್ರಳಯ ಕಾಲದಲ್ಲಿ ಎಲ್ಲವನ್ನೂ ಸುಟ್ಟ ಭಗವಂತ ಪುರ-ಉಷ. ಪ್ರಪಂಚದಲ್ಲಿ ಅನಂತವಾಗಿ, ಅನಂತ ಕಾಲ, ಅನಂತ ಸಾಮರ್ಥ್ಯ, ಅನಂತ ಗುಣಗಳಿಂದ ತುಂಬಿರುವ ಭಗವಂತ ಪುರ-ಸಹ. ಪ್ರಳಯ ಕಾಲದಲ್ಲಿ ಏನೂ ಇಲ್ಲದಾಗ ಇದ್ದು, ಸೃಷ್ಟಿ ಕಾಲದಲ್ಲಿ ತನ್ನ ನಾಭಿಯಿಂದ ಒಂದೊಂದನ್ನು ಸೃಷ್ಟಿ ಮಾಡಿದ ಭಗವಂತ, ಮೊದಲು "ಮಹತತ್ವವನ್ನು" ಸೃಷ್ಟಿ ಮಾಡಿದ. ಮಹತತ್ವ ಎಂದರೆ ಇಡೀ ಪ್ರಪಂಚದ ಭೂತಪ್ರಜ್ಞೆ ಜಾಗೃತಿ. ಹಿಂದೆ ಇದ್ದ ಸಮಸ್ತ ಸೃಷ್ಟಿಯ ಸ್ಮರಣೆಯನ್ನು ಚಿತ್ತಾಭಿಮಾನಿ ಬ್ರಹ್ಮ-ವಾಯುವಿಗೆ ಕೊಟ್ಟು, ಸೂಕ್ಷ್ಮ ರೂಪದ ಪ್ರಪಂಚ ನಿರ್ಮಾಣ. ನಂತರ ದೇವತೆಗಳು, ಪಂಚಭೂತಗಳ ನಿರ್ಮಾಣ. ಹೀಗೆ ನಿರ್ಮಾಣವಾದ ಸ್ಥೂಲ ಬ್ರಹ್ಮಾಂಡದೊಳಗೆ ಭಗವಂತ ತುಂಬಿಕೊಂಡ. ಒಂದೊಂದು ಪಿಂಡಾಂಡದೊಳಗೆ ಒಂದೊಂದು ರೂಪದಲ್ಲಿ ಬಿಂಬ ರೂಪನಾಗಿ ತುಂಬಿ ಆ ಪಿಂಡಾಂಡದಿಂದ ಮಾಡಿಸಬೇಕಾದ ಕಾರ್ಯವನ್ನು ಮಾಡಿಸಿ, ಮೋಕ್ಷವನ್ನು ಕರುಣಿಸುವ ಭಗವಂತ ಪುರುಷಃ. ಹೀಗೆ ಸೃಷ್ಟಿಯ ಮೊದಲು, ಸೃಷ್ಟಿಯ ಕಾಲದಲ್ಲಿ, ಸೃಷ್ಟವಾದ ವಸ್ತುವಿನೊಳಗೆ, ಸೃಷ್ಟಿಯ ಸಾಧನೆಯಲ್ಲಿ, ಸಾಧನೆಯಿಂದ ಮುಕ್ತಿಯ ತನಕ ಎಲ್ಲೆಡೆ ಇರುವ ಈ ಹೃತ್ಕಮಲ ಮಧ್ಯ ನಿವಾಸಿ ಭಗವಂತ, ಪೂರ್ಣವಾದ ಷಡ್ಗುಣಗಳಿಂದ ತುಂಬಿರುವ ಜ್ಞಾನಾನಂದ ಸ್ವರೂಪ. ಪು+ರು+ಷಃ=ಪುರುಷಃ; ಇಲ್ಲಿ 'ಪು' ಎಂದರೆ ನಮ್ಮನ್ನು ಪಾವನಗೊಳಿಸುವ ಪರಮಪವಿತ್ರ. 'ರು' ಎಂದರೆ 'ರುವಂತಿ' , ಪ್ರಪಂಚದ ಎಲ್ಲಾ ಶಬ್ದಗಳಿಂದ ವಾಚ್ಯನಾದವನು. 'ಷಃ' ಅಥವಾ 'ಸಹ' ಎಂದರೆ ಎಲ್ಲಾ ವಸ್ತುಗಳೊಳಗೆ ತುಂಬಿರುವ ಸರ್ವಾಂತರ್ಯಾಮಿ ತತ್ವ. ಹೀಗೆ ಪುರುಷಃ ಎನ್ನುವ ಭಗವಂತನ ನಾಮ ಅನೇಕ ರೀತಿಯಲ್ಲಿ ಭಗವಂತನ ಗುಣಾನುಸಂಧಾನ ಮಾಡುವ ನಾಮ.
ಶಾಶ್ವತಃ: ಅನಾದಿ ಅನಂತ ಕಾಲದಲ್ಲಿ ಯಾವುದೇ ಬದಲಾವಣೆಗೆ ಒಳಪಡದೆ, ಎಂದೆಂದೂ ಶಾಶ್ವತವಾಗಿರುವ ಆನಂದಸ್ವರೂಪ ಭಗವಂತ ಶಾಶ್ವತಃ .
ದಿವ್ಯಃ : ದಿವ್ಯ ಪದಕ್ಕೆ ಅನೇಕ ಅರ್ಥಗಳಿವೆ. ಮೂಲವಾಗಿ ದಿವ್ಯ ಅಥವಾ ‘ದೇವರು’ ಈ ಪದಗಳು ‘ದಿವು’ ಎನ್ನುವ ದಾತುವಿನಿಂದ ಬಂದಿರುವುದು. ಪ್ರಾಚೀನ ದಾತು ಪಾಠದಲ್ಲಿ ಈ ದಾತುವಿಗೆ ಏಳು ಅರ್ಥವನ್ನು ನೋಡಬಹುದು; ಅವುಗಳೆಂದರೆ: ೧) ಧ್ಯುತಿ ೨) ವಿಜಿಗೀಶ ೩) ಕಾಂತಿ ೪) ಸ್ತುತಿ ೫) ವ್ಯವಹಾರ ೬) ಕ್ರೀಡಾ ೭) ಗತಿಶು.
೧) ಧ್ಯುತಿ : ಧ್ಯುತಿ ಅಂದರೆ ಬೆಳಕಿನ ಸ್ವರೂಪ. ಬೆಳಕಿನ ಪುಂಜವಾದ ಸೂರ್ಯ ಚಂದ್ರಾದಿಗಳಿಗೆ ಬೆಳಕನ್ನೀಯುವ ಭಗವಂತ ನಮ್ಮೊಳಗೆ ಜ್ಞಾನದ ಬೆಳಕನ್ನು ತುಂಬುತ್ತಾನೆ.
೨) ವಿಜಿಗೀಶ: ಭಗವಂತ ಎಲ್ಲರಿಗಿಂತ ಎತ್ತರದಲ್ಲಿರುವವನು ಹಾಗು ಗೆಲುವಿನ ಸ್ವರೂಪ.
೩) ಕಾಂತಿ: ಕೇವಲ ಇಚ್ಚೆಯಿಂದ ಸೃಷ್ಟಿ ಮಾಡಬಲ್ಲವ. ನಮಗೆ ಇಚ್ಚೆಯನ್ನು ಕೊಟ್ಟವ ಹಾಗು ಅದನ್ನು ಅವರವರ ಯೋಗ್ಯತೆಗೆ ತಕ್ಕಂತೆ ಪೂರೈಸುವವ.
೪) ಸ್ತುತಿ: ಎಲ್ಲರಿಂದ ಸ್ತುತನಾದವನು; ಎಲ್ಲರೂ ಯಾರನ್ನು ಸ್ತುತಿಸುತ್ತಾರೋ ಅವನು ಸರ್ವಶಬ್ದ ವಾಚ್ಯನಾದ ಭಗವಂತ.
೫) ವ್ಯವಹಾರ: ಜಗತ್ತಿನ ಸಮಸ್ತ ವ್ಯವಹಾರವನ್ನು ನಿರ್ವಹಿಸುವವ.
೬) ಕ್ರೀಡಾ: ಸೃಷ್ಟಿ-ಸ್ಥಿತಿ-ಸಂಹಾರ ಇದು ಭಗವಂತನಿಗೊಂದು ಕ್ರೀಡೆ.
೭) ಗತಿಶು: ಚಲನೆ ಮತ್ತು ಜ್ಞಾನ ಕೊಟ್ಟವ. ಯಾರು ಎಲ್ಲಾ ಕಡೆ ಗತನಾಗಿದ್ದಾನೋ; ಎಲ್ಲವನ್ನೂ ತಿಳಿದಿದ್ದಾನೋ; ಎಲ್ಲರೊಳಗೆ ಬಿಂಬ ರೂಪದಲ್ಲಿ ನೆಲೆಸಿದ್ದಾನೋ ಅವನು ದಿವ್ಯ ಅಥವಾ 'ದೇವ'.
ಆದಿದೇವಃ: ಈ ಜಗತ್ತಿನ ಸೃಷ್ಟಿ-ಸ್ಥಿತಿ-ಸಂಹಾರ ಯಾರಿಗೆ ಲೀಲಾ ಮಾತ್ರವೋ ಆತ ಆದಿದೇವಃ. ಭಗವಂತ ಈ ಪ್ರಪಂಚ ಇರುವಾಗಲೂ, ಇಲ್ಲದಾಗಲೂ ಇರುವವ. ಆತ ಎಲ್ಲಕ್ಕಿಂತ ಎತ್ತರದಲ್ಲಿರುವವನು. ಎಲ್ಲಾ ಕಾಲದಲ್ಲೂ ಜಗತ್ತಿನ ಸರ್ವ ವ್ಯವಹಾರವನ್ನು ನಡೆಸುವವ ಆತ. ಹೀಗೆ ಎಲ್ಲವುದರ ಒಳಗಿದ್ದು, ಎಲ್ಲಾ ಕ್ರಿಯೆಗಳನ್ನು ನಡೆಸುವ ಭಗವಂತ ಆದಿದೇವಃ.
ಅಜಃ: 'ನ ಜಾಯತೇ ಇತಿ ಅಜಃ'; 'ಜ' ಎಂದರೆ ಜನನ; ಅ+ಜಃ-ಅಜಃ ಎಂದರೆ ಹುಟ್ಟಿರದವನು. ಹುಟ್ಟದವನ ಹೊಕ್ಕುಳಲ್ಲಿ ಹುಟ್ಟಿದ ಚತುರ್ಮುಖನನ್ನು ಅಜ ಎನ್ನುತ್ತಾರೆ. ಇಂತಹ ಚತುರ್ಮುಖನೊಳಗೆ ಸನ್ನಿಹಿತನಾಗಿ, ಸೃಷ್ಟಿ ಮಾಡುವ ಭಗವಂತ, ತಾನು ಹುಟ್ಟದೆ, ಎಲ್ಲವನ್ನೂ ಸೃಷ್ಟಿ ಮಾಡಿ ಸಂಹಾರ ಮಾಡುವ ಅಜಃ. ಎಲ್ಲರೂ ಭಗವಂತನ ಮಕ್ಕಳು,ಆದರೆ ಆತ ಯಾರಿಗೂ ಹುಟ್ಟಿದವನಲ್ಲ. ಏಕೆಂದರೆ ಅವನಿಗೆ ಹುಟ್ಟು-ಸಾವು ಎಂಬುದಿಲ್ಲ. ಇನ್ನು ಅಜಃ ಎಂದರೆ ಎಲ್ಲ ಕಡೆ ವ್ಯಾಪಿಸಿರುವವನು ಕೂಡಾ ಹೌದು. ಅ+ಜ-ಅಜಃ. ಇಲ್ಲಿ 'ಅ'ಎಂದರೆ 'ಅಲ್ಲ' ಅಥವಾ ಇಲ್ಲ! ಅಂದರೆ ಅವನು ನಾವು ತಿಳಿದ ಯಾವ ವಸ್ತುವೂ ಅಲ್ಲ. ಅವನಲ್ಲಿ ಯಾವ ದೋಷವೂ ಇಲ್ಲ. ಇನ್ನೊಂದು ಅರ್ಥದಲ್ಲಿ ಅಜಃ ಅಂದರೆ ಯಾರಿಂದಲೂ ಹುಟ್ಟದವನು-ಆದರೆ ಎಲ್ಲರಲ್ಲೂ ಹುಟ್ಟುವವನು! ತದ್ವಿರುದ್ದವಾದ ಅರ್ಥ ಎನ್ನುತೀರಾ? ಹೌದು, ಭಗವಂತ ಯಾರಿಂದಲೋ ಹುಟ್ಟಿ ಬರುವ ವಸ್ತುವಲ್ಲ. ಆದರೆ ಬಿಂಬ ರೂಪನಾಗಿ ಪ್ರತಿಯೊಂದು ಗರ್ಭದಲ್ಲಿ ನೆಲೆಸಿ ಏಕ ಕಾಲದಲ್ಲಿ ಅನೇಕ ರೂಪಿಯಾಗಿ ಆತ ಹುಟ್ಟುತ್ತಾನೆ. ಗರ್ಭಿಣಿಯ ಗರ್ಭದಲ್ಲಿ ಭಗವಂತ ಬಿಂಬರೂಪನಾಗಿ ನೆಲಸಿ ಜನಿಸುತ್ತಾನೆ.
ವಿಭುಃ: ವಿವಿಧ+ಭವತಿ- ಅಂದರೆ ವಿವಿಧ ರೂಪ ತೊಟ್ಟ ಅನಂತರೂಪಿ. ಸರ್ವಸಮರ್ಥನಾಗಿ ಪ್ರಪಂಚದಲ್ಲೆಲ್ಲಾ ತುಂಬಿರುವ ಭಗವಂತ ವಿಭುಃ.
ಇಲ್ಲಿ ಅರ್ಜುನ ವಿಶೇಷವಾಗಿ ದೇವರ್ಷಿ ನಾರದ, ಅಸಿತ-ದೇವಲ ಮತ್ತು ವ್ಯಾಸರ ಹೆಸರನ್ನು ಉಲ್ಲೇಖಿಸುತ್ತಾನೆ. ಏಕೆಂದರೆ ಅರ್ಜುನ ಇವರನ್ನು ಕಂಡಿದ್ದ ಮತ್ತು ಅವರು ಭಗವಂತನ ಬಗೆಗೆ ಹೇಳುವುದನ್ನು ಕೇಳಿದ್ದ. ನಾರದ ಮಹಾನ್ ಜ್ಞಾನಿ ಎನ್ನುವುದು ನಮಗೆ ತಿಳಿದಿದೆ. ದೇವತಾ ತಾರತಮ್ಯದಲ್ಲಿ ಇವರು ಹದಿನಾಲ್ಕನೇ ಮೆಟ್ಟಿಲಲ್ಲಿದ್ದಾರೆ. ಇವರು ಧರ್ಮರಾಯನ ಆಸ್ಥಾನದಲ್ಲಿ ಭಗವಂತನ ಅಗ್ರಪೂಜೆ ನಡೆದಾಗ ಬಂದು ಹರಸಿರುವ ದೇವಲೋಕದ ಋಷಿ. ನರ ಸಮುದಾಯದಲ್ಲಿರುವ ಅಜ್ಞಾನವನ್ನು ಸಂಹಾರ ಮಾಡಿ, ಭಗವಂತನ ಜ್ಞಾನವನ್ನು ಕೊಡುವ ನಾರದ, ನಮಗೆ ಸತ್ಯವನ್ನು ಹೊಳೆಸುವ ಅಂತಃಪ್ರಜ್ಞೆಯ(Intuition)ದೇವತೆ. ಆಜ್ಞಾಚಕ್ರವನ್ನು ಜಾಗೃತಗೊಳಿಸಿದಾಗ ನಮಗೆ ನಾರದರ ದರ್ಶನವಾಗುತ್ತದೆ. ಯಾವುದನ್ನು ಮಾಡಬೇಕು, ಯಾವುದನ್ನು ಮಾಡಬಾರದು ಎನ್ನುವುದನ್ನು ಅಂತರ್ದೃಷ್ಟಿಯಿಂದ ಉತ್ತರಿಸುವವರು ನಾರದರು. ಅಸಿತ-ದೇವಲರು ಮಂತ್ರದೃಷ್ಟಾರರಾದ ವೇದಕಾಲದ ಋಷಿಗಳು. ಇವರು ಧರ್ಮರಾಯನ ಸಭೆಗೆ ಬಂದು ಆತನಿಗೆ ಧರ್ಮೋಪದೇಶ ಮಾಡಿದ್ದನ್ನು ಅರ್ಜುನ ನೋಡಿದ್ದ. ಇನ್ನು ವ್ಯಾಸರು: ವೇದವನ್ನು ವಿಭಾಗ ಮಾಡಿ, ನಮಗೆ ಹದಿನೆಂಟು ಪುರಾಣವನ್ನು, ಮಹಾಭಾರತ, ಪಂಚಮವೇದವನ್ನು ಕೊಟ್ಟ ಭಗವಂತನ ಅವತಾರ. “ಈ ಎಲ್ಲಾ ಮಹಾತ್ಮರು ಏನನ್ನು ಹೇಳಿದ್ದರೂ ಅದನ್ನೇ ನೀನು ನನಗೆ ಹೇಳುತ್ತಿದ್ದೀಯ” ಎನ್ನುತ್ತಾನೆ ಅರ್ಜುನ. ಹೀಗೆ ತನಗಾಗುತ್ತಿರುವ ಅನುಭವ ಕೇವಲ ಭ್ರಮೆ ಅಲ್ಲ ಎನ್ನುವುದನ್ನು ಅರ್ಜುನ ಖಚಿತಪಡಿಸಿಕೊಳ್ಳುತ್ತಾನೆ.
ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು

( अर्जुन द्वारा भगवान की स्तुति तथा विभूति और योगशक्ति को कहने के लिए प्रार्थना )
अर्जुन उवाच
परं ब्रह्म परं धाम पवित्रं परमं भवान्‌।
पुरुषं शाश्वतं दिव्यमादिदेवमजं विभुम्‌॥
आहुस्त्वामृषयः सर्वे देवर्षिर्नारदस्तथा।
असितो देवलो व्यासः स्वयं चैव ब्रवीषि मे॥
अर्जुन बोले- आप परम ब्रह्म, परम धाम और परम पवित्र हैं, क्योंकि आपको सब ऋषिगण सनातन, दिव्य पुरुष एवं देवों का भी आदिदेव, अजन्मा और सर्वव्यापी कहते हैं। वैसे ही देवर्षि नारद तथा असित और देवल ऋषि तथा महर्षि व्यास भी कहते हैं और आप भी मेरे प्रति कहते हैं
॥12-13॥
Arjuna Uvaacha:
Param brahma param dhaama pavitram paramam bhavaan;
Purusham shaashvatam divyam aadidevamajam vibhum.
Arjuna said:
Thou art the Supreme Brahman, the supreme abode (or the supreme light), the supremepurifier, the eternal, divine Person, the primeval God, unborn and omnipresent.
Aahustwaam rishayah sarve devarshirnaaradastathaa;
Asito devalo vyaasah swayam chaiva braveeshi me.

All the sages have thus declared Thee, as also the divine sage Narada; so also Asita,Devala and Vyasa; and now Thou Thyself sayest so to me.
*******

BHAGAVAD-GITA🍁
ಧ್ಯಾಯ - 10: ಶ್ಲೋಕ – 14

ಸರ್ವಮೇತದೃತಂ ಮನ್ಯೇ ಯನ್ಮಾಂ ವದಸಿ ಕೇಶವ ।
ನಹಿ ತೇ ಭಗವನ್ ವ್ಯಕ್ತಿಂ ವಿದುರ್ದೇವಾ ನ ದಾನವಾಃ ॥೧೪॥

ಸರ್ವಮ್ ಏತತ್ ಋತಮ್ ಮನ್ಯೇ ಯತ್ ಮಾಮ್ ವದಸಿ ಕೇಶವ ।
ನ ಹಿ ತೇ ಭಗವನ್ ವ್ಯಕ್ತಿಮ್ ವಿದುಃ ದೇವಾಃ ನ ದಾನವಾಃ

ಓ ಕೇಶವ, ನೀನು ನನಗೇನು ಹೇಳಿದೆ ಅದೆಲ್ಲ ನಿಜವೆಂದು ಬಲ್ಲೆ. ಓ ಭಗವಾನ್, ನೀನು ಮೂಡಿಬಂದ ಬಗೆಯನ್ನು ದೇವತೆಗಳಾಗಲಿ, ದಾನವರಾಗಲಿ ಅರಿತವರಲ್ಲ.

“ನೀನು ಹೇಳುತ್ತಿರುವುದರಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲ ಎನ್ನುವುದನ್ನು ಬಲ್ಲೆ. ನಿನ್ನ ಅರಿವಿನ ಅಭಿವ್ಯಕ್ತಿಯನ್ನು ದೇವತೆಗಳಾಗಲಿ ದಾನವರಾಗಲಿ ತಿಳಿದಿಲ್ಲ” ಎನ್ನುತ್ತಾನೆ ಅರ್ಜುನ. ದೇವತೆಗಳಿಗೆ ಭಗವಂತನ ಗುಣಪ್ರಮಾಣವನ್ನು ಅಳೆಯಲು ಸಾಧ್ಯವಾಗಿಲ್ಲ. ದಾನವರು ಭಗವಂತನಲ್ಲಿ ದೋಷ ಹುಡುಕುವುದರಲ್ಲಿ ಯಶಸ್ವಿ ಆಗಿಲ್ಲ. ಏಕೆಂದರೆ ಭಗವಂತ ಅನಂತ ಗುಣಪೂರ್ಣ. ಆತನಲ್ಲಿ ಯಾವುದೇ ದೋಷವಿಲ್ಲ. ಆತನನ್ನು ಪೂರ್ಣ ಅರ್ಥಮಾಡಿಕೊಳ್ಳುವುದು ಅಸಾಧ್ಯ. ಭಗವಂತನ ಬಗೆಗೆ ಅವನೇ ಹೇಳಬೇಕು ಹೊರತು ಇನ್ನೊಬ್ಬರು ಅದನ್ನು ವರ್ಣಿಸಲು ಸಾಧ್ಯವಿಲ್ಲ. ಭಗವಂತನನ್ನು ಪೂರ್ಣ ತಿಳಿಯುವುದು ಹಾಗಿರಲಿ, ಆತನ ಒಂದು ಅವತಾರವನ್ನು, ಅವತಾರದಲ್ಲಿನ ಆತನ ಒಂದು ಲೀಲೆಯನ್ನು ಪೂರ್ಣ ಅರ್ಥಮಾಡಿಕೊಳ್ಳುವುದು ಕಷ್ಟ. ಕೃಷ್ಣ ತನ್ನ ಅವತಾರದಲ್ಲಿ ನಡೆದುಕೊಂಡ ರೀತಿ ನಮಗೆ ಅರ್ಥವಾಗುವುದಿಲ್ಲ. ನಮಗೆ ಅದು ವಿಚಿತ್ರ ಎನಿಸುತ್ತದೆ. ಆತನನ್ನು ಅರಿಯುವುದು ಅಷ್ಟು ಸುಲಭದ ಕೆಲಸವಲ್ಲ. ಆತನ ಒಂದೊಂದು ನಡೆಯ ಹಿಂದೆ ಒಂದೊಂದು ಸಂದೇಶವಿದೆ.

ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು

सर्वमेतदृतं मन्ये यन्मां वदसि केशव।
न हि ते भगवन्व्यक्तिं विदुर्देवा न दानवाः॥

हे केशव! जो कुछ भी मेरे प्रति आप कहते हैं, इस सबको मैं सत्य मानता हूँ। हे भगवन्‌! आपके लीलामय (गीता अध्याय 4 श्लोक 6 में इसका विस्तार देखना चाहिए) स्वरूप को न तो दानव जानते हैं और न देवता ही

Sarvametadritam manye yanmaam vadasi keshava;
Na hi te bhagavan vyaktim vidurdevaa na daanavaah.

I believe all this that Thou sayest to me as true, O Krishna! Verily, O blessed Lord,neither the gods nor the demons know Thy manifestation (origin)!


BHAGAVAD-GITA

ಅಧ್ಯಾಯ - 10: ಶ್ಲೋಕ – 15, 16

ಸ್ವಯಮೇವಾSತ್ಮನಾSSತ್ಮಾನಂ ವೇತ್ಥ ತ್ವಂ ಪುರುಷೋತ್ತಮ ।
ಭೂತಭಾವನ ಭೂತೇಶ ದೇವದೇವ ಜಗತ್ ಪತೇ ॥೧೫॥
ವಕ್ತುಮರ್ಹಸ್ಯಶೇಷೇಣ ದಿವ್ಯಾ ಹ್ಯಾತ್ಮವಿಭೂತಯಃ ।
ಯಾಭಿರ್ವಿಭೂತಿಭಿರ್ಲೋಕಾನಿಮಾಂಸ್ತ್ವಂ ವ್ಯಾಪ್ಯ ತಿಷ್ಠಸಿ॥೧೬॥


ಸ್ವಯಮ್ ಏವ ಆತ್ಮನಾ ಆತ್ಮಾನಮ್ ವೇತ್ಥ ತ್ವಮ್ ಪುರುಷೋತ್ತಮ ।
ಭೂತಭಾವನ ಭೂತೇಶ ದೇವದೇವ ಜಗತ್ ಪತೇ ||

ವಕ್ತುಮ್ ಅರ್ಹಸಿ ಅಶೇಷೇಣ ದಿವ್ಯಾಃ ಹಿ ಆತ್ಮ ವಿಭೂತಯಃ ।
ಯಾಭಿಃ ವಿಭೂತಿಭಿಃ ಲೋಕಾನ್ ಇಮಾನ್ ತ್ವಮ್ ವ್ಯಾಪ್ಯ ತಿಷ್ಠಸಿ –

ಓ ಪುರುಷೋತ್ತಮ, ನೀನೆ ಸ್ವತಃ ನಿನ್ನಳವಿನಿಂದ ನಿನ್ನನ್ನು ಅರಿತಿರುವೆ. ಓ ಎಲ್ಲಾ ಜೀವಿಗಳ ಸ್ರಷ್ಟಾರನೆ, ಎಲ್ಲ ಜೀವಿಗಳ ದೊರೆಯೆ, ದೇವತೆಗಳಿಗೂ ಹಿರಿಯ ದೈವತವೆ, ಜಗದೊಡೆಯನೆ, ಯಾವ ರೂಪಗಳಿಂದ ನೀನು ಈ ಲೋಕಗಳನ್ನೆಲ್ಲ ತುಂಬಿ ನಿಂತಿರುವೆಯೋ ಅಂಥ ಅಲೌಕಿಕವಾದ ನಿನ್ನ ಬಗೆಬಗೆಯ ರೂಪಗಳ ಹಿರಿಮೆಗಳನ್ನು ಬಿಡದೆ ತಿಳಿಹೇಳಬೇಕು ನೀನೆ.

ಅರ್ಜುನ ಹೇಳುತ್ತಾನೆ: “ನಿನ್ನ ಗುಣಪ್ರಮಾಣವನ್ನು ದೇವತೆಗಳಿಂದಲೂ ಅಳೆಯಲು ಸಾಧ್ಯವಿಲ್ಲ. ಆದ್ದರಿಂದ ನಿನ್ನ ಬಗೆಗೆ ತಿಳಿದಿರುವುದು ನೀನೊಬ್ಬನೆ. ಅದನ್ನು ನೀನು ನೀನಾಗಿಯೇ ಹೇಳಬೇಕು ಹೊರತು ಇನ್ನೊಬ್ಬರಿಂದ ಹೇಳಲು ಸಾಧ್ಯವಿಲ್ಲ. ಏಕೆಂದರೆ ನೀನು ಪುರುಷೋತ್ತಮ” ಎಂದು. ಇಲ್ಲಿ ಪುರುಷೋತ್ತಮ ಎನ್ನುವ ವಿಶೇಷಣ ಬಳಕೆಯಾಗಿದೆ. ಪುರುಷೋತ್ತಮ ಎಂದರೆ ಕ್ಷರ(ಜೀವ)ವನ್ನು ಮೀರಿನಿಂತವನು. ಅಕ್ಷರ(ಶ್ರೀತತ್ವ)ಕ್ಕಿಂತಲೂ ಹಿರಿಯನು. “ಕ್ಷರ-ಅಕ್ಷರವನ್ನು ಮೀರಿ ನಿಂತ ನೀನಲ್ಲದೆ ನಿನ್ನಿಂದ ಹಿರಿದಾದ ತತ್ವ ಇನ್ನೊಂದಿಲ್ಲ. ಆದ್ದರಿಂದ ಇದರ ವಿವರಣೆಯನ್ನು ನಿನ್ನಿಂದ ತಿಳಿಯಬೇಕು” ಎನ್ನುವ ಭಾವವನ್ನು ಅರ್ಜುನ ವ್ಯಕ್ತಪಡಿಸಿದ ಎನ್ನುವುದನ್ನು ಈ ವಿಶೇಷಣ ತಿಳಿಸುತ್ತದೆ.

ಇಲ್ಲಿ ಅರ್ಜುನ ಕೃಷ್ಣನನ್ನು- ಭೂತಭಾವನ, ಭೂತೇಶ, ದೇವದೇವ ಮತ್ತು ಜಗತ್ ಪತೇ ಎಂದು ಸಂಬೋಧಿಸಿದ್ದಾನೆ. ಭೂತಭಾವನ ಎಂದರೆ- ಪಂಚಭೂತಾತ್ಮಕ ಪ್ರಪಂಚವನ್ನು ಸೃಷ್ಟಿ ಮಾಡಿ, ಸಮಸ್ತ ಜೀವ-ಜಾತದ ಸೃಷ್ಟಿ-ಸ್ಥಿತಿ-ಸಂಹಾರಕ್ಕೆ ಕಾರಣನಾಗಿರುವವ. ಭೂತೇಶ ಎಂದರೆ- ಎಲ್ಲರನ್ನು ನಿಯಂತ್ರಿಸುವ ಸರ್ವ ನಿಯಾಮಕ ಸ್ವಾಮಿ. ದೇವದೇವ ಎಂದರೆ-ಎಲ್ಲಾ ದೇವತೆಗಳಿಗೂ ದೇವನಾಗಿರುವವ; ಸೂರ್ಯಾದಿಗಳಿಗೂ ಬೆಳಕನ್ನು ಕೊಡುವ ಮೂಲ ಜ್ಯೋತಿ. ಜಗತ್ ಪತಿ ಎನ್ನುವಲ್ಲಿ 'ಪತಿ' ಎಂದರೆ ಪಾಲಕ. ಹುಟ್ಟಿಸುವವನೂ ಭಗವಂತ, ಸಾಯಿಸುವವನೂ ಭಗವಂತ. ಹುಟ್ಟು ಸಾವಿಲ್ಲದ ಮೋಕ್ಷ ಕೊಡುವವನೂ ಅವನೆ. ಆತ ಸಮಸ್ತ ಜಗತ್ತಿನ ಪಾಲಕ. ನಮಗೆ ಭಗವಂತ ‘ಸಂಸಾರಬಂಧ’ ಕೊಡುವುದು ಆತನ ಪಾಲನೆಯ, ಶಿಕ್ಷಣದ ಒಂದು ಮುಖ ಅಷ್ಟೆ. ಒಟ್ಟಿನಲ್ಲಿ “ನೀನಿಲ್ಲದೆ ನಾವಿಲ್ಲ, ನೀನೇ ಸರ್ವ ರಕ್ಷಕ” ಎನ್ನುವ ಭಾವವನ್ನು ಅರ್ಜುನ ಈ ಮೂಲಕ ವ್ಯಕ್ತಪಡಿಸಿದ್ದಾನೆ.

ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು

स्वयमेवात्मनात्मानं वेत्थ त्वं पुरुषोत्तम।
भूतभावन भूतेश देवदेव जगत्पते॥

हे भूतों को उत्पन्न करने वाले! हे भूतों के ईश्वर! हे देवों के देव! हे जगत्‌ के स्वामी! हे पुरुषोत्तम! आप स्वयं ही अपने से अपने को जानते हैं

॥15॥

वक्तुमर्हस्यशेषेण दिव्या ह्यात्मविभूतयः।
याभिर्विभूतिभिर्लोकानिमांस्त्वं व्याप्य तिष्ठसि॥

इसलिए आप ही उन अपनी दिव्य विभूतियों को संपूर्णता से कहने में समर्थ हैं, जिन विभूतियों द्वारा आप इन सब लोकों को व्याप्त करके स्थित हैं

॥16॥

Swayamevaatmanaatmaanam vettha twam purushottama;
Bhootabhaavana bhootesha devadeva jagatpate.

Verily, Thou Thyself knowest Thyself by Thyself, O Supreme Person, O source andLord of beings, O God of gods, O ruler of the world!

Vaktum arhasyasheshena divyaa hyaatmavibhootayah;
Yaabhir vibhootibhir lokaanimaamstwam vyaapya tishthasi.

Thou shouldst indeed tell, without reserve, of Thy divine glories by which Thouexisteth, pervading all these worlds. (None else can do so.)
******

BHAGAVAD-GITA🍁


ಅಧ್ಯಾಯ - 18: ಶ್ಲೋಕ – 47


ಶ್ರೇಯಾನ್ ಸ್ವಧರ್ಮೋ ವಿಗುಣಃ ಪರಧರ್ಮಾತ್ ಸ್ವನುಷ್ಠಿತಾತ್ ।
ಸ್ವಭಾವನಿಯತಂ ಕರ್ಮ ಕುರ್ವನ್ ನಾSಪ್ನೋತಿ ಕಿಲ್ಬಿಷಮ್ ॥೪೭॥

ಶ್ರೇಯಾನ್ ಸ್ವಧರ್ಮಃ  ವಿಗುಣಃ ಪರಧರ್ಮಾತ್  ಸು ಅನುಷ್ಠಿತಾತ್ । 
ಸ್ವಭಾವ ನಿಯತಂ ಕರ್ಮ ಕುರ್ವನ್ ನ ಆಪ್ನೋತಿ ಕಿಲ್ಬಿಷಮ್ 

ಚನ್ನಾಗಿ ಆಚರಿಸಿದ ಪರಧರ್ಮಕ್ಕಿಂತ ಆಚರಣೆಯಲ್ಲಿ ಕೊರತೆಯಿದ್ದರೂ ತನ್ನ ಸಹಜಧರ್ಮ ಮಿಗಿಲು. ತನ್ನ ಸ್ವಭಾವಕ್ಕೆ ತಕ್ಕುದಾದ ಕರ್ಮ ಮಾಡಿದರೆ ಪಾಪ ತಟ್ಟುವುದಿಲ್ಲ.

ನಮ್ಮ ಸ್ವಭಾವಕ್ಕೆ ಸಹಜವಾದ ಸ್ವಧರ್ಮ ಮಾಡುವುದರಿಂದ, ಆ ಕರ್ಮದಲ್ಲಿ ದೋಷವಿದ್ದರೂ ಕೂಡ ಅದರಿಂದ ಪಾಪ ತಟ್ಟುವುದಿಲ್ಲ. ಇದನ್ನು ಬಿಟ್ಟು ಪರಧರ್ಮ ಮಾಡುವುದು ಯುಕ್ತವಲ್ಲ. ವೇದವ್ಯಾಸರು ಯುದ್ಧಾನಂತರ ತಾನು ಸಿಂಹಾಸನವೇರಲಾರೆ, ನನಗೇನೂ ಬೇಡ, ನಾನು ಕಾಡಿಗೆ ಹೋಗುತ್ತೇನೆ ಎಂದು ಕುಳಿತ ಧರ್ಮರಾಯನಿಗೆ- “ನೀನು ನಿನ್ನ ಸಹಜ ಧರ್ಮವನ್ನು ಬಿಟ್ಟು ಕಾಡಿಗೆ ಹೋಗುವುದು ಎಷ್ಟು ಅಸಂಗತವೋ, ಅಷ್ಟೇ ಅಸಂಗತ ನಾನು ತಪಸ್ಸನ್ನು ಬಿಟ್ಟು ಬಂದು ರಾಜ್ಯಭಾರ ಮಾಡುವುದು” ಎಂದು ಬುದ್ಧಿವಾದ ಹೇಳುತ್ತಾರೆ. ಇದರಿಂದ ನಾವು ತಿಳಿಯಬೇಕಾದದ್ದು ಏನೆಂದರೆ -ನಾವು ಪರಧರ್ಮ ಮಾಡುವುದಕ್ಕಿಂತ-ದೋಷವಿದ್ದರೂ ಸರಿ,  ನಮ್ಮ ಸಹಜ ಕರ್ಮ ಮಾಡುವುದೇ ಅತ್ಯಂತ ಶ್ರೇಷ್ಠ ಧರ್ಮ  

ಕೃಪೆ:  ಪದ್ಮಶ್ರೀ  ಶ್ರೀ ಬನ್ನಂಜೆ ಗೋವಿಂದಾಚಾರ್ಯರು
******

BHAGAVAD-GITA🍁

ಅಧ್ಯಾಯ - 10: ಶ್ಲೋಕ – 10

ತೇಷಾಂ ಸತತಯುಕ್ತಾನಾಂ ಭಜತಾಂ ಪ್ರೀತಿಪೂರ್ವಕಮ್ ।
ದದಾಮಿ ಬುದ್ಧಿಯೋಗಂ ತಂ ಯೇನ ಮಾಮುಪಯಾಂತಿ ತೇ ॥೧೦॥

ತೇಷಾಮ್ ಸತತ ಯುಕ್ತಾನಾಮ್ ಭಜತಾಮ್ ಪ್ರೀತಿ ಪೂರ್ವಕಮ್ ।
ದದಾಮಿ ಬುದ್ಧಿಯೋಗಮ್ ತಮ್ ಯೇನ ಮಾಮ್ ಉಪಯಾಂತಿ ತೇ –

ನನ್ನಲ್ಲೆ ಅನುಗಾಲ ಬಗೆಯಿಟ್ಟು ಪ್ರೀತಿಯಿಂದ ಸೇವಿಸುವವರಿಗೆ ಆ ತಿಳಿವಿನ ದಾರಿಯನ್ನು ಕರುಣಿಸುತ್ತೇನೆ. ಅದರಿಂದ ಅವರು ನನ್ನನ್ನೆ ಸೇರುತ್ತಾರೆ.

ಈ ಶ್ಲೋಕದಲ್ಲಿ “ಸತತಯುಕ್ತಾನಾಂ” ಎನ್ನುವಲ್ಲಿ ಬರುವ ‘ಯುಕ್ತಿ’ ಎನ್ನುವ ಶಬ್ದಕ್ಕೆ ಸಂಸ್ಕೃತದಲ್ಲಿ ಅನೇಕ ಅರ್ಥಗಳಿವೆ. ಬಹಳ ಯೋಗ್ಯವಾದ ಆಚಾರನಿಷ್ಠೆ ಹೊಂದಿ, ದಾರಿತಪ್ಪದೆ, ಜಾರದೆ ಬದುಕುವುದು ಯುಕ್ತಿ. ಭಗವಂತನ ಅನುಸಂಧಾನಕ್ಕೆ ಪೂರಕವಾದ ವೇದಾಧ್ಯಯನವನ್ನು ಗ್ರಹಿಸುವುದು ಯುಕ್ತಿ. ಭಗವಂತನಲ್ಲಿ ಮನಸ್ಸನ್ನು ನೆಲೆಗೊಳಿಸುವುದು ಯುಕ್ತಿ. ಇಲ್ಲಿ ಕೃಷ್ಣ ಹೇಳುತ್ತಾನೆ: “ಯಾವ ಬುದ್ಧಿಯೋಗದಿಂದ ಭಗವಂತನನ್ನು ಸೇರುವುದು ಸಾಧ್ಯವೋ ಅಂತಹ ವಿಷಯ ಚಿಂತನೆ ಮಾಡುವ ಮನಸ್ಸು, ಭಕ್ತಿಯಿಂದ ಚಿಂತನೆ ಮಾಡಬೇಕು ಎನ್ನುವ ಬುದ್ಧಿ, ನಿಶ್ಚಯವಾದ ಜ್ಞಾನವನ್ನು-ನಾನೇ ಕೊಡುತ್ತೇನೆ” ಎಂದು. ಭಗವಂತನಲ್ಲಿ ಶರಣಾಗಿ ಪ್ರೀತಿಯಿಂದ ಅವನನ್ನು ಸೇವಿಸಿದಾಗ-ಭಗವಂತನನ್ನು ಸೇರುವ ಮಾರ್ಗವನ್ನು ಭಗವಂತನೇ ತೋರಿಸುತ್ತಾನೆ.

ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು

तेषां सततयुक्तानां भजतां प्रीतिपूर्वकम्‌।
ददामि बद्धियोगं तं येन मामुपयान्ति ते॥

उन निरंतर मेरे ध्यान आदि में लगे हुए और प्रेमपूर्वक भजने वाले भक्तों को मैं वह तत्त्वज्ञानरूप योग देता हूँ, जिससे वे मुझको ही प्राप्त होते हैं

॥10॥

Teshaam satatayuktaanaam bhajataam preetipoorvakam;
Dadaami buddhiyogam tam yena maamupayaanti te.

To them who are ever steadfast, worshipping Me with love, I give the Yoga ofdiscrimination by which they come to Me.COMMENTARY: The devotees who have dedicated themselves to the Lord, who are everharmonious and self-abiding, who adore Him with intense love, who are ever devout, obtain theDivine Grace.


BHAGAVAD-GITA🍁

ಅಧ್ಯಾಯ - 10: ಶ್ಲೋಕ – 09

ಮಚ್ಚಿತ್ತಾ ಮದ್ಗತಪ್ರಾಣಾ ಬೋಧಯಂತಃ ಪರಸ್ಪರಮ್ ।
ಕಥಯಂತಶ್ಚ ಮಾಂ ನಿತ್ಯಂ ತುಷ್ಯಂತಿ ಚ ರಮಂತಿ ಚ ॥೯॥

ಮತ್ ಚಿತ್ತಾಃ ಮತ್ ಗತ ಪ್ರಾಣಾಃ ಬೋಧಯಂತಃ ಪರಸ್ಪರಮ್ ।
ಕಥಯಂತಃ ಚ ಮಾಮ್ ನಿತ್ಯಮ್ ತುಷ್ಯಂತಿ ಚ ರಮಂತಿ ಚ –-

ಅನುಗಾಲ ನನ್ನಲ್ಲೆ ಬಗೆಯಿಟ್ಟವರು , ನನಗಾಗಿ ಬದುಕುವವರು, ನನ್ನನ್ನೇ ಒಬ್ಬರಿಗೊಬ್ಬರು ತಿಳಿಹೇಳುತ್ತ, ತಿಳಿಯುತ್ತ ತಣಿಯುತ್ತಾರೆ; ಸಂತಸಪಡುತ್ತಾರೆ.

ಹೀಗೆ ನಿಜವಾದ ಜ್ಞಾನ ಭಕ್ತಿ ಉಳ್ಳವರ ಚಿತ್ತದಲ್ಲಿ ಸದಾ ಭಗವಂತನ ಚಿಂತನವೇ ತುಂಬಿರುತ್ತದೆ. ಅವರ ಮನಸ್ಸು ಭಗವನ್ಮಯವಾಗಿ ಬಿಡುತ್ತದೆ. ಅವರಿಗೆ ಎಲ್ಲವುದರಲ್ಲೂ ಭಗವಂತನೇ ಕಾಣುತ್ತಾನೆ. ಇವರು ಪ್ರತೀ ಘಟನೆಯ ಹಿಂದೆ ಭಗವಂತನಿದ್ದಾನೆ, ಅವನ ಇಚ್ಛೆಯಂತೆ ಎಲ್ಲವೂ ನೆಡೆಯತ್ತಿದೆ ಎನ್ನುವ ಅರಿವಿನಲ್ಲಿ ಬದುಕುತ್ತಾರೆ. ಇವರ ಮನಸ್ಸು ಭಗವಂತನಲ್ಲಿ ಶ್ರುತಿಗೂಡಿರುತ್ತದೆ. ಇವರು ಸದಾ ಭಗವಂತನ ಬಗೆಗೆ ಮಾತನಾಡುತ್ತಿರುತ್ತಾರೆ. ಒಂದೊಂದು ಸಂಗತಿಯಲ್ಲೂ ‘ಭಗವಂತನ ಸೃಷ್ಟಿ ಎಷ್ಟು ಅದ್ಭುತ’ ಎನ್ನುವಂತೆ ಇವರು ವಿಶ್ಲೇಷಣೆ ಮಾಡುತ್ತಾರೆ. ತಮ್ಮ ಜೀವನದ ಪ್ರತಿಯೊಂದು ಘಟನೆಯನ್ನೂ ಇವರು ಭಗವಂತನ ಪ್ರಸಾದ ಎನ್ನುವಂತೆ ಸ್ವೀಕರಿಸುತ್ತಾರೆ. ಇಂತವರ ಜೀವನ ಆನಂದಮಯವಾಗಿರುತ್ತದೆ. ಇವರಲ್ಲಿ ಕೆಟ್ಟ ಯೋಚನೆ ಸುಳಿಯುವುದಿಲ್ಲ. ಇವರ ಮನಸ್ಸು ಸದಾ ನಿರ್ಮಲವಾಗಿರುತ್ತದೆ. ಇವರು ಲೋಕ ವ್ಯವಹಾರದ ಮಾತನ್ನು ಬಿಟ್ಟು, ಭಗವಂತನ ವಿಚಾರ ಮಾತನಾಡುತ್ತಾ ಸದಾ ಆನಂದಪಡುತ್ತಿರುತ್ತಾರೆ.

ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು


मच्चित्ता मद्गतप्राणा बोधयन्तः परस्परम्‌।
कथयन्तश्च मां नित्यं तुष्यन्ति च रमन्ति च॥

निरंतर मुझमें मन लगाने वाले और मुझमें ही प्राणों को अर्पण करने वाले (मुझ वासुदेव के लिए ही जिन्होंने अपना जीवन अर्पण कर दिया है उनका नाम मद्गतप्राणाः है।) भक्तजन मेरी भक्ति की चर्चा के द्वारा आपस में मेरे प्रभाव को जानते हुए तथा गुण और प्रभाव सहित मेरा कथन करते हुए ही निरंतर संतुष्ट होते हैं और मुझ वासुदेव में ही निरंतर रमण करते हैं

॥9॥

Macchittaa madgatapraanaa bodhayantah parasparam;
Kathayantashcha maam nityam tushyanti cha ramanti cha.

With their minds and lives entirely absorbed in Me, enlightening each other and alwaysspeaking of Me, they are satisfied and delighted.
******

BHAGAVAD-GITA🍁

ಅಧ್ಯಾಯ - 10: ಶ್ಲೋಕ – 07

ಏತಾಂ ವಿಭೂತಿಂ ಯೋಗಂ ಚ ಮಮ ಯೋ ವೇತ್ತಿ ತತ್ತ್ವತಃ ।
ಸೋSವಿಕಲ್ಪೇನ ಯೋಗೇನ ಯುಜ್ಯತೇ ನಾತ್ರ ಸಂಶಯಃ ॥೭॥

ಏತಾಮ್ ವಿಭೂತಿಮ್ ಯೋಗಮ್ ಚ ಮಮ ಯಃ ವೇತ್ತಿ ತತ್ತ್ವತಃ ।
ಸಃ ಅವಿಕಲ್ಪೇನ ಯೋಗೇನ ಯುಜ್ಯತೇ ನ ಅತ್ರ ಸಂಶಯಃ –

-ನನ್ನ ಈ ಹಿರಿಮೆಯನ್ನು [ಸನ್ನಿಧಾನದಿಂದ ಹಿರಿಮೆಯನ್ನೀಯುವ ನನ್ನ ರೂಪಗಳ ಬಗೆಯನ್ನು] ಮತ್ತು ಆಳವನ್ನು ಸರಿಯಾಗಿ ತಿಳಿದವನು ಪರಿಶುದ್ಧವಾದ ಧ್ಯಾನಯೋಗದಲ್ಲಿ ನೆಲೆಗೊಳ್ಳುತ್ತಾನೆ. ಇದರಲ್ಲಿ ಸಂದೇಹವಿಲ್ಲ.

ಭಗವಂತನ ಹಿರಿಮೆಯನ್ನು, ಆತನ ವಿವಿಧ ರೂಪವನ್ನು, ಅದರ ಆಳವನ್ನು-ಯಥಾರ್ಥವಾಗಿ ತಿಳಿದರೆ ನಮಗೆ ಸಹಜವಾಗಿ ಶರಣಾಗತಿ ಬರುತ್ತದೆ. ಭಗವಂತನ ಬಗೆಗಿನ ಜ್ಞಾನ ನಮ್ಮಲ್ಲಿ ದೃಢನಂಬಿಕೆಯನ್ನು ಹುಟ್ಟಿಸುತ್ತದೆ. ಶ್ರದ್ಧೆ ಮತ್ತು ಭಕ್ತಿಯಿಂದ ತುಂಬಿದ ಮನಸ್ಸು ಭಗವಂತನಲ್ಲಿ ನೆಲೆನಿಲ್ಲುತ್ತದೆ.

ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು

एतां विभूतिं योगं च मम यो वेत्ति तत्त्वतः।
सोऽविकम्पेन योगेन युज्यते नात्र संशयः॥

जो पुरुष मेरी इस परमैश्वर्यरूप विभूति को और योगशक्ति को तत्त्व से जानता है (जो कुछ दृश्यमात्र संसार है वह सब भगवान की माया है और एक वासुदेव भगवान ही सर्वत्र परिपूर्ण है, यह जानना ही तत्व से जानना है), वह निश्चल भक्तियोग से युक्त हो जाता है- इसमें कुछ भी संशय नहीं है

॥7॥

Etaam vibhootim yogam cha mama yo vetti tattwatah;
So’vikampena yogena yujyate naatra samshayah.

He who in truth knows these manifold manifestations of My Being and (this)Yoga-power of Mine, becomes established in the unshakeable Yoga;

there is no doubt about it.
*******

BHAGAVAD-GITA🍁
ಅಧ್ಯಾಯ - 10: ಶ್ಲೋಕ – 06
ಮಹರ್ಷಯಃ ಸಪ್ತ ಪೂರ್ವೇ ಚತ್ವಾರೋ ಮನವಸ್ತಥಾ ।
ಮದ್ಭಾವಾ ಮಾನಸಾ ಜಾತಾ ಯೇಷಾಂ ಲೋಕ ಇಮಾಃ ಪ್ರಜಾಃ ॥೬॥

ಮಹರ್ಷಯಃ ಸಪ್ತ ಪೂರ್ವೇ ಚತ್ವಾರಃ ಮನವಃ ತಥಾ ।
ಮತ್ ಭಾವಾಃ ಮಾನಸಾಃ ಜಾತಾಃ ಯೇಷಾಮ್ ಲೋಕೇ ಇಮಾಃ ಪ್ರಜಾಃ –

ಮೊದಲ ಮನ್ವಂತರದ ಏಳು ಮಂದಿ ಮಹರ್ಷಿಗಳು [ಮರೀಚಿ, ಅತ್ರಿ, ಅಂಗಿರಸ್, ಪುಲಸ್ತ್ಯ, ಪುಲಹ, ಕ್ರತು, ಮತ್ತು ವಸಿಷ್ಠ ], ಮೊದಲ ನಾಲ್ವರು ಮನುಗಳು [ಸ್ವಾಯಂಭುವ, ಸ್ವಾರೋಚಿಷ, ಉತ್ತಮ ಮತ್ತು ರೈವತ], ಚತುರ್ಮುಖನ ಮಾನಸ ಪುತ್ರರಾದ ಇವರು ನನ್ನಿಂದಲೆ ಆದವರು.[ನಾಲ್ಕು ವರ್ಣಗಳ ನಿಯಾಮಕರಾಗಿ ನಾಲ್ಕು ಪಂಗಡದಲ್ಲಿ ಸೇರಿದ, ವಿಶೇಷ ಅರಿವಿನ ಕಾರಣ ‘ಮನು’ಗಳೆನಿಸಿದ ಎಲ್ಲ ದೇವತೆಗಳು ನನ್ನಿಂದಲೆ ಆದವರು; ನನ್ನ ಇಚ್ಛೆಯಿಂದಲೆ ಹುಟ್ಟಿ ಬಂದವರು.] ವಿಶ್ವದ ಈ ಜನರೆಲ್ಲ ಅವರದೇ ಸಂತತಿ.

ಇಡೀ ಬ್ರಹ್ಮಾಂಡ ಸೃಷ್ಟಿ ಭಗವಂತನಿಂದಾಯಿತು ಎನ್ನುವುದು ನಮಗೆ ತಿಳಿದಿದೆ. ಇಲ್ಲಿ ಕೃಷ್ಣ ನಾವು ಉಪಾಸನೆಯಲ್ಲಿ ತಿಳಿದಿರಬೇಕಾದ ಮುಖ್ಯ ಅಂಶವನ್ನು ವಿವರಿಸುತ್ತಾನೆ. ಮೊದಲ ಮನ್ವಂತರದ ಸಪ್ತರ್ಷಿಗಳು ಮತ್ತು ಮೊದಲ ನಾಲ್ಕು ಮನುಗಳನ್ನು ಕೃಷ್ಣ ಇಲ್ಲಿ ಪ್ರಸ್ತಾಪಿಸಿದ್ದಾನೆ. ಪ್ರತಿಯೊಂದು ಮನ್ವಂತರಕ್ಕೂ ಬೇರೆ ಬೇರೆ ಸಪ್ತರ್ಷಿಗಳಿದ್ದಾರೆ. ದೇವತಾ ತಾರತಮ್ಯದಲ್ಲಿ ಹದಿನಾರನೇ ಕಕ್ಷೆಯಲ್ಲಿ ಬರುವ ಮೊದಲ ಮನ್ವಂತರದ ಈ ಸಪ್ತರ್ಷಿಗಳು ಋಷಿಮಂಡಲದಲ್ಲೇ ಬಹಳ ಶ್ರೇಷ್ಠರು. ಪುರಾಣ ಮತ್ತು ಮಹಾಭಾರತದ ಮೋಕ್ಷಧರ್ಮ ಪರ್ವವನ್ನು ನೋಡಿದಾಗ-ಇಲ್ಲಿ “ಮಹರ್ಷಯಃ ಸಪ್ತ ಪೂರ್ವೇ” ಎನ್ನುವುದು ಸೃಷ್ಟಿಕಾರಣನಾದ ಚತುರ್ಮುಖನಿಗೆ ಸಹಾಯಕರಾದ ಸಪ್ತಬ್ರಹ್ಮರನ್ನೂ ಸೂಚಿಸುತ್ತದೆ ಎಂದು ತಿಳಿಯುತ್ತದೆ. [ಇಲ್ಲಿ ಉಪಲಕ್ಷಣವಾಗಿ ಭೃಗು ಮತ್ತು ದಕ್ಷರನ್ನೂ ಸೇರಿಸಿಕೊಳ್ಳಬೇಕು. ಹತ್ತನೆಯವನಾದ ಮಾನಸ ಪುತ್ರ ನಾರದ ಬ್ರಹ್ಮಚಾರಿ ಆದ್ದರಿಂದ ಸೃಷ್ಟಿ ವಿಸ್ತಾರದಲ್ಲಿ ಆತನ ಹೆಸರನ್ನು ಸೇರಿಸಿಲ್ಲ]. ಈ ಏಳುಮಂದಿ ಋಷಿಗಳು ಮತ್ತು ಭೃಗು-ದಕ್ಷರನ್ನು ಪ್ರಜಾಪತಿಗಳೆಂದು ಕರೆಯುತ್ತಾರೆ. ಭಗವಂತ ಚತುರ್ಮುಖನ ಸೃಷ್ಟಿ ಮಾಡಿ, ಅವನ ಮೂಲಕ ಸಪ್ತರ್ಷಿಗಳ ಸೃಷ್ಟಿ ಮಾಡಿದ. ಸೃಷ್ಟಿಯಲ್ಲಿ ಮಾನವರ ವಂಶವಿಸ್ತಾರ ಮೊದಲು ಸ್ವಾಯಂಭುವ ಮನುವಿನ ಮೂಲಕವಾಯಿತು. ಈತನಿಂದ ಮನು ವಂಶ ಬೆಳೆದುಬಂತು. ಈ ಎಲ್ಲಾ ಕಾರಣದಿಂದ ಮೊದಲ ನಾಲ್ಕು ಮನ್ವಂತರದ ಅಧಿಪತಿಗಳು ಮತ್ತು ಸಪ್ತರ್ಷಿಗಳು ಪ್ರಧಾನವಾಗಿ ಉಪಾಸನೆಯಾಗಬೇಕಾದ ಹಿಂದಿನವರು. ವಿಶ್ವದ ಈ ಜನರೆಲ್ಲ ಅವರದೇ ಸಂತತಿ.

‘ಮನು’ ಎನ್ನುವುದಕ್ಕೆ ಇನ್ನೊಂದು ಅರ್ಥವಿದೆ. ಭಗವಂತನ ಪರಿವಾರವಾದ ದೇವತೆಗಳನ್ನೂ ‘ಮನುಗಳು’ ಎನ್ನುತ್ತಾರೆ. ತತ್ವಾಭಿಮಾನಿ ದೇವತೆಗಳಲ್ಲಿ ಮುಖ್ಯವಾಗಿ ನಾಲ್ಕು ವಿಧ. ಇವರು ಮನುಷ್ಯನ ನಾಲ್ಕು ಸ್ವಭಾವವನ್ನು(ಬ್ರಾಹ್ಮಣ್ಯ, ಕ್ಷಾತ್ರ, ವೈಶ್ಯ, ಶೂದ್ರ) ನಿಯಂತ್ರಿಸುವ ದೇವತೆಗಳು. ನಮ್ಮಲ್ಲಿ ಪ್ರತಿಯೊಬ್ಬರಲ್ಲೂ ಈ ನಾಲ್ಕು ಸ್ವಭಾವವಿರುತ್ತದೆ. ಯಾವ ಸ್ವಭಾವ ನಮ್ಮಲ್ಲಿ ಹೆಚ್ಚಿದೆ ನಾವು ಆ ವರ್ಗದಿಂದ ಕರೆಸಿಕೊಳ್ಳುತ್ತೇವೆ. ಇದಲ್ಲದೆ ‘ಮನು’ ಶಬ್ದವಾಚ್ಯ ಜೀವವರ್ಗ ನಾಲ್ಕು: ಸಮಸ್ತ ದೇವತೆಗಳು, ದೇವತೆಗಳಿಂದ ಸೃಷ್ಟಿಯಾದ ಋಷಿಗಳು(ಮಾನವರು), ಋಷಿಪರಂಪರೆಯಿಂದ ಬಂದ ‘ಮಾನವಮಾನವರು’, ಈ ಪರಂಪರೆಯಿಂದ ಬಂದ ಮನುಷ್ಯರು. ಇದು ಉಪಾಸನೆಯಲ್ಲಿ ತಿಳಿದಿರಬೇಕಾದ ಅಂಶ.

ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು

महर्षयः सप्त पूर्वे चत्वारो मनवस्तथा।
मद्भावा मानसा जाता येषां लोक इमाः प्रजाः॥

सात महर्षिजन, चार उनसे भी पूर्व में होने वाले सनकादि तथा स्वायम्भुव आदि चौदह मनु- ये मुझमें भाव वाले सब-के-सब मेरे संकल्प से उत्पन्न हुए हैं, जिनकी संसार में यह संपूर्ण प्रजा है

॥6॥

Maharshayah sapta poorve chatwaaro manavastathaa;
Madbhaavaa maanasaa jaataa yeshaam loka imaah prajaah.

The seven great sages, the ancient four and also the Manus, possessed of powers like Me(on account of their minds being fixed on Me), were born of (My) mind;

from them are thesecreatures born in this world.
*******

BHAGAVAD-GITA🍁

ಅಧ್ಯಾಯ - 10: ಶ್ಲೋಕ – 06

ಮಹರ್ಷಯಃ ಸಪ್ತ ಪೂರ್ವೇ ಚತ್ವಾರೋ ಮನವಸ್ತಥಾ ।
ಮದ್ಭಾವಾ ಮಾನಸಾ ಜಾತಾ ಯೇಷಾಂ ಲೋಕ ಇಮಾಃ ಪ್ರಜಾಃ ॥೬॥

ಮಹರ್ಷಯಃ ಸಪ್ತ ಪೂರ್ವೇ ಚತ್ವಾರಃ ಮನವಃ ತಥಾ ।
ಮತ್ ಭಾವಾಃ ಮಾನಸಾಃ ಜಾತಾಃ ಯೇಷಾಮ್ ಲೋಕೇ ಇಮಾಃ ಪ್ರಜಾಃ –

ಮೊದಲ ಮನ್ವಂತರದ ಏಳು ಮಂದಿ ಮಹರ್ಷಿಗಳು [ಮರೀಚಿ, ಅತ್ರಿ, ಅಂಗಿರಸ್, ಪುಲಸ್ತ್ಯ, ಪುಲಹ, ಕ್ರತು, ಮತ್ತು ವಸಿಷ್ಠ ], ಮೊದಲ ನಾಲ್ವರು ಮನುಗಳು [ಸ್ವಾಯಂಭುವ, ಸ್ವಾರೋಚಿಷ, ಉತ್ತಮ ಮತ್ತು ರೈವತ], ಚತುರ್ಮುಖನ ಮಾನಸ ಪುತ್ರರಾದ ಇವರು ನನ್ನಿಂದಲೆ ಆದವರು.[ನಾಲ್ಕು ವರ್ಣಗಳ ನಿಯಾಮಕರಾಗಿ ನಾಲ್ಕು ಪಂಗಡದಲ್ಲಿ ಸೇರಿದ, ವಿಶೇಷ ಅರಿವಿನ ಕಾರಣ ‘ಮನು’ಗಳೆನಿಸಿದ ಎಲ್ಲ ದೇವತೆಗಳು ನನ್ನಿಂದಲೆ ಆದವರು; ನನ್ನ ಇಚ್ಛೆಯಿಂದಲೆ ಹುಟ್ಟಿ ಬಂದವರು.] ವಿಶ್ವದ ಈ ಜನರೆಲ್ಲ ಅವರದೇ ಸಂತತಿ.

ಇಡೀ ಬ್ರಹ್ಮಾಂಡ ಸೃಷ್ಟಿ ಭಗವಂತನಿಂದಾಯಿತು ಎನ್ನುವುದು ನಮಗೆ ತಿಳಿದಿದೆ. ಇಲ್ಲಿ ಕೃಷ್ಣ ನಾವು ಉಪಾಸನೆಯಲ್ಲಿ ತಿಳಿದಿರಬೇಕಾದ ಮುಖ್ಯ ಅಂಶವನ್ನು ವಿವರಿಸುತ್ತಾನೆ. ಮೊದಲ ಮನ್ವಂತರದ ಸಪ್ತರ್ಷಿಗಳು ಮತ್ತು ಮೊದಲ ನಾಲ್ಕು ಮನುಗಳನ್ನು ಕೃಷ್ಣ ಇಲ್ಲಿ ಪ್ರಸ್ತಾಪಿಸಿದ್ದಾನೆ. ಪ್ರತಿಯೊಂದು ಮನ್ವಂತರಕ್ಕೂ ಬೇರೆ ಬೇರೆ ಸಪ್ತರ್ಷಿಗಳಿದ್ದಾರೆ. ದೇವತಾ ತಾರತಮ್ಯದಲ್ಲಿ ಹದಿನಾರನೇ ಕಕ್ಷೆಯಲ್ಲಿ ಬರುವ ಮೊದಲ ಮನ್ವಂತರದ ಈ ಸಪ್ತರ್ಷಿಗಳು ಋಷಿಮಂಡಲದಲ್ಲೇ ಬಹಳ ಶ್ರೇಷ್ಠರು. ಪುರಾಣ ಮತ್ತು ಮಹಾಭಾರತದ ಮೋಕ್ಷಧರ್ಮ ಪರ್ವವನ್ನು ನೋಡಿದಾಗ-ಇಲ್ಲಿ “ಮಹರ್ಷಯಃ ಸಪ್ತ ಪೂರ್ವೇ” ಎನ್ನುವುದು ಸೃಷ್ಟಿಕಾರಣನಾದ ಚತುರ್ಮುಖನಿಗೆ ಸಹಾಯಕರಾದ ಸಪ್ತಬ್ರಹ್ಮರನ್ನೂ ಸೂಚಿಸುತ್ತದೆ ಎಂದು ತಿಳಿಯುತ್ತದೆ. [ಇಲ್ಲಿ ಉಪಲಕ್ಷಣವಾಗಿ ಭೃಗು ಮತ್ತು ದಕ್ಷರನ್ನೂ ಸೇರಿಸಿಕೊಳ್ಳಬೇಕು. ಹತ್ತನೆಯವನಾದ ಮಾನಸ ಪುತ್ರ ನಾರದ ಬ್ರಹ್ಮಚಾರಿ ಆದ್ದರಿಂದ ಸೃಷ್ಟಿ ವಿಸ್ತಾರದಲ್ಲಿ ಆತನ ಹೆಸರನ್ನು ಸೇರಿಸಿಲ್ಲ]. ಈ ಏಳುಮಂದಿ ಋಷಿಗಳು ಮತ್ತು ಭೃಗು-ದಕ್ಷರನ್ನು ಪ್ರಜಾಪತಿಗಳೆಂದು ಕರೆಯುತ್ತಾರೆ. ಭಗವಂತ ಚತುರ್ಮುಖನ ಸೃಷ್ಟಿ ಮಾಡಿ, ಅವನ ಮೂಲಕ ಸಪ್ತರ್ಷಿಗಳ ಸೃಷ್ಟಿ ಮಾಡಿದ. ಸೃಷ್ಟಿಯಲ್ಲಿ ಮಾನವರ ವಂಶವಿಸ್ತಾರ ಮೊದಲು ಸ್ವಾಯಂಭುವ ಮನುವಿನ ಮೂಲಕವಾಯಿತು. ಈತನಿಂದ ಮನು ವಂಶ ಬೆಳೆದುಬಂತು. ಈ ಎಲ್ಲಾ ಕಾರಣದಿಂದ ಮೊದಲ ನಾಲ್ಕು ಮನ್ವಂತರದ ಅಧಿಪತಿಗಳು ಮತ್ತು ಸಪ್ತರ್ಷಿಗಳು ಪ್ರಧಾನವಾಗಿ ಉಪಾಸನೆಯಾಗಬೇಕಾದ ಹಿಂದಿನವರು. ವಿಶ್ವದ ಈ ಜನರೆಲ್ಲ ಅವರದೇ ಸಂತತಿ.

‘ಮನು’ ಎನ್ನುವುದಕ್ಕೆ ಇನ್ನೊಂದು ಅರ್ಥವಿದೆ. ಭಗವಂತನ ಪರಿವಾರವಾದ ದೇವತೆಗಳನ್ನೂ ‘ಮನುಗಳು’ ಎನ್ನುತ್ತಾರೆ. ತತ್ವಾಭಿಮಾನಿ ದೇವತೆಗಳಲ್ಲಿ ಮುಖ್ಯವಾಗಿ ನಾಲ್ಕು ವಿಧ. ಇವರು ಮನುಷ್ಯನ ನಾಲ್ಕು ಸ್ವಭಾವವನ್ನು(ಬ್ರಾಹ್ಮಣ್ಯ, ಕ್ಷಾತ್ರ, ವೈಶ್ಯ, ಶೂದ್ರ) ನಿಯಂತ್ರಿಸುವ ದೇವತೆಗಳು. ನಮ್ಮಲ್ಲಿ ಪ್ರತಿಯೊಬ್ಬರಲ್ಲೂ ಈ ನಾಲ್ಕು ಸ್ವಭಾವವಿರುತ್ತದೆ. ಯಾವ ಸ್ವಭಾವ ನಮ್ಮಲ್ಲಿ ಹೆಚ್ಚಿದೆ ನಾವು ಆ ವರ್ಗದಿಂದ ಕರೆಸಿಕೊಳ್ಳುತ್ತೇವೆ. ಇದಲ್ಲದೆ ‘ಮನು’ ಶಬ್ದವಾಚ್ಯ ಜೀವವರ್ಗ ನಾಲ್ಕು: ಸಮಸ್ತ ದೇವತೆಗಳು, ದೇವತೆಗಳಿಂದ ಸೃಷ್ಟಿಯಾದ ಋಷಿಗಳು(ಮಾನವರು), ಋಷಿಪರಂಪರೆಯಿಂದ ಬಂದ ‘ಮಾನವಮಾನವರು’, ಈ ಪರಂಪರೆಯಿಂದ ಬಂದ ಮನುಷ್ಯರು. ಇದು ಉಪಾಸನೆಯಲ್ಲಿ ತಿಳಿದಿರಬೇಕಾದ ಅಂಶ.

ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು

महर्षयः सप्त पूर्वे चत्वारो मनवस्तथा।
मद्भावा मानसा जाता येषां लोक इमाः प्रजाः॥

सात महर्षिजन, चार उनसे भी पूर्व में होने वाले सनकादि तथा स्वायम्भुव आदि चौदह मनु- ये मुझमें भाव वाले सब-के-सब मेरे संकल्प से उत्पन्न हुए हैं, जिनकी संसार में यह संपूर्ण प्रजा है

॥6॥

Maharshayah sapta poorve chatwaaro manavastathaa;
Madbhaavaa maanasaa jaataa yeshaam loka imaah prajaah.

The seven great sages, the ancient four and also the Manus, possessed of powers like Me(on account of their minds being fixed on Me), were born of (My) mind;

from them are thesecreatures born in this world.
******


BHAGAVAD-GITA🍁

ಅಧ್ಯಾಯ - 10: ಶ್ಲೋಕ – 05

ಅಹಿಂಸಾ ಸಮತಾ ತುಷ್ಟಿಸ್ತಪೋ ದಾನಂ ಯಶೋSಯಶಃ।
ಭವಂತಿ ಭಾವಾ ಭೂತಾನಾಂ ಮತ್ತ ಏವ ಪೃಥಗ್ ವಿಧಾಃ ॥೫॥

ಅಹಿಂಸಾ ಸಮತಾ ತುಷ್ಟಿಃ ತಪಃ (ಅ)ದಾನಮ್ ಯಶಃ ಅಯಶಃ।
ಭವಂತಿ ಭಾವಾಃ ಭೂತಾನಾಮ್ ಮತ್ತಃ ಏವ ಪೃಥಕ್ ವಿಧಾಃ -

- ಅಹಿಂಸೆ, ಸಮದೃಷ್ಟಿ, ತೃಪ್ತಿ, ತಪಸ್ಸು, ದಾನ, ಹೆಸರು, ಕೆಟ್ಟ ಹೆಸರು- ಬಗೆ ಬಗೆಯ ಈ ಎಲ್ಲ ಬಗೆಗಳೂ ನನ್ನಿಂದಲೆ ಉಂಟಾಗುತ್ತವೆ.

ಕೃಷ್ಣ ಹೇಳುತ್ತಾನೆ “ಅಹಿಂಸೆ, ಸಮದೃಷ್ಟಿ, ತೃಪ್ತಿ, ತಪಸ್ಸು, (ಅ)ದಾನ, ಹೆಸರು, ಕೆಟ್ಟ ಹೆಸರು” ಇವು ನನ್ನಿಂದ ಎಂದು. ಇಲ್ಲಿ ಅಹಿಂಸೆ ಮತ್ತು ಸಮದೃಷ್ಟಿ ತುಂಬಾ ವಿಶೇಷವಾದುದ್ದು. ಏಕೆಂದರೆ ಹಿಂಸೆಯೂ ಕೆಲವೊಮ್ಮೆ ಅಹಿಂಸೆಯಾಗುತ್ತದೆ ಮತ್ತು ಅಸಮಾನತೆಯೂ ಸಮಾನತೆಯಾಗುತ್ತದೆ. ಅದಕ್ಕಾಗಿ ಇದನ್ನು ಇಲ್ಲಿ ವಿಶೇಷವಾಗಿ ಪ್ರಸ್ತಾಪಿಸಿದ್ದಾನೆ ಕೃಷ್ಣ.

ಮೊದಲಿಗೆ ಅಹಿಂಸೆ: ಇನ್ನೊಬ್ಬರಿಗೆ ತೊಂದರೆಯಾಗದಂತೆ ಬದುಕುವುದು ಅಹಿಂಸೆ. ಇಲ್ಲಿ ಅಹಿಂಸೆ ಎಂದರೆ ಕೇವಲ ಶಾರೀರಿಕವಾಗಿ ಮಾತ್ರವಲ್ಲ, ಮನಸ್ಸು ಮತ್ತು ಮಾತಿನಲ್ಲೂ ನಾವು ಅಹಿಂಸೆಯನ್ನು ಸಾಧಿಸಬೇಕು. ಉದಾಹರಣೆಗೆ: ಒಬ್ಬರನ್ನು ಚುಚ್ಚು ಮಾತಿನಿಂದ ಹಂಗಿಸುವುದು, ಮಾನಸಿಕವಾಗಿ ಇನ್ನೊಬ್ಬರನ್ನು ನಿಂದಿಸುವುದು ಅಥವಾ ಶಾಪ ಹಾಕುವುದು ಕೂಡಾ ಹಿಂಸೆ. ಕೆಲವೊಮ್ಮೆ ಹಿಂಸೆಯೇ ಅಹಿಂಸೆಯಾಗುತ್ತದೆ. ಉದಾಹರಣೆಗೆ: ಒಂದು ನರಭಕ್ಷಕ ಹುಲಿಯನ್ನು ಕೊಲ್ಲುವುದರಿಂದ ಊರಿನ ಅನೇಕ ಜನರ ಪ್ರಾಣ ಉಳಿಯುವುದಾದರೆ ಅದನ್ನು ಕೊಲ್ಲುವುದು ಅಹಿಂಸೆ.[ನಾವು ಈ ರೀತಿಯ ಅಹಿಂಸೆಯನ್ನು ಕೃಷ್ಣನ ಅನೇಕ ಕೃತಿಗಳಲ್ಲಿ ಕಾಣುತ್ತೇವೆ]. ದೊಡ್ಡ ಹಿಂಸೆಯನ್ನು ತಡೆಯುವುದಕ್ಕೊಸ್ಕರ ಮಾಡುವ ಚಿಕ್ಕ ಹಿಂಸೆ-ಅಹಿಂಸೆ. ನಾವು ನಮ್ಮ ಮಾತಿನಿಂದ, ಕೃತಿಯಿಂದ ಮತ್ತು ಮನಸ್ಸಿನಿಂದ ಇನ್ನೊಬ್ಬರಿಗೆ ಹಿಂಸೆಯಾಗದಂತೆ ನಡೆದುಕೊಳ್ಳಬೇಕು.

ಎರಡನೆಯ ಗುಣ ಸಮದೃಷ್ಟಿ (ಸಮತಾಃ) : ಇಲ್ಲಿ ಸಮದೃಷ್ಟಿ ಎಂದರೆ ಎಲ್ಲರನ್ನೂ ಏಕ ರೂಪದಲ್ಲಿ ನೋಡುವುದು ಎಂದರ್ಥವಲ್ಲ. ಇದು ಯೋಗ್ಯತೆಗನುಗುಣವಾದ ಸಮದೃಷ್ಟಿ. ಉದಾಹರಣೆಗೆ: ಒಂದು ಶಾಲೆಯಲ್ಲಿ ಚನ್ನಾಗಿ ಓದಿ ಬರೆದ ವಿದ್ಯಾರ್ಥಿ ಹಾಗು ಓದದೆ ಪೋಲಿಯಾಗಿರುವ ಇನ್ನೊಬ್ಬ ವಿದ್ಯಾರ್ಥಿಗೆ ಸಮನಾದ ಅಂಕವನ್ನು ಕೊಡುವುದು ಸಮಾನತೆ ಅಲ್ಲ. ಯಾವುದೇ ದ್ವೇಷವಿಲ್ಲದೆ, ಶತ್ರು, ಮಿತ್ರ, ಸ್ಥಳೀಯ, ಪರಕೀಯ ಎನ್ನುವ ಭೇದವಿಲ್ಲದೆ, ಅವರವರ ಯೋಗ್ಯತೆಗೆ ತಕ್ಕಂತೆ ಅಂಕ ವಿತರಣೆ ಮಾಡುವುದು ಸಮಾನತೆ. ಯಾರನ್ನು ಹೇಗೆ ನೋಡಬೇಕೋ ಅವರನ್ನು ಹಾಗೆ ನೋಡುವುದು. ತಂದೆಯನ್ನು ತಂದೆಯಂತೆ, ತಾಯಿಯನ್ನು ತಾಯಿಯಂತೆ, ಗುರುವನ್ನು ಗುರುವಂತೆ ಹೀಗೆ ಯಾರು ಸಮಾನರೋ ಅವರನ್ನು ಸಮಾನವಾಗಿ ಗೌರವಿಸುವುದು ಸಮದೃಷ್ಟಿ.

ಮೂರನೆಯ ಗುಣ ತೃಪ್ತಿ: ಮನುಷ್ಯನ ಎಲ್ಲಾ ದುಃಖಗಳಿಗೆ ಮುಖ್ಯ ಕಾರಣ ಅತೃಪ್ತಿ. ಇಂದಿನ ಸಮಾಜದಲ್ಲಿ ನಮ್ಮ ಮನೆಯಲ್ಲಿ ನಮಗೆ ಅಗತ್ಯಕ್ಕೆ ಬೇಕಾದಷ್ಟು ಇದ್ದರೂ ಕೂಡ ಮಾಧ್ಯಮಗಳಲ್ಲಿ ಬರುವ ಜಾಹಿರಾತಿಗೆ ಮರುಳಾಗಿ, ಅಥವಾ ನೆರಮನೆಯವರಿಗೆ ಪ್ರತಿಸ್ಪರ್ಧಿಯಾಗಿ, ಸದಾ ಅತೃಪ್ತಿಯಲ್ಲಿ ನಾವು ಬದುಕುತ್ತೇವೆ. ಕೆಲಸ ಇಲ್ಲದಾಗ ಕೆಲಸದ ಆಸೆ, ನಂತರ ಎಷ್ಟು ಸಂಬಳ ಬಂದರೂ ಅಲ್ಲಿ ಅತೃಪ್ತಿ. ಇಲ್ಲದ್ದನ್ನು ಯೋಚಿಸಿ ಕೊರಗದೆ, ಇದ್ದದ್ದನ್ನು ಯೋಚಿಸಿ ಖುಷಿ ಪಡುವುದು(Be content with whatever you have) ನಿಜವಾದ ತೃಪ್ತಿ.

ನಾಲ್ಕನೆಯದು ತಪಸ್ಸು: ಇದರಲ್ಲಿ ಮೂರು ಬಗೆ: ಕಾಯಾ-ವಾಚಾ-ಮನಸಾ ತಪಃ. ಕಾಯ ಅಂದರೆ ದೇಹ. ದೇಹದ ಮೂಲಕ ತಪಸ್ಸು. ಸಾಮಾನ್ಯವಾಗಿ ದೇಹ ಹೇಳಿದಂತೆ ಕೇಳದೆ ಇರುವುದು ಆಹಾರ ಅತ್ಯಯ ಅಥವಾ ವ್ಯತ್ಯಯದಿಂದ. ಆಹಾರ ನಿಯಂತ್ರಣ ಮಾಡಿದಾಗ ಮನಸ್ಸು ನಿಯಂತ್ರಣಕ್ಕೆ ಬರುತ್ತದೆ. ಮನಸ್ಸು ನಿಯಂತ್ರಣದಲ್ಲಿದ್ದರೆ ದೇಹ ಸ್ಥಿರವಾಗಿರಲು ಸಾಧ್ಯ. ಇದಕ್ಕಾಗಿ ನಾನಾ ರೀತಿಯ ನಿಯಂತ್ರಣ ಸಾಧನವಾದ ವೃತಾನುಷ್ಠಾನ ಮಾಡುವುದು. ಒಟ್ಟಿನಲ್ಲಿ ಅಹಂಕಾರ ಅಸೂಯೆ ಪಡದೆ ಬಗ್ಗುವ ಗುಣ ಬರುವುದು ದೇಹದ ತಪಸ್ಸಿನಿಂದ. ಇನ್ನೊಬ್ಬರಿಗೆ ಹಿತವೆನಿಸುವ, ಸತ್ಯವಾದ-ಸಹಜ ಮಾತನ್ನಾಡುವುದು; ಶಾಸ್ತ್ರಗಳ ಶ್ರವಣ-ಮನನ ಮಾಡಿ ಅದರಿಂದ ಸ್ವಪ್ರವಚನ ಅಭ್ಯಸಿಸಿ ಅದನ್ನು ಅರಗಿಸಿಕೊಂಡು ಇನ್ನೊಬ್ಬರಿಗೆ ಪ್ರವಚನ ಮಾಡಿ, ಮುಂದಿನ ತಲೆಮಾರಿಗೆ ಕೊಡುವುದು ವಾಚ-ತಪಃ. ಮಾನಸಿಕವಾಗಿ ಸದಾ ಆಳವಾದ ಚಿಂತನೆ ಮನಸಾ-ತಪಃ.

ಐದನೆಯದು (ಅ)ದಾನ: ದಾನ ಶಬ್ದಕ್ಕೆ ಸಂಸ್ಕೃತದಲ್ಲಿ ಎರಡು ಅರ್ಥವಿದೆ. ಒಂದು ‘ಕೊಡುವುದು’ ಇನ್ನೊಂದು ‘ತುಂಡರಿಸುವುದು’. ಕೊಡುವುದರಿಂದ ಅದು ನಮ್ಮ ಪಾಪವನ್ನು ತುಂಡರಿಸಿದರೆ ಅದು ದಾನ. ಬದಲಿಗೆ ನಮ್ಮ ಪುಣ್ಯವನ್ನು ತುಂಡರಿಸಿದರೆ ಅದು ಅದಾನ.

ನಮಗೆ ಅನುಪಯುಕ್ತವಾದ ವಸ್ತುವನ್ನು ಸಾಗಹಾಕುವುದಕ್ಕೋಸ್ಕರ ಕೊಡುವ ದಾನ ದಾನವಲ್ಲ. ಅತೀ ಅಗತ್ಯವಾದ ವಸ್ತು ಇನ್ನೊಬ್ಬರಲ್ಲಿ ಇಲ್ಲದೆ ಅದು ನಮ್ಮಲ್ಲಿ ಇದ್ದರೆ, ನಮ್ಮಲ್ಲಿರುವುದನ್ನು ಅವರಿಗೆ ಹಂಚಿ ಅವರ ಕೊರತೆ ನೀಗಿಸುವುದು ನಿಜವಾದ ದಾನ. ಒಬ್ಬ ವ್ಯಕ್ತಿ ಒಂದು ಹೊತ್ತಿನ ಊಟಕ್ಕೆ ಗತಿ ಇಲ್ಲದೆ ಪರದಾಡುತ್ತಿರುವಾಗ ನಮ್ಮಲ್ಲಿ ಎರಡು ಹೊತ್ತಿನ ಊಟಕ್ಕಾಗುವಷ್ಟು ಧಾನ್ಯವಿದ್ದರೆ, ನಮ್ಮ ನಾಳೆಯ ಬಗ್ಗೆ ಯೋಚಿಸದೆ, ಆ ವ್ಯಕ್ತಿಗೆ ಒಂದು ಹೊತ್ತಿನ ಧಾನ್ಯವನ್ನು ದಾನ ಮಾಡುವುದು ನಿಜವಾದ ದಾನ.

ದಾನದಲ್ಲಿ ಅಶನ-ವಸನ-ಅನ್ನ ಇದನ್ನು ಯಾರಿಗೆ ಬೇಕಾದರೂ ದಾನ ಮಾಡಬಹುದು. ಇರುವುದಕ್ಕೆ ತಾಣ, ಉಡುವುದಕ್ಕೆ ಬಟ್ಟೆ, ಹಸಿದವನಿಗೆ ಅನ್ನ. ಇದನ್ನು ಕೊಡುವುದಕ್ಕೆ ಯೋಗ್ಯ-ಅಯೋಗ್ಯ ಎನ್ನುವ ನಿರ್ಬಂಧವಿಲ್ಲ. ಆದರೆ ಇತರೆ ವಸ್ತುವನ್ನು ದಾನ ಮಾಡುವಾಗ ಯಾವುದು ಯಾರಿಗೆ ಅಗತ್ಯ ಮತ್ತು ಯೋಗ್ಯ ಎಂದು ನೋಡಿ ದಾನ ಮಾಡಬೇಕು. ಪ್ರಚಾರಕ್ಕಾಗಿ ದಾನ ಮಾಡುವುದು-ಅದಾನ. ಯಾವುದೇ ಬಯಕೆ ಇಲ್ಲದೆ ನಿಷ್ಪೃಹತೆಯಿಂದ ಕರ್ತವ್ಯ ದೃಷ್ಟಿಯಿಂದ ಯೋಗ್ಯವಾದ ದೇಶದಲ್ಲಿ, ಯೋಗ್ಯವಾದ ಕಾಲದಲ್ಲಿ, ಯೋಗ್ಯವಾದ ವ್ಯಕ್ತಿಗೆ ಮಾಡುವ ದಾನ ನಿಜವಾದ ದಾನ.

ಕೊನೆಯದಾಗಿ ಕೃಷ್ಣ ಯಶಃ-ಅಯಶಃವನ್ನು ಇಲ್ಲಿ ಹೇಳಿದ್ದಾನೆ. ಇದು ತುಂಬಾ ವಿಚಿತ್ರವಾದದ್ದು. ಒಬ್ಬ ಕೆಟ್ಟದ್ದನ್ನು ಮಾಡಿ ಒಳ್ಳೆಯವನು ಎಂದು ಯಶಸ್ಸನ್ನು ಗಳಿಸಬಹುದು. ಇನ್ನೊಬ್ಬ ಜೀವಮಾನವೆಲ್ಲ ಒಳ್ಳೆಯ ಕೆಲಸ ಮಾಡಿ ಬೇಡವಾದ ಅಪವಾದ ಕೇಳಿ ದುರಂತಕ್ಕೊಳಗಾಗಬಹುದು. ಇದು ತೀರ್ಮಾನವಾಗುವುದು ನಮ್ಮ ಜೀವನದ ನಡೆಯ ಮೇಲೆ. ಇದಕ್ಕಾಗಿ ಈ ವಿಷಯದ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು. ಅಪವಾದ ಬಂದಾಗ ಹೇಗಿರಬೇಕು ಎನ್ನುವುದನ್ನು ಕೃಷ್ಣ ತನ್ನ ಜೀವನ ಕ್ರಮದಲ್ಲಿ ನಮಗೆ ತೋರಿಸಿಕೊಟ್ಟಿದ್ದಾನೆ. ಶಮಂತಕ ಮಣಿಯನ್ನು ಕೃಷ್ಣ ಕದ್ದ ಎನ್ನುವ ಅಪವಾದ ಕೃಷ್ಣನಿಗೆ ಬಂದಾಗ ಕೃಷ್ಣನ ನಡೆ ಇದಕ್ಕೆ ಉತ್ತಮ ದೃಷ್ಟಾಂತ.

ಹೀಗೆ “ಈ ಎಲ್ಲಾ ಭಾವಗಳು ಜೀವಜಾತಕ್ಕೆ ಬರುವುದು ನನ್ನಿಂದಲೆ” ಎನ್ನುತ್ತಾನೆ ಕೃಷ್ಣ. ಯಾರಿಗೆ ಯಾವ ಕಾಲದಲ್ಲಿ ಯಾವ ಭಾವ ಬರಬೇಕು ಅನ್ನುವುದು ಭಗವಂತನ ನಿರ್ಧಾರ. ನಮ್ಮ ಮನಸ್ಸಿನ ಸ್ಥಿತಿಯ ಒಂದೊಂದು ಚಲನ-ವಲನ ಭಗವಂತನ ಅಧೀನ. ಇದು ನಾವು ನಮ್ಮ ಉಪಾಸನೆಯಲ್ಲಿ ತಿಳಿದಿರಬೇಕಾದ ಮೂಲಭೂತ ಸತ್ಯ. ಇದು ಕೃಷ್ಣ ಕೊಟ್ಟ ಮಾನಸಿಕ ಉಪಾಸನೆಯ ಅದ್ಭುತ ಚಿತ್ರಣ.

ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು

बुद्धिर्ज्ञानमसम्मोहः क्षमा सत्यं दमः शमः।
सुखं दुःखं भवोऽभावो भयं चाभयमेव च॥

अहिंसा समता तुष्टिस्तपो दानं यशोऽयशः।
भवन्ति भावा भूतानां मत्त एव पृथग्विधाः॥

निश्चय करने की शक्ति, यथार्थ ज्ञान, असम्मूढ़ता, क्षमा, सत्य, इंद्रियों का वश में करना, मन का निग्रह तथा सुख-दुःख, उत्पत्ति-प्रलय और भय-अभय तथा अहिंसा, समता, संतोष तप (स्वधर्म के आचरण से इंद्रियादि को तपाकर शुद्ध करने का नाम तप है), दान, कीर्ति और अपकीर्ति- ऐसे ये प्राणियों के नाना प्रकार के भाव मुझसे ही होते हैं

॥4-5॥

Ahimsaa samataa tushtistapo daanam yasho’yashah;
Bhavanti bhaavaa bhootaanaam matta eva prithagvidhaah.

Non-injury, equanimity, contentment, austerity, fame, beneficence, ill-fame—(these)different kinds of qualities of beings arise from Me alone.
********


BHAGAVAD-GITA🍁
ಅಧ್ಯಾಯ - 10: ಶ್ಲೋಕ – 04
ಬುದ್ಧಿರ್ಜ್ಞಾನಮಸಂಮೋಹಃ ಕ್ಷಮಾ ಸತ್ಯಂ ದಮಃ ಶಮಃ ।
ಸುಖಂ ದುಃಖಂ ಭವೋSಭಾವೋ ಭಯಂ ಚಾಭಯಮೇವ ಚ ॥೪॥
ಬುದ್ಧಿಃ ಜ್ಞಾನಮ್ ಅಸಮ್ಮೋಹಃ ಕ್ಷಮಾ ಸತ್ಯಮ್ ದಮಃ ಶಮಃ ।
ಸುಖಮ್ ದುಃಖಮ್ ಭವಃ ಅಭಾವಃ ಭಯಮ್ ಚ ಅಭಯಮ್ ಏವ ಚ -
-ವಿವೇಕಃ[ಅಂತಃಕರಣ], ಅರಿವು, ಕೆಟ್ಟದ್ದನ್ನು ಮಾಡಬಯಸದಿರುವುದು, ತಪ್ಪಿಗನ ಮೇಲೂ ರೇಗದಿರುವುದು, ದಿಟದ ನಡೆ, ಇಂದ್ರಿಯಗಳ ಹಿಡಿತ, ಭಗವಂತನಲ್ಲಿ ನಿಷ್ಠೆ, ಸುಖ-ದುಃಖ, ಹುಟ್ಟು-ಸಾವು, ಪುಕ್ಕು-ಕೆಚ್ಚು ಈ ಎಲ್ಲ ಬಗೆಗಳೂ ನನ್ನಿಂದಲೆ ಉಂಟಾಗುತ್ತವೆ.
ಭಗವಂತನ ಉಪಾಸನೆಯಲ್ಲಿ ನಾವು ತಿಳಿದಿರಬೇಕಾದ ಮುಖ್ಯವಾದ ವಿಚಾರವನ್ನು ಕೃಷ್ಣ ಇಲ್ಲಿ ವಿವರಿಸುತ್ತಾನೆ. ನಮಗೆ ಬುದ್ಧಿ, ಜ್ಞಾನ, ಅಸಮ್ಮೋಹ, ಕ್ಷಮಾ, ಸತ್ಯಂ, ದಮಃ-ಶಮಃ -ಎಲ್ಲವನ್ನು ಕೊಡುವವನು ಆ ಭಗವಂತ. ಕೆಲವರಿಗೆ ತಾವು ತುಂಬಾ ಬುದ್ಧಿವಂತರು ಎನ್ನುವ ಭ್ರಮೆ ಇರುತ್ತದೆ. ಆದರೆ ಆ ಬುದ್ಧಿಶಕ್ತಿಯನ್ನು ಕರುಣಿಸುವವ ಭಗವಂತ ಎನ್ನುವ ಸತ್ಯವನ್ನು ಅವರು ತಿಳಿದಿರುವುದಿಲ್ಲ. ಕೃಷ್ಣ ಹೇಳುತ್ತಾನೆ: “ನಿನಗೆ ಬುದ್ಧಿ ಕೊಡುವವನೂ ನಾನು, ಜ್ಞಾನ ಕೊಡುವವನೂ ನಾನು” ಎಂದು. ಇಲ್ಲಿ ‘ಜ್ಞಾನ’ ಎಂದರೆ ಒಂದು ವಸ್ತುವಿನ ಅರಿವು. ‘ಬುದ್ಧಿ’ ಎಂದರೆ ಏನು ಮಾಡಬೇಕು, ಏನು ಮಾಡಬಾರದು ಎನ್ನುವ ವಿವೇಕ. ನಮ್ಮಲ್ಲಿ ಬುದ್ಧಿ ಮತ್ತು ಜ್ಞಾನ ಎರಡೂ ಇದ್ದಾಗ ಮಾತ್ರ ಅದು ಪೂರ್ಣ. ಜ್ಞಾನವಿದ್ದು ಬುದ್ಧಿ ಇಲ್ಲದಿದ್ದರೆ ವೇದ ನಮ್ಮಿಂದ ದೂರವಾಗುತ್ತದೆ. “ಆಚಾರ ಹೀನಂ ನ ಪುನಂತಿ ವೇದಾಃ”-ಒಬ್ಬ ಮನುಷ್ಯ ಆಚಾರ ಹೀನನಾಗಿದ್ದರೆ ಅವನನ್ನು ಎಲ್ಲ ವೇದಗಳೂ ಕೈಬಿಡುತ್ತವೆ. ರೆಕ್ಕೆ ಬಲಿತ ಹಕ್ಕಿಮರಿಗಳು ತಮ್ಮ ಗೂಡನ್ನು ಬಿಟ್ಟು ಹಾರಿ ಹೋದಂತೆ ವೇದವಿದ್ಯೆ ಅವನನ್ನು ಬಿಟ್ಟು ಹಾರಿ ಹೋಗುತ್ತದೆ. ಆಚಾರವಂತನಾಗಿರಬೇಕು ಎಂದು ತಿಳಿದಿರುವುದು ಜ್ಞಾನ. ಆದರೆ ಯಾವುದು ಆಚಾರ-ಯಾವುದು ಅನಾಚಾರ ಎನ್ನುವ ವಿವೇಕ ಪ್ರಜ್ಞೆ-ಬುದ್ಧಿ. ಬುದ್ಧಿ-ಜ್ಞಾನದ ಜೊತೆಗೆ ಯಾವುದೇ ಸಂಶಯವಿಲ್ಲದೆ ಸತ್ಯವನ್ನು ತಿಳಿಯುವ ಗ್ರಹಣಶಕ್ತಿ ‘ಅಸಮ್ಮೋಹ’. ಇವು ಬದುಕಿನಲ್ಲಿ ನಮಗೆ ಆಸರೆಯಾಗಿರುವ ಮೂರು ಮುಖ್ಯ ಆಧಾರಸ್ಥಂಭಗಳು. ನಾವು ಇದನ್ನು ತಿಳಿದು ಆ ಭಗವಂತನನ್ನು ಉಪಾಸನೆ ಮಾಡಬೇಕು.
ನಾಲ್ಕನೇ ಗುಣ ‘ಕ್ಷಮಾ’. ಇದು ಅತ್ಯಂತ ದೊಡ್ಡ ಗುಣ. ಯಾರಾದರು ನಮ್ಮನ್ನು ಟೀಕೆ ಮಾಡಿದರೆ- ಆ ಟೀಕೆಯಲ್ಲಿ ನಮ್ಮನ್ನು ನಾವು ತಿದ್ದಿಕೊಳ್ಳುವ ಅಂಶ ಇದ್ದರೆ ತಿದ್ದಿಕೊಳ್ಳುವುದು, ಇಲ್ಲದೆ ಅದು ಕೇವಲ ಅಸೂಯೆಯ ಟೀಕೆಯಾಗಿದ್ದರೆ ಯಾವುದೇ ಪ್ರತಿಕಾರವಿಲ್ಲದೆ ವಿಷಯವನ್ನು ಅಲ್ಲೇ ಬಿಟ್ಟುಬಿಡುವುದು ‘ಕ್ಷಮಾ’.
ಐದನೇ ಗುಣ ‘ಸತ್ಯಂ’. ಸತ್ಯಮ್ ಎಂದರೆ ಪ್ರಾಮಾಣಿಕತೆ. ಇಂದು ನಾವು ಸಜ್ಜನಿಕೆಯನ್ನು ಮರೆತು ಸಜ್ಜೆನಿಕೆಯ ಮುಖವಾಡದಲ್ಲಿ ಬದುಕುತ್ತಿದ್ದೇವೆ. ಅಪ್ರಮಾಣಿಕತೆ ಎನ್ನುವುದು ನಮ್ಮ ಜೀವನವನ್ನು ಆವರಿಸಿಕೊಂಡುಬಿಟ್ಟಿದೆ. ಪ್ರಾಮಾಣಿಕತೆ ಇಲ್ಲದೆ ಯಾವ ಆಚಾರ ಸಂಪತ್ತಿದ್ದರೂ ಉಪಯೋಗವಿಲ್ಲ. ಒಬ್ಬ ವ್ಯಕ್ತಿಯ ಎದುರೊಂದು ಮತ್ತು ಹಿಂದೊಂದು ಮಾತನಾಡುವುದು ಅಪ್ರಮಾಣಿಕತೆ. ನಮಗೆ ಇನ್ನೊಬ್ಬ ವ್ಯಕ್ತಿಯ ವಿಚಾರ ಇಷ್ಟವಾಗದೆ ಇದ್ದಲ್ಲಿ ಅವರಿಗೆ ಅದನ್ನು ನೇರವಾಗಿ ಹೇಳಬಹುದು ಅಥವಾ ಅವರಿಂದ ದೂರವಿರಬೇಕು. ನಮ್ಮಲ್ಲಿ ಪ್ರಾಮಾಣಿಕತೆ ಎಲ್ಲಿಯ ತನಕ ಬೆಳೆಯುವುದಿಲ್ಲವೋ ಅಲ್ಲಿಯ ತನಕ ಯಾವ ಶಾಸ್ತ್ರವೂ ನಮ್ಮನ್ನು ಉದ್ಧಾರ ಮಾಡುವುದಿಲ್ಲ. ನಾವು ನಮಗೆ ಇಂತಹ ಪ್ರಾಮಾಣಿಕತೆ ಕೊಡು ಎಂದು ಭಗವಂತನನ್ನು ಉಪಾಸನೆ ಮಾಡಬೇಕು.
ಆರನೆಯದಾಗಿ ದಮಾಃ. ಇದು ಇಂದ್ರಿಯಗಳಿಗೆ ಸಂಬಂಧಪಟ್ಟಿದ್ದು. ನಮ್ಮ ಇಂದ್ರಿಯಗಳು ನಾವು ಹೇಳಿದಂತೆ ಕೇಳುವುದಿಲ್ಲ. ಅವು ನಮ್ಮನ್ನು ಬೇಡದ ಕಡೆ ಸೆಳೆಯುತ್ತವೆ. ಇದರಿಂದ ನೋಡಬಾರದ್ದನ್ನು ನೋಡುವುದು, ಆಡಬಾರದ್ದನ್ನು ಆಡುವುದನ್ನು ನಾವು ಮಾಡುತ್ತೇವೆ. ಇಂತಹ ಇಂದ್ರಿಯನಿಗ್ರಹ ದಮಾಃ. ಇಂದ್ರಿಯ ನಿಗ್ರಹಕ್ಕೆ ಇರುವ ಏಕಮಾತ್ರ ಮಾರ್ಗ ಭಗವಂತನಲ್ಲಿ ಶರಣಾಗತಿ.
ಏಳನೆಯ ಗುಣ ಶಮಾಃ. ನಮ್ಮ ಮನಸ್ಸು ಶಾಂತವಾಗಿರುವುದು(to be in blissfull state) ಶಮಾಃ. ಇಂದು ನಾವೆಲ್ಲರೂ ಬದುಕುತ್ತಿರುವುದು ಅಶಾಂತಿ(Tension)ಯಿಂದಲೇ! ಇದಕ್ಕೆ ಮೂಲ ಕಾರಣ ನಾವು ನಮ್ಮ ಮನಸ್ಸನ್ನು ಲೌಕಿಕ ವಿಚಾರದಲ್ಲಿ ಕೇಂದ್ರೀಕರಿಸಿ ಸಾಗುತ್ತಿರುವುದು. ಲೌಕಿಕ ವಿಚಾರವನ್ನು ಬಿಟ್ಟು, ಮನಸ್ಸನ್ನು ಭಗವಂತನ ಕಡೆಗೆ ಹರಿಸಿದಾಗ ಮನಸ್ಸು ಹಾಯಾಗುತ್ತದೆ. ಜೀವನದಲ್ಲಿ ಸಮಸ್ಯೆ ಬಂದರೆ “ದೇವರಿದ್ದಾನೆ, ಆತ ಬಿಟ್ಟು ಹಾಕುವುದಿಲ್ಲ” ಎನ್ನುವ ದೃಢನಂಬಿಕೆ ಉಳ್ಳವ ಈ ಸ್ಥಿತಿಯನ್ನು ಗಳಿಸಬಲ್ಲ. ಒಟ್ಟಿನಲ್ಲಿ 'ನಮ್ಮ ಒಳಪ್ರಪಂಚದ ಸರ್ವಸ್ವವೂ ಭಗವಂತ ಎನ್ನುವ ಪರಿಜ್ಞಾನದಿಂದ ನಾವು ಉಪಾಸನೆ ಮಾಡಬೇಕು'-ಎನ್ನುವುದು ಇಲ್ಲಿರುವ ಮೂಲ ಸಂದೇಶ.
ಮುಂದುವರಿದು ಕೃಷ್ಣ ಹೇಳುತ್ತಾನೆ: “ಸುಖ-ದುಃಖ, ಹುಟ್ಟು-ಸಾವು, ಪುಕ್ಕು-ಕೆಚ್ಚು- ಬಗೆ ಬಗೆಯ ಈ ಎಲ್ಲ ಬಗೆಗಳೂ ನನ್ನಿಂದಲೆ ಉಂಟಾಗುತ್ತವೆ” ಎಂದು. ಸುಖ-ದುಃಖ ಎನ್ನುವುದು ದ್ವಂದ್ವ. ಜೀವನದಲ್ಲಿ ಇವೆರಡೂ ಒಟ್ಟಿಗೇ ಇರುತ್ತವೆ ಮತ್ತು ಒಂದರ ನಂತರ ಒಂದು ಬರುತ್ತಿರುತ್ತವೆ. ಯಾರಿಗೂ ಸುಖವಿಲ್ಲದ ದುಃಖವಾಗಲಿ, ದುಃಖವಿಲ್ಲದ ಸುಖವಾಗಲಿ ಇಲ್ಲ. ಇದು ನಮ್ಮ ಜೀವನದಲ್ಲಿ ಹಗಲು-ರಾತ್ರಿ ಇದ್ದಂತೆ. ಈ ಸತ್ಯವನ್ನು ತಿಳಿದಾಗ ದುಃಖವೆನ್ನುವುದು ದುರ್ಬರವಾಗದು. ನಮ್ಮ ಜೀವನದಲ್ಲಿ ಏರಿಳಿತ ಎನ್ನುವುದು ಸಾಮಾನ್ಯ. ಹುಟ್ಟು-ಸಾವು ನೈಸರ್ಗಿಕ. ನಮ್ಮಲ್ಲಿ ಜ್ಞಾನವಿದ್ದರೆ ಅದೇ ಅಭಯ, ಇಲ್ಲದಿದ್ದರೆ ಭಯ. ಇವೆಲ್ಲವೂ ಭಗವಂತನ ಅಧೀನ.
ಹೀಗೆ ಈ ಶ್ಲೋಕದಲ್ಲಿ ಮನುಷ್ಯನ ಮನಸ್ಸಿನಲ್ಲಿ ಮೂಡುವ ಎಲ್ಲಾ ಭಾವನೆಗಳು-ಆ ಭಾವನೆಗಳಿಂದ ಆಗತಕ್ಕ ಎಲ್ಲಾ ಪರಿವರ್ತನೆ ಮತ್ತು ಪರಿಣಾಮಗಳು-ಎಲ್ಲದರ ಹಿಂದಿರುವ ಭಗವತ್ ಶಕ್ತಿ ಬಗ್ಗೆ ಕೃಷ್ಣ ವಿವರಿಸಿದ. ಮುಂದಿನ ಶ್ಲೋಕದಲ್ಲಿ ಕೃಷ್ಣ ನಾವು ಗಳಿಸಿಕೊಳ್ಳಬೇಕಾದ ಏಳು ಮಾನಸಿಕ ಗುಣವನ್ನು ವಿವರಿಸುತ್ತಾನೆ.
ಕೃಪೆ: ಪದ್ಮಶ್ರೀ  ಶ್ರೀ ಬನ್ನಂಜೆ ಗೋವಿಂದಾಚಾರ್ಯರು

बुद्धिर्ज्ञानमसम्मोहः क्षमा सत्यं दमः शमः।
सुखं दुःखं भवोऽभावो भयं चाभयमेव च॥

अहिंसा समता तुष्टिस्तपो दानं यशोऽयशः।
भवन्ति भावा भूतानां मत्त एव पृथग्विधाः॥

निश्चय करने की शक्ति, यथार्थ ज्ञान, असम्मूढ़ता, क्षमा, सत्य, इंद्रियों का वश में करना, मन का निग्रह तथा सुख-दुःख, उत्पत्ति-प्रलय और भय-अभय तथा अहिंसा, समता, संतोष तप (स्वधर्म के आचरण से इंद्रियादि को तपाकर शुद्ध करने का नाम तप है), दान, कीर्ति और अपकीर्ति- ऐसे ये प्राणियों के नाना प्रकार के भाव मुझसे ही होते हैं
॥4-5॥
Buddhir jnaanamasammohah kshamaa satyam damah shamah;
Sukham duhkham bhavo’bhaavo bhayam chaabhayameva cha.

Intellect, wisdom, non-delusion, forgiveness, truth, self-restraint, calmness, happiness,pain, birth or existence, death or non-existence, fear and also fearlessness
*******

BHAGAVAD-GITA🍁

ಅಧ್ಯಾಯ - 10: ಶ್ಲೋಕ – 03
ಯೋ ಮಾಮಜಮನಾದಿಂ ಚ ವೇತ್ತಿ ಲೋಕಮಹೇಶ್ವರಮ್ ।
ಅಸಮ್ಮೂಢಃ ಸ ಮರ್ತ್ಯೇಷು ಸರ್ವಪಾಪೈಃ ಪ್ರಮುಚ್ಯತೇ ॥೩॥
ಯಃ ಮಾಮ್ ಅಜಮ್ ಅನಾದಿಮ್ ಚ ವೇತ್ತಿ ಲೋಕ ಮಹಾ ಈಶ್ವರಮ್ ।
ಅಸಮ್ಮೂಢಃ ಸಃ ಮರ್ತ್ಯೇಷು ಸರ್ವ ಪಾಪೈಃ ಪ್ರಮುಚ್ಯತೇ –

ನಾನು ಹುಟ್ಟಿರದವನು. ಎಲ್ಲವನ್ನು ನಡೆಸುತ್ತ ಎಲ್ಲದರ ಮೊದಲಿದ್ದವನು [ಪ್ರಾಣತತ್ವಕ್ಕೂ ಮೂಲಕಾರಣ]. ಎಲ್ಲ ಲೋಕಗಳ ಒಡೆಯರಿಗು ಹಿರಿಯೊಡೆಯ. ಮನುಜರಲ್ಲಿ ಹೀಗೆ ನನ್ನನ್ನು ತಿಳಿದವನು ಮೋಹವಳಿದವನು. ಅವನು ಪಾಪಗಳಿಂದ ಪಾರಾಗುತ್ತಾನೆ.
ನಮ್ಮಲ್ಲಿ ಕೆಲವರಿಗೆ ಒಂದು ಪ್ರಶ್ನೆ ಬರುವುದಿದೆ. “ಸಕಲ ಜೀವಜಾತವನ್ನು ಭಗವಂತ ಸೃಷ್ಟಿ ಮಾಡಿದರೆ ಆತನನ್ನು ಯಾರು ಸೃಷ್ಟಿ ಮಾಡಿದರು” ಎಂದು. ಒಂದು ವೇಳೆ ಭಗವಂತನನ್ನು ಇನ್ನೊಬ್ಬ ಸೃಷ್ಟಿ ಮಾಡುತ್ತಿದ್ದರೆ ನಾವು ಈತನನ್ನು ದೇವರು ಎಂದು ಹೇಳಲಾಗುತ್ತಿರಲಿಲ್ಲ ಎನ್ನುವ ವಿಚಾರ ಕೂಡ ನಮಗೆ ಹೊಳೆಯುವುದಿಲ್ಲ. ಕೃಷ್ಣನಿಗೆ ನಮ್ಮ ಸಂದೇಹ ಏನು ಎನ್ನುವುದು ಗೊತ್ತು. ಅದಕ್ಕಾಗಿ ಆತ ಈ ಶ್ಲೋಕದಲ್ಲಿ ನಮ್ಮ ಪ್ರಶ್ನೆಗೆ ಉತ್ತರ ನೀಡಿದ್ದಾನೆ. ಕೃಷ್ಣ ಹೇಳುತ್ತಾನೆ “ಯಃ ಮಾಮ್ ಅಜಮ್ ಅನಾದಿಮ್ ” ಎಂದು. ಇಲ್ಲಿ ‘ಅಜ’ ಎಂದರೆ ಹುಟ್ಟಿರದವನು. ಭಗವಂತ ಹುಟ್ಟು ಸಾವಿನಿಂದಾಚೆ ನಿಂತವನು. ಅದಕ್ಕಾಗಿ ನಾವು ಹುಟ್ಟು-ಸಾವಿನಿಂದ ಪಾರಾಗಬೇಕಾದರೆ ಆತನನ್ನು ಉಪಾಸನೆ ಮಾಡಿ ಆತನನ್ನು ಸೇರಬೇಕು. ಭಗವಂತ ಅನಾದಿ. ಇಲ್ಲಿ ಅನಾದಿ(ಅನ+ಆದಿ) ಎಂದರೆ: ‘ಸೃಷ್ಟಿಗೆ ಮೊದಲು ಪ್ರೇರಣೆ ಮಾಡುತ್ತಿದ್ದವ ಮತ್ತು ಸೃಷ್ಟಿ ಮಾಡಿ ಈ ಸೃಷ್ಟಿಯಲ್ಲಿ ಸಮಸ್ತ ವ್ಯಾಪಾರವನ್ನು ನಿಯಂತ್ರಣ ಮಾಡತಕ್ಕ ಸರ್ವೋತ್ಕೃಷ್ಟ ಶಕ್ತಿ’.
ಭಗವಂತ ‘ಲೋಕಮಹೇಶ್ವರಃ’. ಬ್ರಹ್ಮಾದಿ ಸಮಸ್ತ ದೇವತೆಗಳು-'ಲೋಕೇಶರು'. ಅವರನ್ನು ಹೆತ್ತ ಮಾತೆ ಲಕ್ಷ್ಮಿ-'ಲೋಕೇಶ್ವರಿ'. ಅವಳಿಗೂ ಮಹಾನ್-'ಲೋಕಮಹೇಶ್ವರ' ಆ ಭಗವಂತ. ಆತನಿಂದ ಮಹತ್ತಾದ ಇನ್ನೊಂದು ತತ್ವವಿಲ್ಲ.
ಮಹರ್ಷಿಗಳು, ದೇವತೆಗಳು, ಎಲ್ಲರನ್ನು ಸೃಷ್ಟಿ ಮಾಡಿದವ ಆ ಭಗವಂತ. ಆದ್ದರಿಂದ ಇವರ್ಯಾರೂ ಆತನ ಮಹಿಮೆಯ ತುದಿಯನ್ನು ಕಂಡಿಲ್ಲ. ಋಗ್ವೇದದಲ್ಲಿ ಒಂದು ಕಡೆ ಹೀಗೆ ಹೇಳುತ್ತಾರೆ: ‘ನ ತೇ ವಿಷ್ಣೋ ಜಾಯಮಾನೋ ನಾ ಜಾತೋ ದೇವ ಮಹಿಮ್ನಃ ಪರಮಂತಮಾಪ’ ಎಂದು. ಹಿಂದೆ ಹುಟ್ಟಿದವರಾಗಲಿ, ಮುಂದೆ ಹುಟ್ಟುವವನಾಗಲಿ,ಭಗವಂತನ ಮಹಿಮೆಯ ತುತ್ತ ತುದಿಯನ್ನು ತಿಳಿದಿಲ್ಲ, ತಿಳಿಯಲು ಸಾಧ್ಯವಿಲ್ಲ. ಏಕೆಂದರೆ ಅದು ಅನಂತ.
ಈ ಪ್ರಪಂಚ ಸೃಷ್ಟಿ ಹೇಗಾಯಿತು ಎನ್ನುವುದು ಕೂಡಾ ಯಾರಿಗೂ ತಿಳಿದಿಲ್ಲ. ಏಕೆಂದರೆ ಪ್ರಳಯ ಕಾಲದಲ್ಲಿ ಎಲ್ಲವೂ ಭಗವಂತನ ಉದರದಲ್ಲಿ ನಿದ್ರಾವಸ್ತೆಯಲ್ಲಿದ್ದು, ಆ ನಂತರ ಸೃಷ್ಟಿ ಕಾಲದಲ್ಲಿ ಮೊತ್ತ ಮೊದಲಿಗೆ ಚತುರ್ಮುಖನನ್ನು ಭಗವಂತ ಸೃಷ್ಟಿ ಮಾಡಿದ. ಆದ್ದರಿಂದ ಚತುರ್ಮುಖನ ಹುಟ್ಟಿಗೆ ಮೊದಲು ಆರಂಭವಾದ ಈ ಸೃಷ್ಟಿ ನಿರ್ಮಾಣವನ್ನು ಕಂಡವರ್ಯಾರೂ ಇಲ್ಲ. ಇದಕ್ಕಾಗಿ ಋಗ್ವೇದದಲ್ಲಿ “ಈ ಸೃಷ್ಟಿಯ ರಹಸ್ಯ ತಿಳಿದಿದ್ದರೆ ಒಬ್ಬ ಜಾಣ ಮಗನಿಗೆ ತಿಳಿದಿರಬೇಕು” ಎನ್ನುತ್ತಾರೆ. ಆತನೇ ಭಗವಂತನ ಸೃಷ್ಟಿಯ ಮೊದಲ ಜೀವ-‘ಚತುರ್ಮುಖ ಬ್ರಹ್ಮ’. ಈ ಎಲ್ಲಾ ಕಾರಣದಿಂದ ಸಾಮಾನ್ಯ ಮಾನವರಾದ ನಾವು ಭಗವಂತನ ಪೂರ್ಣ ಮಹಿಮೆಯನ್ನು ತಿಳಿಯಲು ಸಾಧ್ಯವೇ ಇಲ್ಲ. ಇದನ್ನು ಆಚಾರ್ಯರು ಹೀಗೆ ಹೇಳಿದ್ದಾರೆ: “ಬಹು ಚಿತ್ರ ಜಗತ್ ಬಹುದಾಕಾರಣಾತ್ ಪರಶಕ್ತಿರನಂತ ಗುಣಃ ಪರಮಃ” ಎಂದು. ಭಗವಂತನ ಸೃಷ್ಟಿಯ ಈ ಪ್ರಪಂಚವೇ ಇಷ್ಟೊಂದು ಅದ್ಭುತವಾಗಿರುವಾಗ ಆ ಸೃಷ್ಟಿಕರ್ತ ಅದೆಷ್ಟು ಅದ್ಭುತವಾಗಿರಬೇಕು. ಆದ್ದರಿಂದ ಭಗವಂತ ಅನಂತ ಎನ್ನುವ ನಿಜವನ್ನರಿತು ಆತನನ್ನು ಉಪಾಸನೆ ಮಾಡುವುದೊಂದೇ ಮೋಕ್ಷ ಮಾರ್ಗ. ಭಗವಂತನ ಬಗ್ಗೆ ಈ ನಿಜವನ್ನು ತಿಳಿದವ ‘ಅಸಮ್ಮೂಢ’. ಆತ ಯಾವ ಭ್ರಮೆಗೂ ಒಳಗಾಗದೆ ಸದಾ ಎಲ್ಲರನ್ನೂ ಪ್ರೀತಿಸುತ್ತ ಎಲ್ಲರಲ್ಲೂ ಭಗವಂತನನ್ನು ಕಾಣುತ್ತಿರುತ್ತಾನೆ. “ಈ ಸತ್ಯವನ್ನರಿತ ಸಾಧಕ ಸರ್ವ ಪಾಪಗಳಿಂದ ಪಾರಾಗುತ್ತಾನೆ” ಎನ್ನುವುದು ಕೃಷ್ಣನ ಭರವಸೆ.
ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು

यो मामजमनादिं च वेत्ति लोकमहेश्वरम्‌।
असम्मूढः स मर्त्येषु सर्वपापैः प्रमुच्यते॥

जो मुझको अजन्मा अर्थात्‌ वास्तव में जन्मरहित, अनादि (अनादि उसको कहते हैं जो आदि रहित हो एवं सबका कारण हो) और लोकों का महान्‌ ईश्वर तत्त्व से जानता है, वह मनुष्यों में ज्ञानवान्‌ पुरुष संपूर्ण पापों से मुक्त हो जाता है
॥3॥
Yo maamajamanaadim cha vetti lokamaheshwaram;
Asammoodhah sa martyeshu sarvapaapaih pramuchyate.

He who knows Me as unborn and beginningless, as the great Lord of the worlds, he,among mortals, is undeluded;
he is liberated from all sins.COMMENTARY: As the Supreme Being is the cause of all the worlds, He isbeginningless. As He is the source of all the gods and the great sages, so there is no source for Hisown existence. As He is beginningless, He is unborn. He is the great Lord of all the worlds.

*******

BHAGAVAD-GITA🍁

ಅಧ್ಯಾಯ - 10: ಶ್ಲೋಕ – 05
ಅಹಿಂಸಾ ಸಮತಾ ತುಷ್ಟಿಸ್ತಪೋ ದಾನಂ ಯಶೋSಯಶಃ।
ಭವಂತಿ ಭಾವಾ ಭೂತಾನಾಂ ಮತ್ತ ಏವ ಪೃಥಗ್ ವಿಧಾಃ ॥೫॥
ಅಹಿಂಸಾ ಸಮತಾ ತುಷ್ಟಿಃ ತಪಃ (ಅ)ದಾನಮ್ ಯಶಃ ಅಯಶಃ।
ಭವಂತಿ ಭಾವಾಃ ಭೂತಾನಾಮ್ ಮತ್ತಃ ಏವ ಪೃಥಕ್ ವಿಧಾಃ -

- ಅಹಿಂಸೆ, ಸಮದೃಷ್ಟಿ, ತೃಪ್ತಿ, ತಪಸ್ಸು, ದಾನ, ಹೆಸರು, ಕೆಟ್ಟ ಹೆಸರು- ಬಗೆ ಬಗೆಯ ಈ ಎಲ್ಲ ಬಗೆಗಳೂ ನನ್ನಿಂದಲೆ ಉಂಟಾಗುತ್ತವೆ.
ಕೃಷ್ಣ ಹೇಳುತ್ತಾನೆ “ಅಹಿಂಸೆ, ಸಮದೃಷ್ಟಿ, ತೃಪ್ತಿ, ತಪಸ್ಸು, (ಅ)ದಾನ, ಹೆಸರು, ಕೆಟ್ಟ ಹೆಸರು” ಇವು ನನ್ನಿಂದ ಎಂದು. ಇಲ್ಲಿ ಅಹಿಂಸೆ ಮತ್ತು ಸಮದೃಷ್ಟಿ ತುಂಬಾ ವಿಶೇಷವಾದುದ್ದು. ಏಕೆಂದರೆ ಹಿಂಸೆಯೂ ಕೆಲವೊಮ್ಮೆ ಅಹಿಂಸೆಯಾಗುತ್ತದೆ ಮತ್ತು ಅಸಮಾನತೆಯೂ ಸಮಾನತೆಯಾಗುತ್ತದೆ. ಅದಕ್ಕಾಗಿ ಇದನ್ನು ಇಲ್ಲಿ ವಿಶೇಷವಾಗಿ ಪ್ರಸ್ತಾಪಿಸಿದ್ದಾನೆ ಕೃಷ್ಣ.
ಮೊದಲಿಗೆ ಅಹಿಂಸೆ: ಇನ್ನೊಬ್ಬರಿಗೆ ತೊಂದರೆಯಾಗದಂತೆ ಬದುಕುವುದು ಅಹಿಂಸೆ. ಇಲ್ಲಿ ಅಹಿಂಸೆ ಎಂದರೆ ಕೇವಲ ಶಾರೀರಿಕವಾಗಿ ಮಾತ್ರವಲ್ಲ, ಮನಸ್ಸು ಮತ್ತು ಮಾತಿನಲ್ಲೂ ನಾವು ಅಹಿಂಸೆಯನ್ನು ಸಾಧಿಸಬೇಕು. ಉದಾಹರಣೆಗೆ: ಒಬ್ಬರನ್ನು ಚುಚ್ಚು ಮಾತಿನಿಂದ ಹಂಗಿಸುವುದು, ಮಾನಸಿಕವಾಗಿ ಇನ್ನೊಬ್ಬರನ್ನು ನಿಂದಿಸುವುದು ಅಥವಾ ಶಾಪ ಹಾಕುವುದು ಕೂಡಾ ಹಿಂಸೆ. ಕೆಲವೊಮ್ಮೆ ಹಿಂಸೆಯೇ ಅಹಿಂಸೆಯಾಗುತ್ತದೆ. ಉದಾಹರಣೆಗೆ: ಒಂದು ನರಭಕ್ಷಕ ಹುಲಿಯನ್ನು ಕೊಲ್ಲುವುದರಿಂದ ಊರಿನ ಅನೇಕ ಜನರ ಪ್ರಾಣ ಉಳಿಯುವುದಾದರೆ ಅದನ್ನು ಕೊಲ್ಲುವುದು ಅಹಿಂಸೆ.[ನಾವು ಈ ರೀತಿಯ ಅಹಿಂಸೆಯನ್ನು ಕೃಷ್ಣನ ಅನೇಕ ಕೃತಿಗಳಲ್ಲಿ ಕಾಣುತ್ತೇವೆ]. ದೊಡ್ಡ ಹಿಂಸೆಯನ್ನು ತಡೆಯುವುದಕ್ಕೊಸ್ಕರ ಮಾಡುವ ಚಿಕ್ಕ ಹಿಂಸೆ-ಅಹಿಂಸೆ. ನಾವು ನಮ್ಮ ಮಾತಿನಿಂದ, ಕೃತಿಯಿಂದ ಮತ್ತು ಮನಸ್ಸಿನಿಂದ ಇನ್ನೊಬ್ಬರಿಗೆ ಹಿಂಸೆಯಾಗದಂತೆ ನಡೆದುಕೊಳ್ಳಬೇಕು.
ಎರಡನೆಯ ಗುಣ ಸಮದೃಷ್ಟಿ (ಸಮತಾಃ) : ಇಲ್ಲಿ ಸಮದೃಷ್ಟಿ ಎಂದರೆ ಎಲ್ಲರನ್ನೂ ಏಕ ರೂಪದಲ್ಲಿ ನೋಡುವುದು ಎಂದರ್ಥವಲ್ಲ. ಇದು ಯೋಗ್ಯತೆಗನುಗುಣವಾದ ಸಮದೃಷ್ಟಿ. ಉದಾಹರಣೆಗೆ: ಒಂದು ಶಾಲೆಯಲ್ಲಿ ಚನ್ನಾಗಿ ಓದಿ ಬರೆದ ವಿದ್ಯಾರ್ಥಿ ಹಾಗು ಓದದೆ ಪೋಲಿಯಾಗಿರುವ ಇನ್ನೊಬ್ಬ ವಿದ್ಯಾರ್ಥಿಗೆ ಸಮನಾದ ಅಂಕವನ್ನು ಕೊಡುವುದು ಸಮಾನತೆ ಅಲ್ಲ. ಯಾವುದೇ ದ್ವೇಷವಿಲ್ಲದೆ, ಶತ್ರು, ಮಿತ್ರ, ಸ್ಥಳೀಯ, ಪರಕೀಯ ಎನ್ನುವ ಭೇದವಿಲ್ಲದೆ, ಅವರವರ ಯೋಗ್ಯತೆಗೆ ತಕ್ಕಂತೆ ಅಂಕ ವಿತರಣೆ ಮಾಡುವುದು ಸಮಾನತೆ. ಯಾರನ್ನು ಹೇಗೆ ನೋಡಬೇಕೋ ಅವರನ್ನು ಹಾಗೆ ನೋಡುವುದು. ತಂದೆಯನ್ನು ತಂದೆಯಂತೆ, ತಾಯಿಯನ್ನು ತಾಯಿಯಂತೆ, ಗುರುವನ್ನು ಗುರುವಂತೆ ಹೀಗೆ ಯಾರು ಸಮಾನರೋ ಅವರನ್ನು ಸಮಾನವಾಗಿ ಗೌರವಿಸುವುದು ಸಮದೃಷ್ಟಿ.
ಮೂರನೆಯ ಗುಣ ತೃಪ್ತಿ: ಮನುಷ್ಯನ ಎಲ್ಲಾ ದುಃಖಗಳಿಗೆ ಮುಖ್ಯ ಕಾರಣ ಅತೃಪ್ತಿ. ಇಂದಿನ ಸಮಾಜದಲ್ಲಿ ನಮ್ಮ ಮನೆಯಲ್ಲಿ ನಮಗೆ ಅಗತ್ಯಕ್ಕೆ ಬೇಕಾದಷ್ಟು ಇದ್ದರೂ ಕೂಡ ಮಾಧ್ಯಮಗಳಲ್ಲಿ ಬರುವ ಜಾಹಿರಾತಿಗೆ ಮರುಳಾಗಿ, ಅಥವಾ ನೆರಮನೆಯವರಿಗೆ ಪ್ರತಿಸ್ಪರ್ಧಿಯಾಗಿ, ಸದಾ ಅತೃಪ್ತಿಯಲ್ಲಿ ನಾವು ಬದುಕುತ್ತೇವೆ. ಕೆಲಸ ಇಲ್ಲದಾಗ ಕೆಲಸದ ಆಸೆ, ನಂತರ ಎಷ್ಟು ಸಂಬಳ ಬಂದರೂ ಅಲ್ಲಿ ಅತೃಪ್ತಿ. ಇಲ್ಲದ್ದನ್ನು ಯೋಚಿಸಿ ಕೊರಗದೆ, ಇದ್ದದ್ದನ್ನು ಯೋಚಿಸಿ ಖುಷಿ ಪಡುವುದು(Be content with whatever you have) ನಿಜವಾದ ತೃಪ್ತಿ.
ನಾಲ್ಕನೆಯದು ತಪಸ್ಸು: ಇದರಲ್ಲಿ ಮೂರು ಬಗೆ: ಕಾಯಾ-ವಾಚಾ-ಮನಸಾ ತಪಃ. ಕಾಯ ಅಂದರೆ ದೇಹ. ದೇಹದ ಮೂಲಕ ತಪಸ್ಸು. ಸಾಮಾನ್ಯವಾಗಿ ದೇಹ ಹೇಳಿದಂತೆ ಕೇಳದೆ ಇರುವುದು ಆಹಾರ ಅತ್ಯಯ ಅಥವಾ ವ್ಯತ್ಯಯದಿಂದ. ಆಹಾರ ನಿಯಂತ್ರಣ ಮಾಡಿದಾಗ ಮನಸ್ಸು ನಿಯಂತ್ರಣಕ್ಕೆ ಬರುತ್ತದೆ. ಮನಸ್ಸು ನಿಯಂತ್ರಣದಲ್ಲಿದ್ದರೆ ದೇಹ ಸ್ಥಿರವಾಗಿರಲು ಸಾಧ್ಯ. ಇದಕ್ಕಾಗಿ ನಾನಾ ರೀತಿಯ ನಿಯಂತ್ರಣ ಸಾಧನವಾದ ವೃತಾನುಷ್ಠಾನ ಮಾಡುವುದು. ಒಟ್ಟಿನಲ್ಲಿ ಅಹಂಕಾರ ಅಸೂಯೆ ಪಡದೆ ಬಗ್ಗುವ ಗುಣ ಬರುವುದು ದೇಹದ ತಪಸ್ಸಿನಿಂದ. ಇನ್ನೊಬ್ಬರಿಗೆ ಹಿತವೆನಿಸುವ, ಸತ್ಯವಾದ-ಸಹಜ ಮಾತನ್ನಾಡುವುದು; ಶಾಸ್ತ್ರಗಳ ಶ್ರವಣ-ಮನನ ಮಾಡಿ ಅದರಿಂದ ಸ್ವಪ್ರವಚನ ಅಭ್ಯಸಿಸಿ ಅದನ್ನು ಅರಗಿಸಿಕೊಂಡು ಇನ್ನೊಬ್ಬರಿಗೆ ಪ್ರವಚನ ಮಾಡಿ, ಮುಂದಿನ ತಲೆಮಾರಿಗೆ ಕೊಡುವುದು ವಾಚ-ತಪಃ. ಮಾನಸಿಕವಾಗಿ ಸದಾ ಆಳವಾದ ಚಿಂತನೆ ಮನಸಾ-ತಪಃ.
ಐದನೆಯದು (ಅ)ದಾನ: ದಾನ ಶಬ್ದಕ್ಕೆ ಸಂಸ್ಕೃತದಲ್ಲಿ ಎರಡು ಅರ್ಥವಿದೆ. ಒಂದು ‘ಕೊಡುವುದು’ ಇನ್ನೊಂದು ‘ತುಂಡರಿಸುವುದು’. ಕೊಡುವುದರಿಂದ ಅದು ನಮ್ಮ ಪಾಪವನ್ನು ತುಂಡರಿಸಿದರೆ ಅದು ದಾನ. ಬದಲಿಗೆ ನಮ್ಮ ಪುಣ್ಯವನ್ನು ತುಂಡರಿಸಿದರೆ ಅದು ಅದಾನ.
ನಮಗೆ ಅನುಪಯುಕ್ತವಾದ ವಸ್ತುವನ್ನು ಸಾಗಹಾಕುವುದಕ್ಕೋಸ್ಕರ ಕೊಡುವ ದಾನ ದಾನವಲ್ಲ. ಅತೀ ಅಗತ್ಯವಾದ ವಸ್ತು ಇನ್ನೊಬ್ಬರಲ್ಲಿ ಇಲ್ಲದೆ ಅದು ನಮ್ಮಲ್ಲಿ ಇದ್ದರೆ, ನಮ್ಮಲ್ಲಿರುವುದನ್ನು ಅವರಿಗೆ ಹಂಚಿ ಅವರ ಕೊರತೆ ನೀಗಿಸುವುದು ನಿಜವಾದ ದಾನ. ಒಬ್ಬ ವ್ಯಕ್ತಿ ಒಂದು ಹೊತ್ತಿನ ಊಟಕ್ಕೆ ಗತಿ ಇಲ್ಲದೆ ಪರದಾಡುತ್ತಿರುವಾಗ ನಮ್ಮಲ್ಲಿ ಎರಡು ಹೊತ್ತಿನ ಊಟಕ್ಕಾಗುವಷ್ಟು ಧಾನ್ಯವಿದ್ದರೆ, ನಮ್ಮ ನಾಳೆಯ ಬಗ್ಗೆ ಯೋಚಿಸದೆ, ಆ ವ್ಯಕ್ತಿಗೆ ಒಂದು ಹೊತ್ತಿನ ಧಾನ್ಯವನ್ನು ದಾನ ಮಾಡುವುದು ನಿಜವಾದ ದಾನ.
ದಾನದಲ್ಲಿ ಅಶನ-ವಸನ-ಅನ್ನ ಇದನ್ನು ಯಾರಿಗೆ ಬೇಕಾದರೂ ದಾನ ಮಾಡಬಹುದು. ಇರುವುದಕ್ಕೆ ತಾಣ, ಉಡುವುದಕ್ಕೆ ಬಟ್ಟೆ, ಹಸಿದವನಿಗೆ ಅನ್ನ. ಇದನ್ನು ಕೊಡುವುದಕ್ಕೆ ಯೋಗ್ಯ-ಅಯೋಗ್ಯ ಎನ್ನುವ ನಿರ್ಬಂಧವಿಲ್ಲ. ಆದರೆ ಇತರೆ ವಸ್ತುವನ್ನು ದಾನ ಮಾಡುವಾಗ ಯಾವುದು ಯಾರಿಗೆ ಅಗತ್ಯ ಮತ್ತು ಯೋಗ್ಯ ಎಂದು ನೋಡಿ ದಾನ ಮಾಡಬೇಕು. ಪ್ರಚಾರಕ್ಕಾಗಿ ದಾನ ಮಾಡುವುದು-ಅದಾನ. ಯಾವುದೇ ಬಯಕೆ ಇಲ್ಲದೆ ನಿಷ್ಪೃಹತೆಯಿಂದ ಕರ್ತವ್ಯ ದೃಷ್ಟಿಯಿಂದ ಯೋಗ್ಯವಾದ ದೇಶದಲ್ಲಿ, ಯೋಗ್ಯವಾದ ಕಾಲದಲ್ಲಿ, ಯೋಗ್ಯವಾದ ವ್ಯಕ್ತಿಗೆ ಮಾಡುವ ದಾನ ನಿಜವಾದ ದಾನ.
ಕೊನೆಯದಾಗಿ ಕೃಷ್ಣ ಯಶಃ-ಅಯಶಃವನ್ನು ಇಲ್ಲಿ ಹೇಳಿದ್ದಾನೆ. ಇದು ತುಂಬಾ ವಿಚಿತ್ರವಾದದ್ದು. ಒಬ್ಬ ಕೆಟ್ಟದ್ದನ್ನು ಮಾಡಿ ಒಳ್ಳೆಯವನು ಎಂದು ಯಶಸ್ಸನ್ನು ಗಳಿಸಬಹುದು. ಇನ್ನೊಬ್ಬ ಜೀವಮಾನವೆಲ್ಲ ಒಳ್ಳೆಯ ಕೆಲಸ ಮಾಡಿ ಬೇಡವಾದ ಅಪವಾದ ಕೇಳಿ ದುರಂತಕ್ಕೊಳಗಾಗಬಹುದು. ಇದು ತೀರ್ಮಾನವಾಗುವುದು ನಮ್ಮ ಜೀವನದ ನಡೆಯ ಮೇಲೆ. ಇದಕ್ಕಾಗಿ ಈ ವಿಷಯದ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು. ಅಪವಾದ ಬಂದಾಗ ಹೇಗಿರಬೇಕು ಎನ್ನುವುದನ್ನು ಕೃಷ್ಣ ತನ್ನ ಜೀವನ ಕ್ರಮದಲ್ಲಿ ನಮಗೆ ತೋರಿಸಿಕೊಟ್ಟಿದ್ದಾನೆ. ಶಮಂತಕ ಮಣಿಯನ್ನು ಕೃಷ್ಣ ಕದ್ದ ಎನ್ನುವ ಅಪವಾದ ಕೃಷ್ಣನಿಗೆ ಬಂದಾಗ ಕೃಷ್ಣನ ನಡೆ ಇದಕ್ಕೆ ಉತ್ತಮ ದೃಷ್ಟಾಂತ.
ಹೀಗೆ “ಈ ಎಲ್ಲಾ ಭಾವಗಳು ಜೀವಜಾತಕ್ಕೆ ಬರುವುದು ನನ್ನಿಂದಲೆ” ಎನ್ನುತ್ತಾನೆ ಕೃಷ್ಣ. ಯಾರಿಗೆ ಯಾವ ಕಾಲದಲ್ಲಿ ಯಾವ ಭಾವ ಬರಬೇಕು ಅನ್ನುವುದು ಭಗವಂತನ ನಿರ್ಧಾರ. ನಮ್ಮ ಮನಸ್ಸಿನ ಸ್ಥಿತಿಯ ಒಂದೊಂದು ಚಲನ-ವಲನ ಭಗವಂತನ ಅಧೀನ. ಇದು ನಾವು ನಮ್ಮ ಉಪಾಸನೆಯಲ್ಲಿ ತಿಳಿದಿರಬೇಕಾದ ಮೂಲಭೂತ ಸತ್ಯ. ಇದು ಕೃಷ್ಣ ಕೊಟ್ಟ ಮಾನಸಿಕ ಉಪಾಸನೆಯ ಅದ್ಭುತ ಚಿತ್ರಣ.
ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು

बुद्धिर्ज्ञानमसम्मोहः क्षमा सत्यं दमः शमः।
सुखं दुःखं भवोऽभावो भयं चाभयमेव च॥

अहिंसा समता तुष्टिस्तपो दानं यशोऽयशः।
भवन्ति भावा भूतानां मत्त एव पृथग्विधाः॥

निश्चय करने की शक्ति, यथार्थ ज्ञान, असम्मूढ़ता, क्षमा, सत्य, इंद्रियों का वश में करना, मन का निग्रह तथा सुख-दुःख, उत्पत्ति-प्रलय और भय-अभय तथा अहिंसा, समता, संतोष तप (स्वधर्म के आचरण से इंद्रियादि को तपाकर शुद्ध करने का नाम तप है), दान, कीर्ति और अपकीर्ति- ऐसे ये प्राणियों के नाना प्रकार के भाव मुझसे ही होते हैं
॥4-5॥
Ahimsaa samataa tushtistapo daanam yasho’yashah;
Bhavanti bhaavaa bhootaanaam matta eva prithagvidhaah.

Non-injury, equanimity, contentment, austerity, fame, beneficence, ill-fame—(these)different kinds of qualities of beings arise from Me alone.
*******


BHAGAVAD-GITA 🍁ಅಧ್ಯಾಯ - 09: ಶ್ಲೋಕ – 31
ಕ್ಷಿಪ್ರಂ ಭವತಿ ಧರ್ಮಾತ್ಮಾ ಶಶ್ವಚ್ಛಾನ್ತಿಂ ನಿಗಚ್ಛತಿ ।ಕೌಂತೇಯ ಪ್ರತಿಜಾನೀಹಿ ನ ಮೇ ಭಕ್ತಃ ಪ್ರಣಶ್ಯತಿ ॥೩೧॥ ಕ್ಷಿಪ್ರಮ್ ಭವತಿ ಧರ್ಮ ಆತ್ಮಾ ಶಶ್ವತ್ ಶಾಂತಿಮ್ ನಿಗಚ್ಛತಿ । ಕೌಂತೇಯ ಪ್ರತಿಜಾನೀಹಿ ನ ಮೇ ಭಕ್ತಃ ಪ್ರಣಶ್ಯತಿ – ಅವನು ಒಡನೆಯೆ ಸರಿದಾರಿ ಹಿಡಿಯುತ್ತಾನೆ; ಅಳಿವಿರದ ಸುಖದ ಸೆಲೆಯನ್ನು ಪಡೆಯುತ್ತಾನೆ. ಕೌಂತೇಯ, ಇದನ್ನು ಆಣೆಯಿಟ್ಟಾಡು: ‘ನನ್ನ ಭಕ್ತನೆಂದೂ ಕೆಡುವುದಿಲ್ಲ’. ಹೀಗೆ ಪ್ರರಾಬ್ಧ ಕರ್ಮದಿಂದ ದಾರಿತಪ್ಪಿದವರು ಯಾವುದೋ ಒಂದು ಸಂದರ್ಭದಲ್ಲಿ ಒಡನೆಯೇ ತಾವು ಮಾಡುತ್ತಿರುವ ತಪ್ಪಿನ ಅರಿವಾಗಿ ಸರಿದಾರಿಯನ್ನು ಹಿಡಿಯುತ್ತಾನೆ, ಮತ್ತು ಅಳಿವಿರದ ಮೋಕ್ಷವನ್ನು ಸೇರುತ್ತಾನೆ. ಇದು ನಿಶ್ಚಿತ. ಇದನ್ನು ನೀನು ಆಣೆಮಾಡಿ ಹೇಳು ಎನ್ನುತ್ತಾನೆ ಕೃಷ್ಣ. ಇದಕ್ಕೆ ಉತ್ತಮ ಉದಾಹರಣೆ ಅಜಾಮಿಳನ ಕಥೆ. ತನ್ನ ಜೀವನದಲ್ಲಿ ಮಾಡಬಾರದ್ದನ್ನೆಲ್ಲಾ ಮಾಡಿದ ಅಜಾಮಿಳ ಮೂಲತಃ ಒಬ್ಬ ಶ್ರೇಷ್ಠ ಜೀವ. ಇಂತಹ ಅಜಾಮಿಳನಿಗೆ ಭಗವಂತ ಜೀವನದ ಕೊನೆಗಾಲದಲ್ಲಿ ಸತ್ಯದ ದಾರಿ ತೋರಿಸಿ ಉದ್ಧಾರ ಮಾಡುತ್ತಾನೆ. ಆತ ತನ್ನ ಕೊನೆಗಾಲದಲ್ಲಿ ಸಾಧನೆ ಮಾಡಿ ಮೋಕ್ಷವನ್ನು ಸೇರುತ್ತಾನೆ. ಇಲ್ಲಿ ಕೃಷ್ಣ ಅರ್ಜುನನಲ್ಲಿ ಏಕೆ “ನೀನು ಪ್ರತಿಜ್ಞೆ ಮಾಡು” ಎಂದು ಹೇಳುತ್ತಾನೆ ಎಂದರೆ-ಭಗವಂತ ಭಕ್ತರಿಗಾಗಿ ತನ್ನ ಪ್ರತಿಜ್ಞೆಯನ್ನು ಮುರಿದಾನು ಆದರೆ ಎಂದೂ ಭಕ್ತರ ಪ್ರತಿಜ್ಞೆಯನ್ನಲ್ಲ. ಇದಕ್ಕೆ ಉದಾಹರಣೆ ಮಹಾಭಾರತ ಯುದ್ಧದಲ್ಲಿ ನಡೆದ ಒಂದು ಘಟನೆ: ಮಹಾಭಾರತ ಯುದ್ಧದ ಮೊದಲು ತಾನು ಶಸ್ತ್ರ ಹಿಡಿಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದ ಕೃಷ್ಣ, ಯುದ್ಧದ ನಡುವೆ ಅರ್ಜುನ ಭೀಷ್ಮನ ಎದುರು ಯುದ್ಧ ಮಾಡುವುದಕ್ಕೆಹಿಂಜರಿದಾಗ, ಕೋಪಾವೇಶದಿಂದ ಭೀಷ್ಮನನ್ನು ಸಾಯಿಸಲೆಂಬಂತೆ ರಥದಚಕ್ರವೊಂದನ್ನು ಹಿಡಿದು ಮುಂದೊತ್ತಿ ಬರುತ್ತಾನೆ! ಇದನ್ನು ನೋಡಿದ ಬೀಷ್ಮ ತನ್ನ ಎರಡೂ ಕೈಗಳನ್ನು ಜೋಡಿಸಿ ಹೀಗೆ ಹೇಳುತ್ತಾನೆ: " ಓ ಭಗವಂತ; ನಿನ್ನ ಕೈಯಲ್ಲಿ ಚಕ್ರ ಹಿಡಿಸುತ್ತೇನೆ, ಹಾಗೆ ಯುದ್ಧ ಮಾಡಿಸುತ್ತೇನೆ ಎಂದು ನಾನು ಪ್ರತಿಜ್ಞೆ ಮಾಡಿದ್ದೆ. ಚಕ್ರ ಹಿಡಿಯುವುದಿಲ್ಲ ಎಂದಿದ್ದೆ ನೀನು. ಆದರೆ ಈಗ ನನ್ನ ಪ್ರತಿಜ್ಞೆಯನ್ನು ಈಡೇರಿಸಲು ನೀನು ಚಕ್ರ ಹಿಡಿದಿರುವೆ. ನಿನ್ನನ್ನೇ ನೀನು ಮರೆತಿರುವೆ, ಆದರೆ ನಿನ್ನ ಭಕ್ತನ ಪ್ರತಿಜ್ಞೆಯನ್ನಲ್ಲ;ನೀನಲ್ಲದೆ ನಮಗೆ ಗತಿ ಇನ್ಯಾರು?" ಎಂದು. ಈ ಘಟನೆಯಲ್ಲಿ ಭಗವಂತ ಎಂತಹ ಭಕ್ತವತ್ಸಲ ಎನ್ನುವುದು ತಿಳಿಯುತ್ತದೆ.
 ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು 

 क्षिप्रं भवति धर्मात्मा शश्वच्छान्तिं निगच्छति। 
 कौन्तेय प्रतिजानीहि न मे भक्तः प्रणश्यति॥ 

 वह शीघ्र ही धर्मात्मा हो जाता है और सदा रहने वाली परम शान्ति को प्राप्त होता है। हे अर्जुन! तू निश्चयपूर्वक सत्य जान कि मेरा भक्त नष्ट नहीं होता 

 31॥ 
Kshipram bhavati dharmaatmaa shashwacchaantim nigacchati; 
 Kaunteya pratijaaneehi na me bhaktah pranashyati. 

 Soon he becomes righteous and attains to eternal peace; O Arjuna, know thou for certainthat My devotee is never destroyed!
********

 BHAGAVAD-GITA🍁 

 ಅಧ್ಯಾಯ - 09: ಶ್ಲೋಕ – 28 

 ಭಾಗವತ ಧರ್ಮ ಅನುಷ್ಠಾನದಿಂದ ಎನು ಫಲ ಎನ್ನುವುದನ್ನು ಕೃಷ್ಣ ಮುಂದಿನ ಶ್ಲೋಕದಲ್ಲಿ ವಿವರಿಸುತ್ತಾನೆ. 

 ಶುಭಾಶುಭಫಲೈರೇವಂ ಮೋಕ್ಷ್ಯಸೇ ಕರ್ಮಬಂಧನೈಃ ।
ಸಂನ್ಯಾಸಯೋಗಯುಕ್ತಾತ್ಮಾ ವಿಮುಕ್ತೋ ಮಾಮುಪೈಷ್ಯಸಿ ॥೨೮॥

 ಶುಭ ಅಶುಭ ಭಲೈಃ ಏವಮ್ ಮೋಕ್ಷ್ಯಸೇ ಕರ್ಮ ಬಂಧನೈಃ ।
 ಸಂನ್ಯಾಸ ಯೋಗ ಯುಕ್ತ ಆತ್ಮಾ ವಿಮುಕ್ತಃ ಮಾಮ್ ಉಪೈಷ್ಯಸಿ- 

 ಹೀಗೆ ಬದುಕಿದಾಗ, ಒಳಿತು-ಕೆಡುಕುಗಳ ಕಡೆಗೆಳೆವ ಕರ್ಮದ ಸೆರೆಯಿಂದ ಪಾರಾಗುವೆ. ಫಲದ ಹಂಗು ತೊರೆದು ಕರ್ತವ್ಯದಲ್ಲಿ ಬಗೆ ತೊಡಗಿಸುತ್ತ ಸೆರೆ ಕಳಚಿಕೊಂಡು ನನ್ನ ಬಳಿ ಸೇರುವೆ. ನಾವು ಯಾವುದೇ ಕರ್ಮವನ್ನು ‘ನನಗೆ ಇಂತಹ ಫಲ ಬರಬೇಕು’ ಎನ್ನುವ ಫಲದ ನಂಟಿನಿಂದ ಮತ್ತು ‘ನಾನು ಈ ಕರ್ಮವನ್ನು ಮಾಡಿದೆ’ ಎನ್ನುವ ಅಹಮ್ ಇದ್ದು ಮಾಡಿದಾಗ ಆ ಕರ್ಮ ನಮಗೆ ಅಂಟುತ್ತದೆ. ಅದಕ್ಕೋಸ್ಕರ ಹಿಂದಿನ ಕಾಲದಲ್ಲಿ ‘ಕರ್ಮಕರಿಷ್ಯೇ’ ಎಂದು ಸಂಕಲ್ಪ ಮಾಡುವಾಗ ಈ ರೀತಿ ಹೇಳುತ್ತಿದ್ದರು: 
 ಭಗವತೋ ಬಲೇನ ಭಗವತೋ ವೀರ್ಯೇನ ಭಗವದಃ ತೇಜಸಾ |ಭಗವತಾ ಕರ್ಮಣಾ ಕರ್ಮಕರಿಷ್ಯಾಮಿ ಭಗವತೋ ವಾಸುದೇವಸ್ಯಃ ||
 “ನಾನು ಮಾಡುವ ಕರ್ಮ ನನ್ನ ಕರ್ಮವಲ್ಲ, ನನ್ನೊಳಗಿರುವ ಭಗವಂತ ಮಾಡುವ ಕರ್ಮ. ಅದರ ಹಿಂದಿರುವ ಶಕ್ತಿ ಸಾಮರ್ಥ್ಯ ಎಲ್ಲವೂ ಭಗವಂತನದ್ದು, ನನ್ನದೇನೂ ಇಲ್ಲ” ಎಂದು. ಇದು ಭಾಗವತಧರ್ಮದ ಸಂಕಲ್ಪ. ಭಗವತ್ ಪ್ರೀತ್ಯರ್ಥ ಮಾಡಿದ ಯಾವ ಕರ್ಮವೂ ನಮಗೆ ಬಂಧನವಾಗುವುದಿಲ್ಲ. ಬ್ರಹ್ಮಸೂತ್ರದಲ್ಲಿ ವೇದವ್ಯಾಸರು ಇದನ್ನು ಹೀಗೆ ಹೇಳಿದ್ದಾರೆ: “ಭಗವಂತನ ಜ್ಞಾನ ನಮ್ಮೊಳಗೆ ದೃಢವಾಗಿ ಅಪರೋಕ್ಷವಾದಾಗ, ಹಿಂದೆ ಫಲಕಾಮನೆಯಿಂದ ಮಾಡಿದ ಎಲ್ಲಾ ಪಾಪಗಳನ್ನು ಆ ಜ್ಞಾನಾಗ್ನಿ ಸುಟ್ಟುಬಿಡುತ್ತದೆ” ಎಂದು. ಆದ್ದರಿಂದ ಜ್ಞಾನ ಎಲ್ಲಕ್ಕಿಂತ ಶ್ರೇಷ್ಠ. ಇದನ್ನು ನಾವು ಕಠೋಪನಿಷತ್ತಿನಲ್ಲಿ ಬರುವ ಯಮ ಮತ್ತು ನಚಿಕೇತನ ಸಂಭಾಷಣೆಯಲ್ಲಿ ಕಾಣುತ್ತೇವೆ. ಅಲ್ಲಿ ನಚಿಕೇತ ಯಮನಲ್ಲಿ ಜ್ಞಾನವನ್ನು ವರವಾಗಿ ಬೇಡಿದಾಗ ಯಮ ಆತನಿಗೆ “ನಿನಗೆ ಎಷ್ಟು ಸಂಪತ್ತು ಬೇಕು ಅದನ್ನು ಕೇಳು, ನಿನ್ನನ್ನು ಬೇಕಿದ್ದರೆ ದೊಡ್ಡ ಸಾಮ್ರಾಜ್ಯದ ಚಕ್ರವರ್ತಿಯನ್ನಾಗಿ ಮಾಡುತ್ತೇನೆ” ಎನ್ನುತ್ತಾನೆ. ಇದಕ್ಕೆ ನಚಿಕೇತ ಹೇಳುತ್ತಾನೆ “ ಇದೆಲ್ಲವೂ ನರಕಕ್ಕೆ ಹೋಗುವ ಸಾಧನಗಳು, ಇದ್ಯಾವುದೂ ನನಗೆ ಬೇಡ. ನನಗೆ ಭಗವಂತನ ಬಗ್ಗೆ ತಿಳಿಯಬೇಕು” ಎಂದು. ಹೀಗೆ ನಮ್ಮ ಪಾಪ ಕರ್ಮವನ್ನು ಸಂಪೂರ್ಣ ತೊಳೆದುಕೊಂಡು ಮೋಕ್ಷಕ್ಕೆ ಹೋಗುವ ಏಕಮಾತ್ರ ಮಾರ್ಗ ಭಗವಂತನ ಬಗೆಗಿನ ಜ್ಞಾನ. ಭಗವದರ್ಪಣ ಬುದ್ಧಿಯಿಂದ ಕರ್ಮ ಅನುಷ್ಠಾನ ಮಾಡಿದಾಗ ಶುಭಾಶುಭ ಕರ್ಮದ ಕಟ್ಟಿನಿಂದ ಬಿಡುಗಡೆ ಸಾಧ್ಯ. ಕೃಷ್ಣ ಹೇಳುತ್ತಾನೆ “ಸಂನ್ಯಾಸಯೋಗಯುಕ್ತಾತ್ಮಾ ವಿಮುಕ್ತೋ ಮಾಮುಪೈಷ್ಯಸಿ” ಎಂದು. ಇಲ್ಲಿ ಹೇಳುವ ಸಂನ್ಯಾಸ ಒಂದು ಯೋಗ(ಉಪಾಯ). ಎಲ್ಲವನ್ನೂ ಭಗವಂತನಿಗೆ ಅರ್ಪಣೆ ಮಾಡಿ ಫಲಕಾಮನೆ ಇಲ್ಲದೆ ಭಗವತ್ ಪೂಜಾ ದೃಷ್ಟಿಯಿಂದ ಮಾಡುವಂತಹ ಸಾತ್ವಿಕರ ಸಾಧನೆ. ಸಂನ್ಯಾಸ ಎಂದರೆ ಕಾಮ-ಸಂಕಲ್ಪವನ್ನು ಭಗವಂತನಲ್ಲಿ ಅರ್ಪಿಸುವುದು. ಕಾಮ ಅಂದರೆ ‘ಮಾಡಬೇಕು’ ಎಂದು ಬಯಸುವುದು, ಸಂಕಲ್ಪ ಎಂದರೆ ‘ಮಾಡುತ್ತೇನೆ’ ಎಂದು ನಿರ್ಧರಿಸುವುದು. ಕಾಮಸಂಕಲ್ಪ ವರ್ಜಿತ-ಸಂನ್ಯಾಸ. ಹೀಗೆ ಭಾಗವತ ಧರ್ಮ ಪಾಲನೆ ಮಾಡಿದರೆ ಸುಲಭವಾಗಿ ಭಗವಂತನನ್ನು ಸೇರಬಹುದು-“ನಿಶ್ಚಿತವಾಗಿಯೂ ನನ್ನನ್ನು ಸೇರುತ್ತಾರೆ” ಎನ್ನುವುದು ಕೃಷ್ಣನ ಭರವಸೆ. 
 ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು

शुभाशुभफलैरेवं मोक्ष्य से कर्मबंधनैः।
 सन्न्यासयोगमुक्तात्मा विमुक्तो मामुपैष्यसि॥ 
 इस प्रकार, जिसमें समस्त कर्म मुझ भगवान के अर्पण होते हैं- ऐसे संन्यासयोग से युक्त चित्तवाला तू शुभाशुभ फलरूप कर्मबंधन से मुक्त हो जाएगा और उनसे मुक्त होकर मुझको ही प्राप्त होगा। 

 ॥28॥ 
 Shubhaashubhaphalairevam mokshyase karmabandhanaih; 
 Sannyaasayogayuktaatmaa vimukto maamupaishyasi. 

 Thus shalt thou be freed from the bonds of actions yielding good and evil fruits; with themind steadfast in the Yoga of renunciation, and liberated, thou shalt come unto Me.
***********

 BHAGAVAD-GITA🍁 

 ಅಧ್ಯಾಯ - 09: ಶ್ಲೋಕ – 25 

 ಯಾಂತಿ ದೇವವ್ರತಾ ದೇವಾನ್ ಪಿತ ನ್ ಯಾಂತಿ ಪಿತೃವ್ರತಾಃ ।
ಭೂತಾನಿ ಯಾಂತಿ ಭೂತೇಜ್ಯಾ ಯಾಂತಿ ಮದ್ಯಾಜಿನೋಪಿ ಮಾಮ್ ॥೨೫॥

 ಯಾಂತಿ ದೇವವ್ರತಾಃ ದೇವಾನ್ ಪಿತ ನ್ ಯಾಂತಿ ಪಿತೃವ್ರತಾಃ ।
 ಭೂತಾನಿ ಯಾಂತಿ ಭೂತೇಜ್ಯಾ ಯಾಂತಿ ಮತ್ ಯಾಜಿನಃ ಅಪಿ ಮಾಮ್-

 ದೇವತೆಗಳ ನೇಮ ಹಿಡಿದವರು ದೇವತೆಗಳನ್ನು ಸೇರುತ್ತಾರೆ. ಪಿತೃಗಳ ನೇಮ ಹಿಡಿದವರು ಪಿತೃಗಳನ್ನು ಸೇರುತ್ತಾರೆ. ದೆವ್ವಗಳನ್ನು ಪೂಜಿಸುವವರು ದೆವ್ವಗಳನ್ನು ಸೇರುತ್ತಾರೆ. ನನ್ನನ್ನು ಪೂಜಿಸುವವರು ನನ್ನನ್ನೇ ಸೇರುತ್ತಾರೆ. ಕೃಷ್ಣ ಹೇಳುತ್ತಾನೆ “ನೀವು ಯಾರನ್ನು ಪೂಜಿಸುತ್ತೀರೋ ಅವರನ್ನೇ ಪಡೆಯುತ್ತೀರಿ” ಎಂದು. ದೇವತೆಗಳನ್ನು ಪೂಜಿಸುವವರು ದೇವತೆಗಳನ್ನೂ, ಪಿತೃಗಳನ್ನು ಪೂಜಿಸುವವರು ಪಿತೃಗಳನ್ನೂ, ಭೂತ ಪ್ರೇತವನ್ನು(ದೇವತಾ ಗಣ) ಪೂಜಿಸುವವರು ಭೂತ ಪ್ರೇತಗಳನ್ನೂ ಪಡೆಯುತ್ತಾರೆ. ಆದರೆ ಯಾರು ಏಕಭಕ್ತಿಯಿಂದ ಎಲ್ಲವುದರಲ್ಲೂ ಭಗವಂತನನ್ನು ಕಂಡು ಶ್ರದ್ಧೆಯಿಂದ ಆತನನ್ನು ಪೂಜಿಸುತ್ತಾರೋ- “ಅವರು ನನ್ನನ್ನು ಸೇರುತ್ತಾರೆ” ಎನ್ನುವ ಭರವಸೆಯನ್ನು ಇಲ್ಲಿ ಕೃಷ್ಣ ಕೊಡುತ್ತಾನೆ. ದೇವತೆಗಳನ್ನು ಪೂಜಿಸಿ ಸ್ವರ್ಗವನ್ನು ಪಡೆಯಬಹುದು, ಆದರೆ ಮರಳಿ ಹುಟ್ಟದ ಮೋಕ್ಷವನ್ನಲ್ಲ. ಯಾವ ಪೂಜೆ ಮಾಡಿದರೂ ಸರಿಯೇ, ಪ್ರತಿಯೊಂದು ಕ್ರಿಯೆಯ ಹಿಂದೆ ಭಗವಂತನ ಅರಿವಿದ್ದು ಅದರಿಂದ ಅವನನ್ನು ಆರಾಧಿಸುವುದೇ ನಿಜವಾದ ಪೂಜೆ. ಅರಿವಿಲ್ಲದ ಪೂಜೆ ಎಂದೂ ನಮ್ಮನ್ನು ಮೋಕ್ಷದತ್ತ ಕೊಂಡೊಯ್ಯುವುದಿಲ್ಲ.ಬ್ರಹ್ಮಾದಿ ಸಮಸ್ತ ದೇವತಾ ಪರಿವಾರ ಸಮೆತನಾಗಿರತಕ್ಕಂತಹ ಭಗವಂತನ ಆರಾಧನೆ ಮಾಡಿದರೆ ಆಗ ಭಗವಂತನನ್ನು ಸೇರುತ್ತಾರೆ. ಇದು ಶಾಸ್ತ್ರದ ವ್ಯವಸ್ಥೆ. 
 ಕೃಪೆ: ಪದ್ಮಶ್ರೀ  ಶ್ರೀ ಬನ್ನಂಜೆ ಗೋವಿಂದಾಚಾರ್ಯರು

 यान्ति देवव्रता देवान्पितृन्यान्ति पितृव्रताः। 
 भूतानि यान्ति भूतेज्या यान्ति मद्याजिनोऽपि माम्‌॥ 

 देवताओं को पूजने वाले देवताओं को प्राप्त होते हैं, पितरों को पूजने वाले पितरों को प्राप्त होते हैं, भूतों को पूजने वाले भूतों को प्राप्त होते हैं और मेरा पूजन करने वाले भक्त मुझको ही प्राप्त होते हैं। इसीलिए मेरे भक्तों का पुनर्जन्म नहीं होता (गीता अध्याय 8 श्लोक 16 में देखना चाहिए)  

॥25॥ 
 Yaanti devavrataa devaan pitreen yaanti pitrivrataah;
 Bhutaani yaanti bhutejyaa yaanti madyaajino’pi maam.

The worshippers of the gods go to them; to the manes go the ancestor-worshippers; tothe Deities who preside over the elements go their worshippers; My devotees come to Me.
*******

🍁BHAGAVAD-GITA🍁 

 ಅಧ್ಯಾಯ - 09: ಶ್ಲೋಕ – 27 

 ಯತ್ ಕರೋಷಿ ಯದಶ್ನಾಸಿ ಯಜ್ಜುಹೋಷಿ ದದಾಸಿ ಯತ್ ।
ಯತ್ತಪಸ್ಯಸಿ ಕೌಂತೇಯ ತತ್ ಕುರುಷ್ವ ಮದರ್ಪಣಮ್ ॥೨೭॥ 

 ಯತ್ ಕರೋಷಿ ಯತ್ ಅಶ್ನಾಸಿ ಯತ್ ಜುಹೋಷಿ ದದಾಸಿ ಯತ್। 
 ಯತ್ ತಪಸ್ಯಸಿ ಕೌಂತೇಯ ತತ್ ಕುರುಷ್ವ ಮತ್ ಅರ್ಪಣಮ್-

ಕೌಂತೇಯ, ಏನು ಮಾಡುವೆ, ಏನು ತಿನ್ನುವೆ, ಏನು ಹೋಮಿಸುವೆ, ಏನು ನೀಡುವೆ, ಏನು ತಪಗೈವೆ ಅದನು ನನಗೆ ಒಪ್ಪಿಸು. ಕೃಷ್ಣ ಹೇಳುತ್ತಾನೆ “ನನಗಾಗಿ ನೀನು ಏನನ್ನೂ ಮಾಡುವುದು ಬೇಡ ಆದರೆ ನಿನಗೋಸ್ಕರ ಏನು ಮಾಡುತ್ತೀಯೋ ಅದನ್ನು ನನಗೆ ಅರ್ಪಿಸು” ಎಂದು. ನಮ್ಮ ನಿತ್ಯ ಜೀವನದಲ್ಲಿ ಮಾಡಬೇಕಾದ ಅನೇಕ ಅನಿವಾರ್ಯ ವೃತ್ತಿ ಕಾರ್ಯಗಳಿರುತ್ತವೆ. ಜೀವನ ನಿರ್ವಹಣೆಯ ಕಾಯಕವಿರುತ್ತದೆ. ನಾವು ಅದನ್ನೇ ಭಗವಂತನ ಪೂಜೆ ಎಂದು ತಿಳಿದು ಮಾಡಬೇಕು. ಇದಕ್ಕೆ ಉತ್ತಮ ದೃಷ್ಟಾಂತ ಧರ್ಮವ್ಯಾಧನ ಕಥೆ. ಮಾಂಸ ವಿಕ್ರಯ ಮಾಡಿ ಜೀವನ ಸಾಗಿಸುತ್ತಿದ್ದ ಆತನಲ್ಲಿ ಒಂದು ಸಂಕಲ್ಪ ಇತ್ತು. “ಮಾಂಸ ತಿನ್ನುವುದು ನನಗೆ ಆನುವಂಶೀಯವಾಗಿ ಬಂದ ಅಭ್ಯಾಸ. ಆದ್ದರಿಂದ ನಾನು ಮಾಂಸ ತಿನ್ನುತ್ತೇನೆ, ನನಗೆ ಬದುಕುವುದಕ್ಕೋಸ್ಕರ ಮತ್ತು ನನ್ನ ತಂದೆತಾಯಿಯನ್ನು ಸಾಕುವುದಕ್ಕೊಸ್ಕರ ನನ್ನ ಪಾಲಿಗೆ ಬಂದ ಈ ವೃತ್ತಿಯನ್ನು ನಾನು ಮಾಡುತ್ತೇನೆ. ಇದರಿಂದ ನನ್ನ ಬದುಕಿಗೆ ಬೇಕಾದಷ್ಟನ್ನು ಮಾತ್ರ ನಾನು ಗಳಿಸುತ್ತೇನೆ. ಎಂದೂ ವ್ಯವಹಾರದಲ್ಲಿ ಜನರ ಶೋಷಣೆ ಮಾಡುವುದಿಲ್ಲ” ಎಂದುಕೊಂಡು ಮಾಂಸ ವಿಕ್ರಯ ಮಾಡುತ್ತಿದ್ದ ಆತ. ಇದರಿಂದ ಆತನಿಗೆ ದೊಡ್ಡ ಜ್ಞಾನಿ ಧರ್ಮವ್ಯಾಧ ಎನ್ನುವ ಹೆಸರು ಬಂತು. ಋಷಿ ಮುನಿಗಳು ಆತನಿಂದ ಪಾಠ ಕಲಿಯುವ ಪ್ರಸಂಗ ಬಂತು. ಇದಕ್ಕೆ ಮೂಲ ಕಾರಣ ಆತ ತಾನು ಏನು ಮಾಡುತ್ತಿದ್ದನೋ ಅದನ್ನು ದೇವರ ಪೂಜೆ ಎಂದು ಮಾಡಿದ ಅಷ್ಟೇ. ಹೀಗೆ ಎಂದೂ ನಾವು ಮಾಡುವ ವೃತ್ತಿ ಮುಖ್ಯವಾಗುವುದಿಲ್ಲ, ಬದಲಿಗೆ ಅದನ್ನು ಭಗವಂತನ ಪೂಜೆ ಎಂದು ಮಾಡುವ ಅನುಸಂಧಾನ ಮುಖ್ಯವಾಗುತ್ತದೆ. ನಿನ್ನ ನಿತ್ಯ ಕರ್ತವ್ಯ ಏನಿದೆ ಅದನ್ನು ಭಗವಂತನಿಗೆ ಅರ್ಪಿಸು. ಅದನ್ನು ಭಗವಂತನ ಪೂಜೆ ಎಂದು ಮಾಡು. ಭಗವಂತನಿಗಾಗಿ ಭಕ್ಷ್ಯ ಭೋಜ್ಯವನ್ನು ಮಾಡುವ ಅಗತ್ಯವಿಲ್ಲ. ನೀನು ಏನನ್ನು ತಿನ್ನುತ್ತೀಯೋ ಅದನ್ನು ಭಗವಂತನಿಗೆ ಅರ್ಪಿಸು. ಹೀಗೆ ಮಾಡಿದಾಗ ಭಗವಂತನ ಆರಾಧನೆ ಪ್ರತ್ಯೇಕವಾಗುವುದಿಲ್ಲ ಮತ್ತು ಕಷ್ಟವಾಗುವುದಿಲ್ಲ. ಭಗವಂತನಿಗಾಗಿ ಯಾವುದೋ ವಿಶೇಷ ಹೋಮ ಹವನ ಮಾಡುವ ಅಗತ್ಯವಿಲ್ಲ. ನೀನು ಏನು ಹೋಮ ಮಾಡುತ್ತೀಯೋ ಅದನ್ನೇ ‘ಅಗ್ನಿ ಅಂತರ್ಗತ ನಾರಾಯಣಾಯ ಇದಮ್ ನ ಮಮ’ ಎಂದು ಅರ್ಪಿಸು. ಒಬ್ಬ ಹಸಿದ ವ್ಯಕ್ತಿ ಆತನ ಹೊಟ್ಟೆಯಲ್ಲಿ ವೈಶ್ವಾನರ ರೂಪಿ ಭಗವಂತನನ್ನು ಹೊತ್ತು ಬಂದಿದ್ದಾನೆ ಎಂದು ತಿಳಿದು ಆತನೊಳಗಿರುವ ವೈಶ್ವಾನರ ಪ್ರಸನ್ನನಾಗಲಿ ಎಂದು ಆ ವ್ಯಕ್ತಿಯನ್ನು ಸತ್ಕಾರ ಮಾಡು. ಇದೇ ಭಗವಂತನ ಮಹಾ ಪೂಜೆ ಎನಿಸುತ್ತದೆ. ಕೃಷ್ಣ ಹೇಳುತ್ತಾನೆ “ಯತ್ತಪಸ್ಯಸಿ ಕೌಂತೇಯ ತತ್ ಕುರುಷ್ವ ಮದರ್ಪಣಮ್” ಎಂದು. ಇಲ್ಲಿ ತಪಸ್ಸು ಎಂದರೆ ‘ಚಿಂತನೆ’ ಅಥವಾ ವೃತಾನುಷ್ಟಾನ. ಉದಾಹರಣೆಗೆ ‘ಸಂಕಷ್ಟಿ’- ಅದನ್ನು ಆಚರಿಸುವಾಗ ಗಣಪತಿ ಅಂತರ್ಗತನಾದ ಭಗವಂತನಿಗೆ ಅರ್ಪಿತವಾಗಲಿ ಎಂದು ಮಾಡು. ಅಲ್ಲಿ ಯಾವುದೇ ಫಲಾಪೇಕ್ಷೆ ಅಹಂಕಾರ ಇಟ್ಟುಕೊಳ್ಳಬೇಡ. ಹೀಗೆ ಯಾವ ಆಚರಣೆಯೂ ಕೂಡಾ ಅಂತತಃ ಪರಮ ಪುರುಷನಾದ ಭಗವಂತನಿಗೆ ಅರ್ಪಿತ ಎಂದು ತಿಳಿದು ಮಾಡಿದಾಗ ಅದು ನಿಜವಾದ ತಪಸ್ಸಾಗುತ್ತದೆ. ಇಲ್ಲಿ ಅರ್ಜುನನಿಗೆ “ನಿನ್ನ ಕರ್ತವ್ಯ ಕರ್ಮವಾಗಿ ಬಂದಿರುವ ಈ ಯುದ್ಧವನ್ನೂ ಕೂಡಾ ಭಗವಂತನ ಪೂಜೆಯಾಗಿ ಮಾಡು” ಎನ್ನುವ ಸಂದೇಶವನ್ನು ಈ ಶ್ಲೋಕದ ಮೂಲಕ ಕೃಷ್ಣ ನೀಡಿದ್ದಾನೆ. 
 ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು

******* 

 BHAGAVAD-GITA🍁
ಅಧ್ಯಾಯ - 17: ಶ್ಲೋಕ – 19 ಮೂಢಗ್ರಾಹೇಣಾSತ್ಮನೋ ಯತ್ ಪೀಡಯಾ ಕ್ರಿಯತೇ ತಪಃ ।
ಪರಸ್ಯೋತ್ಸಾದನಾರ್ಥಂ ವಾ ತತ್  ತಾಮಸಮುದಾಹೃತಮ್ ॥೧೯॥ ಮೂಢ ಗ್ರಾಹೇಣ ಆತ್ಮನಃ ಯತ್ ಪೀಡಯಾ ಕ್ರಿಯತೇ ತಪಃ ।  ಪರಸ್ಯ ಉತ್ಸಾದನ ಅರ್ಥಂ ವಾ ತತ್  ತಾಮಸಮ್ ಉದಾಹೃತಮ್ – ದುರಾಗ್ರಹದಿಂದ ತನ್ನ ದೇಹವನ್ನೆ ದಂಡಿಸುವ ಮೂಲಕ, ಅಥವಾ ಆಗದವರನ್ನು ಮುಗಿಸುವುದಕ್ಕಾಗಿ ಮಾಡುವ ತಪಸ್ಸು ತಾಮಸ ತಪಸ್ಸು ಎನ್ನಿಸುತ್ತದೆ. ತಪ್ಪು ತಿಳುವಳಿಕೆಯಿಂದ, ಭ್ರಮೆಯಿಂದ, ಪರಮಾತ್ಮನ ಅನುಸಂಧಾನವಿಲ್ಲದೆ, ಇನ್ನೊಬ್ಬರು ಹಾಳಾಗಬೇಕು ಎನ್ನುವ ಕೆಟ್ಟ ಭಾವನೆಯಿಂದ, ತನ್ನ ದೇಹದೊಳಗಿರುವ ಭಗವಂತನ ಎಚ್ಚರವಿಲ್ಲದೆ, ದೇಹ ದಂಡನೆ ಮಾಡಿಕೊಂಡು ಮಾಡುವ ತಪಸ್ಸು ತಾಮಸ ತಪಸ್ಸು. ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು
******


🍁BHAGAVAD-GITA🍁

ಅಧ್ಯಾಯ - 09: ಶ್ಲೋಕ – 27

ಯತ್ ಕರೋಷಿ ಯದಶ್ನಾಸಿ ಯಜ್ಜುಹೋಷಿ ದದಾಸಿ ಯತ್   ।
ಯತ್ತಪಸ್ಯಸಿ ಕೌಂತೇಯ ತತ್ ಕುರುಷ್ವ ಮದರ್ಪಣಮ್ ॥೨೭॥

ಯತ್ ಕರೋಷಿ ಯತ್ ಅಶ್ನಾಸಿ ಯತ್ ಜುಹೋಷಿ ದದಾಸಿ ಯತ್। 
ಯತ್ ತಪಸ್ಯಸಿ ಕೌಂತೇಯ ತತ್ ಕುರುಷ್ವ ಮತ್ ಅರ್ಪಣಮ್-

ಕೌಂತೇಯ, ಏನು ಮಾಡುವೆ, ಏನು ತಿನ್ನುವೆ, ಏನು ಹೋಮಿಸುವೆ, ಏನು ನೀಡುವೆ, ಏನು ತಪಗೈವೆ ಅದನು ನನಗೆ ಒಪ್ಪಿಸು.

ಕೃಷ್ಣ ಹೇಳುತ್ತಾನೆ “ನನಗಾಗಿ ನೀನು ಏನನ್ನೂ ಮಾಡುವುದು ಬೇಡ ಆದರೆ ನಿನಗೋಸ್ಕರ ಏನು ಮಾಡುತ್ತೀಯೋ ಅದನ್ನು ನನಗೆ ಅರ್ಪಿಸು” ಎಂದು. ನಮ್ಮ ನಿತ್ಯ ಜೀವನದಲ್ಲಿ ಮಾಡಬೇಕಾದ ಅನೇಕ ಅನಿವಾರ್ಯ ವೃತ್ತಿ ಕಾರ್ಯಗಳಿರುತ್ತವೆ. ಜೀವನ ನಿರ್ವಹಣೆಯ ಕಾಯಕವಿರುತ್ತದೆ. ನಾವು ಅದನ್ನೇ ಭಗವಂತನ ಪೂಜೆ ಎಂದು ತಿಳಿದು ಮಾಡಬೇಕು. ಇದಕ್ಕೆ ಉತ್ತಮ ದೃಷ್ಟಾಂತ ಧರ್ಮವ್ಯಾಧನ ಕಥೆ. ಮಾಂಸ ವಿಕ್ರಯ ಮಾಡಿ ಜೀವನ ಸಾಗಿಸುತ್ತಿದ್ದ ಆತನಲ್ಲಿ ಒಂದು ಸಂಕಲ್ಪ ಇತ್ತು. “ಮಾಂಸ ತಿನ್ನುವುದು ನನಗೆ ಆನುವಂಶೀಯವಾಗಿ ಬಂದ ಅಭ್ಯಾಸ. ಆದ್ದರಿಂದ ನಾನು ಮಾಂಸ ತಿನ್ನುತ್ತೇನೆ, ನನಗೆ ಬದುಕುವುದಕ್ಕೋಸ್ಕರ ಮತ್ತು ನನ್ನ ತಂದೆತಾಯಿಯನ್ನು ಸಾಕುವುದಕ್ಕೊಸ್ಕರ ನನ್ನ ಪಾಲಿಗೆ ಬಂದ ಈ ವೃತ್ತಿಯನ್ನು ನಾನು ಮಾಡುತ್ತೇನೆ. ಇದರಿಂದ ನನ್ನ ಬದುಕಿಗೆ ಬೇಕಾದಷ್ಟನ್ನು ಮಾತ್ರ ನಾನು ಗಳಿಸುತ್ತೇನೆ. ಎಂದೂ ವ್ಯವಹಾರದಲ್ಲಿ ಜನರ ಶೋಷಣೆ ಮಾಡುವುದಿಲ್ಲ” ಎಂದುಕೊಂಡು ಮಾಂಸ ವಿಕ್ರಯ ಮಾಡುತ್ತಿದ್ದ ಆತ. ಇದರಿಂದ ಆತನಿಗೆ ದೊಡ್ಡ ಜ್ಞಾನಿ ಧರ್ಮವ್ಯಾಧ ಎನ್ನುವ ಹೆಸರು ಬಂತು. ಋಷಿ ಮುನಿಗಳು ಆತನಿಂದ ಪಾಠ ಕಲಿಯುವ ಪ್ರಸಂಗ ಬಂತು. ಇದಕ್ಕೆ ಮೂಲ ಕಾರಣ ಆತ ತಾನು ಏನು ಮಾಡುತ್ತಿದ್ದನೋ ಅದನ್ನು ದೇವರ ಪೂಜೆ ಎಂದು ಮಾಡಿದ ಅಷ್ಟೇ. ಹೀಗೆ ಎಂದೂ ನಾವು ಮಾಡುವ ವೃತ್ತಿ  ಮುಖ್ಯವಾಗುವುದಿಲ್ಲ,  ಬದಲಿಗೆ ಅದನ್ನು ಭಗವಂತನ ಪೂಜೆ ಎಂದು ಮಾಡುವ ಅನುಸಂಧಾನ ಮುಖ್ಯವಾಗುತ್ತದೆ. 

ನಿನ್ನ ನಿತ್ಯ ಕರ್ತವ್ಯ ಏನಿದೆ ಅದನ್ನು ಭಗವಂತನಿಗೆ ಅರ್ಪಿಸು. ಅದನ್ನು ಭಗವಂತನ ಪೂಜೆ ಎಂದು ಮಾಡು. ಭಗವಂತನಿಗಾಗಿ ಭಕ್ಷ್ಯ ಭೋಜ್ಯವನ್ನು ಮಾಡುವ ಅಗತ್ಯವಿಲ್ಲ. ನೀನು ಏನನ್ನು ತಿನ್ನುತ್ತೀಯೋ ಅದನ್ನು ಭಗವಂತನಿಗೆ ಅರ್ಪಿಸು. ಹೀಗೆ ಮಾಡಿದಾಗ ಭಗವಂತನ ಆರಾಧನೆ ಪ್ರತ್ಯೇಕವಾಗುವುದಿಲ್ಲ ಮತ್ತು ಕಷ್ಟವಾಗುವುದಿಲ್ಲ. ಭಗವಂತನಿಗಾಗಿ ಯಾವುದೋ ವಿಶೇಷ ಹೋಮ ಹವನ ಮಾಡುವ ಅಗತ್ಯವಿಲ್ಲ. ನೀನು ಏನು ಹೋಮ ಮಾಡುತ್ತೀಯೋ ಅದನ್ನೇ ‘ಅಗ್ನಿ ಅಂತರ್ಗತ ನಾರಾಯಣಾಯ ಇದಮ್ ನ ಮಮ’ ಎಂದು ಅರ್ಪಿಸು.  ಒಬ್ಬ ಹಸಿದ ವ್ಯಕ್ತಿ ಆತನ ಹೊಟ್ಟೆಯಲ್ಲಿ ವೈಶ್ವಾನರ ರೂಪಿ ಭಗವಂತನನ್ನು ಹೊತ್ತು ಬಂದಿದ್ದಾನೆ ಎಂದು ತಿಳಿದು  ಆತನೊಳಗಿರುವ  ವೈಶ್ವಾನರ ಪ್ರಸನ್ನನಾಗಲಿ ಎಂದು ಆ ವ್ಯಕ್ತಿಯನ್ನು ಸತ್ಕಾರ ಮಾಡು. ಇದೇ ಭಗವಂತನ ಮಹಾ ಪೂಜೆ ಎನಿಸುತ್ತದೆ. 

ಕೃಷ್ಣ ಹೇಳುತ್ತಾನೆ “ಯತ್ತಪಸ್ಯಸಿ ಕೌಂತೇಯ ತತ್ ಕುರುಷ್ವ ಮದರ್ಪಣಮ್” ಎಂದು. ಇಲ್ಲಿ ತಪಸ್ಸು ಎಂದರೆ ‘ಚಿಂತನೆ’ ಅಥವಾ ವೃತಾನುಷ್ಟಾನ. ಉದಾಹರಣೆಗೆ ‘ಸಂಕಷ್ಟಿ’- ಅದನ್ನು ಆಚರಿಸುವಾಗ ಗಣಪತಿ ಅಂತರ್ಗತನಾದ ಭಗವಂತನಿಗೆ ಅರ್ಪಿತವಾಗಲಿ ಎಂದು ಮಾಡು. ಅಲ್ಲಿ ಯಾವುದೇ ಫಲಾಪೇಕ್ಷೆ ಅಹಂಕಾರ ಇಟ್ಟುಕೊಳ್ಳಬೇಡ. ಹೀಗೆ ಯಾವ ಆಚರಣೆಯೂ ಕೂಡಾ ಅಂತತಃ ಪರಮ ಪುರುಷನಾದ ಭಗವಂತನಿಗೆ ಅರ್ಪಿತ ಎಂದು ತಿಳಿದು ಮಾಡಿದಾಗ ಅದು ನಿಜವಾದ ತಪಸ್ಸಾಗುತ್ತದೆ.  ಇಲ್ಲಿ ಅರ್ಜುನನಿಗೆ “ನಿನ್ನ ಕರ್ತವ್ಯ ಕರ್ಮವಾಗಿ ಬಂದಿರುವ ಈ  ಯುದ್ಧವನ್ನೂ ಕೂಡಾ ಭಗವಂತನ ಪೂಜೆಯಾಗಿ ಮಾಡು” ಎನ್ನುವ ಸಂದೇಶವನ್ನು ಈ ಶ್ಲೋಕದ ಮೂಲಕ  ಕೃಷ್ಣ ನೀಡಿದ್ದಾನೆ.
ಕೃಪೆ:  ಪದ್ಮಶ್ರೀ  ಶ್ರೀ ಬನ್ನಂಜೆ ಗೋವಿಂದಾಚಾರ್ಯರು

यत्करोषि यदश्नासि यज्जुहोषि ददासि यत्‌।
यत्तपस्यसि कौन्तेय तत्कुरुष्व मदर्पणम्‌॥

हे अर्जुन! तू जो कर्म करता है, जो खाता है, जो हवन करता है, जो दान देता है और जो तप करता है, वह सब मेरे अर्पण कर
॥27॥
Yatkaroshi yadashnaasi yajjuhoshi dadaasi yat;
Yattapasyasi kaunteya tatkurushva madarpanam.

Whatever thou doest, whatever thou eatest, whatever thou offerest in sacrifice, whateverthou givest, whatever thou practiseth as austerity, O Arjuna, do it as an offering unto Me!
********



BHAGAVAD-GITA🍁 ಅಧ್ಯಾಯ - 06 : ಶ್ಲೋಕ – 30 ಯೋ ಮಾಂ ಪಶ್ಯತಿ ಸರ್ವತ್ರ ಸರ್ವಂ ಚ ಮಯಿ ಪಶ್ಯತಿ ।

ತಸ್ಯಾಹಂ ನ ಪ್ರಣಶ್ಯಾಮಿ ಸ ಚ ಮೇ ನ ಪ್ರಣಶ್ಯತಿ ॥೩೦॥ ಯಃ  ಮಾಮ್  ಪಶ್ಯತಿ ಸರ್ವತ್ರ ಸರ್ವಮ್  ಚ ಮಯಿ ಪಶ್ಯತಿ     ।
ತಸ್ಯ ಅಹಮ್  ನ ಪ್ರಣಶ್ಯಾಮಿ ಸಃ ಚ ಮೇ ನ ಪ್ರಣಶ್ಯತಿ – ಯಾರು ನನ್ನನ್ನು ಎಲ್ಲೆಡೆ ಕಾಣುತ್ತಾನೆ ಮತ್ತು ಎಲ್ಲವನ್ನು ನನ್ನಲ್ಲಿ ಕಾಣುತ್ತಾನೆ ಅವನಿಗೆ ನಾನು ಎರವಾಗಲಾರೆ; ಅವನೂ ನನಗೆ ಎರವಾಗಲಾರ. ಮುಂದುವರಿದು ಕೃಷ್ಣ ಹೇಳುತ್ತಾನೆ: “ಯಾರು ಹೀಗೆ ನನ್ನನ್ನು ಎಲ್ಲರಲ್ಲಿಯೂ ಮತ್ತು ಎಲ್ಲರನ್ನು ನನ್ನಲ್ಲಿ ಕಾಣುತ್ತಾನೋ ಅವನಿಗೆ ನಾನೆಂದೂ ಇಲ್ಲವಾಗುವುದಿಲ್ಲ. ಸದಾ ಆತನ ಯೋಗ ಕ್ಷೇಮದ ಹೊಣೆ ನನ್ನದು. ಅದೇ ರೀತಿ ನಾನು ಆತನ ಯೋಗಕ್ಷೇಮವನ್ನು ನೋಡಿಕೊಳ್ಳುತ್ತೇನೆ ಎನ್ನುವ ಎಚ್ಚರ ಸದಾ ಆತನಲ್ಲಿರುತ್ತದೆ” ಎಂದು. ಹೀಗೆ ಭಗವಂತನ ಅನ್ಯೋನ್ಯ ಸಂಬಂಧ, ದೇವರು ಎಂದೂ ನಮ್ಮನ್ನು ಬಿಟ್ಟು ಹಾಕುವುದಿಲ್ಲ ಎನ್ನುವ ಎಚ್ಚರ ನಮ್ಮಲ್ಲಿ ಸದಾ ಜಾಗೃತವಾಗಿರುತ್ತದೆ. ಹಿಂದೆ ಹೇಳಿದಂತೆ ಭಗವಂತ ನಾವು ಆತನನ್ನು ಹೇಗೆ ನೋಡುತ್ತೆವೋ ಹಾಗೆ. ಈ ಕಾರಣದಿಂದ ನಮ್ಮಲ್ಲಿನ ಈ ಎಚ್ಚರದಿಂದ ಯಾವತ್ತೂ ಜೀವನದಲ್ಲಿ ಬಗೆಹರಿಯದಂತಹ ಸಮಸ್ಯೆ ನಮಗೆ ಬರುವುದಿಲ್ಲ. ಪ್ರರಾಬ್ಧಕರ್ಮದಿಂದ ಬಂದರೂ ಕೂಡಾ ಕಾಣದ ಕೈ ನಮ್ಮನ್ನು ಕೈ ಹಿಡಿದು ನಡೆಸುತ್ತಿರುವ ಅನುಭವವಾಗುತ್ತದೆ. ‘ನನ್ನನ್ನು ಕಾಪಾಡುವವನಿದ್ದಾನೆ  ಅವನು ನನ್ನ ಯೋಗ-ಕ್ಷೇಮವನ್ನು ನೋಡಿಕೊಳ್ಳುತ್ತಾನೆ, ನಾನೇಕೆ ಹೆದರಬೇಕು’ ಎನ್ನುವ ದೈರ್ಯ ಬರುತ್ತದೆ. ಕೆಟ್ಟ ಯೋಚನೆ ದೂರವಾಗುತ್ತದೆ. ಸಾಮಾಜಿಕ ಪ್ರತಿಕ್ರೀಯೆಗಳಿಗೆ, ಟೀಕೆ-ಟಿಪ್ಪಣಿಗಳಿಗೆ, ಅಪವಾದಗಳಿಗೆ, ನಿಂದನೆಗಳಿಗೆ, ಯಾವುದಕ್ಕೂ ವಿಚಲಿತನಾಗುವುದಿಲ್ಲ. ಭಗವಂತ ಕೈಬಿಟ್ಟ ಎನ್ನುವ ಸ್ಥಿತಿ ಭಕ್ತನಿಗೆ ಎಂದೂ ಬರುವುದಿಲ್ಲ. ಭಗವಂತ ಎಂದೂ ತನ್ನ ಆತ್ಮೀಯ ಭಕ್ತನಿಂದ ದೂರವಾಗುವುದಿಲ್ಲ. ಇದಕ್ಕಾಗಿ ಭಗವಂತನನ್ನು ‘ಭಕ್ತಪರಾಧೀನ’ ಎನ್ನುವುದು. ಈ ಕುರಿತು ಇನ್ನಷ್ಟು ವಿವರವಾಗಿ ಕೃಷ್ಣ ಮುಂದಿನ ಶ್ಲೋಕದಲ್ಲಿ ವಿವರಿಸಿದ್ದಾನೆ. ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು यो मां पश्यति सर्वत्र सर्वं च मयि पश्यति। तस्याहं न प्रणश्यामि स च मे न प्रणश्यति॥ जो पुरुष सम्पूर्ण भूतों में सबके आत्मरूप मुझ वासुदेव को ही व्यापक देखता है और सम्पूर्ण भूतों को मुझ वासुदेव के अन्तर्गत (गीता अध्याय 9 श्लोक 6 में देखना चाहिए।) देखता है, उसके लिए मैं अदृश्य नहीं होता और वह मेरे लिए अदृश्य नहीं होता ॥30॥ Yo maam pashyati sarvatra sarvam cha mayi pashyati; Tasyaaham na pranashyaami sa cha me na pranashyati. He who sees Me everywhere and sees everything in Me, he does not become separatedfrom Me nor do I become separated from him.COMMENTARY: The Lord describes here the effect of oneness.
*******




BHAGAVAD-GITA🍁



ಅಧ್ಯಾಯ - 07 : ಶ್ಲೋಕ – 04
ಭೂಮಿರಾಪೋSನಲೋ ವಾಯುಃ ಖಂ ಮನೋ ಬುದ್ಧಿರೇವ ಚ ।
ಅಹಂಕಾರ ಇತೀಯಂ ಮೇ ಭಿನ್ನಾ ಪ್ರಕೃತಿರಷ್ಟಧಾ ॥೪॥
ಭೂಮಿಃ ಆಪಃ ಅನಲಃ ವಾಯುಃ ಖಮ್ ಮನಃ ಬುದ್ಧಿಃ ಏವ ಚ । 

ಅಹಂಕಾರಃ ಇತಿ ಇಯಮ್ ಮೇ ಭಿನ್ನ ಪ್ರಕೃತಿ ಅಷ್ಟಧಾ-


ಮಣ್ಣು, ನೀರು, ಬೆಂಕಿ, ಗಾಳಿ, ಆಕಾಶ, ಮನಸ್ಸು, ಬುದ್ಧಿ,[ಸುಪ್ತಪ್ರಜ್ಞೆಯಿಂದ ಕೂಡಿದ] ಅಹಂಕಾರ ಹೀಗೆ ನನ್ನ ಅಧೀನವಾದ ಈ ಜಡ ಪ್ರಕೃತಿ ಎಂಟು ಬಗೆಯಾಗಿದೆ.
ಈ ಶ್ಲೋಕ ಭಗವಂತನ ಪ್ರಪಂಚ ಸೃಷ್ಟಿಯ ವಿರಾಟ ರೂಪವನ್ನು ಸಮಷ್ಟಿಯಾಗಿ ತಿಳಿಸುತ್ತದೆ. ನಮಗೆ ತಿಳಿದಂತೆ ಸೃಷ್ಟಿ ಪೂರ್ವದಲ್ಲಿ ಈ ಸಂಪೂರ್ಣ ಜಗತ್ತು ಸೂಕ್ಷ್ಮ ರೂಪದಲ್ಲಿ ಆ ಭಗವಂತನ ಉದರದಲ್ಲಿ ನೆಲೆಗೊಂಡಿದ್ದು, ನಂತರ ಭಗವಂತ ಈ ಸೃಷ್ಟಿಯನ್ನು ನಿರ್ಮಿಸಿದ. ಹೀಗೆ ಮೊದಲು ನಿರ್ಮಾಣವಾದುದು ಈ ಜಡ ಪ್ರಕೃತಿ. ಇಲ್ಲಿ ಪಂಚಭೂತಗಳು(ಮಣ್ಣು, ನೀರು, ಬೆಂಕಿ, ಗಾಳಿ, ಆಗಸ) ಜೊತೆಗೆ ಮನಸ್ಸು, ಬುದ್ಧಿ ಮತ್ತು ಅಹಂಕಾರ. ಇವು ಒಟ್ಟಿಗೆ ಎಂಟು ಬಗೆ. ಈ ಇಡೀ ಸ್ಥೂಲಪ್ರಪಂಚ ಮಣ್ಣು ನೀರು ಬೆಂಕಿ ಗಾಳಿ ಆಕಾಶ ಇದರ ವಿಕಾರ. ಆದ್ದರಿಂದ ಈ ಪ್ರಪಂಚದಲ್ಲಿರುವ ಸಮಸ್ತ ಜಡಪದಾರ್ಥಗಳ ಮೂಲದ್ರವ್ಯ ಪಂಚಭೂತಗಳು.
ಇಲ್ಲಿ ನಮಗೆ ಒಂದು ಪ್ರಶ್ನೆ ಕಾಡಬಹುದು. ಅದೇನೆಂದರೆ ಪಂಚಭೂತಗಳ ಸೃಷ್ಟಿಯಲ್ಲಿ ಆಕಾಶದ ಸೃಷ್ಟಿ ಅಂದರೇನು? ಎಂದು. ಮೂಲತಃ ಆಕಾಶದ ಸೃಷ್ಟಿ ವಾಸ್ತವ ಅಲ್ಲ ಇದು ಸಾಪೇಕ್ಷವಾಗಿ . ಅಂತರಿಕ್ಷ (Space) ಮೊದಲೇ ಇತ್ತು. ಅದರಲ್ಲಿ ಭಗವಂತ ತನ್ನ ರೂಪವನ್ನು ಆವಿರ್ಭಾವ ಗೊಳಿಸುವುದೇ ಆಕಾಶ ಸೃಷ್ಟಿ. ಬಣ್ಣವಿಲ್ಲದ ಅಂತರಿಕ್ಷದಲ್ಲಿ ‘ಕಣ್ಣಿಗೆ ಕಾಣದ ನೀಲ ವರ್ಣದ(Ultraviolet)’ ಆಕಾಶ ಸೃಷ್ಟಿಯಾಯಿತು.(ಇದನ್ನು ಹದಿಮೂರನೇ ಶತಮಾನದಲ್ಲಿ ಮಧ್ವಾಚಾರ್ಯರು ಉಲ್ಲೇಖಿಸಿದ್ದಾರೆ) ಅಲ್ಲಿ ಕಂಪನ ಉಂಟಾಗಿ ಅದರಿಂದ ಗಾಳಿ ಹುಟ್ಟಿತು. ಗಾಳಿಯ ಕಂಪನದಿಂದ ಬೆಂಕಿ ಹಾಗು ಬೆಂಕಿಯಿಂದ ನೀರಿನ ಸೃಷ್ಟಿಯಾಯಿತು. ಈ ನೀರು ಗಟ್ಟಿಯಾಗಿ ಕಾಲ ಕ್ರಮೇಣ ಭೂಮಿಯಾಗಿ ವಿಕಾರಗೊಂಡಿತು. ಹೀಗೆ ಈ ಪಂಚಭೂತಗಳಿಂದ ಅನಂತ ವಸ್ತುಗಳ ನಿರ್ಮಾಣವಾಯಿತು. ಇದು ನಮ್ಮ ‘ಅನ್ನಮಯಕೋಶ’. ಬೆಂಕಿ ಗಾಳಿ ಆಕಾಶದಿಂದ ಪ್ರಾಣಮಯಕೋಶದ ಸೃಷ್ಟಿ. ಈ ಪ್ರಾಣಮಯಕೋಶದ ಒಳಗೆ ಮನಸ್ಸು ಮತ್ತು ಬುದ್ಧಿಯಿಂದಾದ ಮನೋಮಯಕೋಶ. ನಂತರ ನಮ್ಮ ನೆನಪಿನ ಶಕ್ತಿಯ ಅಹಂಕಾರತತ್ವ(awareness of self, ಚಿತ್ತ, ಚೇತನ)ದಿಂದಾದ ವಿಜ್ಞಾನಮಯಕೋಶ ಸೃಷ್ಟಿಯಾಯಿತು. ಇಲ್ಲಿ ಮನಸ್ಸು ಸೃಷ್ಟಿಯಾಯಿತು ಎಂದರೆ ಮನಸ್ಸಿನ ಅಭಿಮಾನಿ ದೇವತೆಯ ಸೃಷ್ಟಿಯಾಯಿತು ಎಂದರ್ಥ; ಭೂಮಿ ಸೃಷ್ಟಿಯಾಯಿತು ಎಂದರೆ ಈ ಜಡವಾದ ಭೂಮಿಯ ಜೊತೆಗೆ ಭೂಮಿಯ ಅಭಿಮಾನಿ ದೇವತೆಯ ಸೃಷ್ಟಿಯಾಯಿತು ಎಂದರ್ಥ. ಅದೇ ರೀತಿ ವಾಯುವಿನ ಸೃಷ್ಟಿ ಎಂದಾಗ ಅಲ್ಲಿ ವಾಯುವಿನ ಜೊತೆಗೆ ನಲವತ್ತೊಂಬತ್ತು ದೇವತೆಗಳ ಸೃಷ್ಟಿಯಾಯಿತು ಎಂದರ್ಥ. ನಮಗೆ ತಿಳಿದಂತೆ ಭೂಮಿಯನ್ನು ಆವರಿಸಿರುವ ವಾಯುವಿನ ಪದರು ನಲವತ್ತೊಂಬತ್ತು. ಭೂಮಿಯಿಂದ ವಿವಿಧ ದೂರದಲ್ಲಿ ಗಾಳಿಯ ವಿವಿಧ ಒತ್ತಡಕ್ಕನುಗುಣವಾಗಿ ಈ ವಿಭಾಗ. ಇದನ್ನು ನಿಯಮಿತವಾಗಿ ಆಯಾ ಅಭಿಮಾನಿ ದೇವತೆಗಳು ನಿರ್ವಹಿಸುತ್ತಾರೆ. (‘ಭಾರದ್ವಾಜ ಸಂಹಿತದಲ್ಲಿ ಈ ಬಗ್ಗೆ ಮತ್ತು ವಿಮಾನ ತಾಂತ್ರಿಕತೆ ಬಗ್ಗೆ ಸಂಪೂರ್ಣ ವಿವರವನ್ನು ಕಾಣಬಹುದು). ಹೀಗೆ ಭಗವಂತನ ಅಧೀನವಾಗಿ ಅಷ್ಟರೂಪದ ಅಕ್ಷರಪ್ರಕೃತಿ ರೂಪುಗೊಂಡಿತು. ಈ ಅಷ್ಟ ವಿಧದ ಪ್ರಪಂಚದಲ್ಲಿ ಅಷ್ಟಾಕ್ಷರ ವಾಚ್ಯನಾಗಿ ಭಗವಂತ ತುಂಬಿದ.

ನಾದಸೃಷ್ಟಿಯ ಮೊದಲ ಸೃಷ್ಟಿ ಓಂಕಾರ. ಓಂಕಾರದಲ್ಲಿ ಎಂಟು ಅಕ್ಷರಗಳಿವೆ. ನಾಭಿಯಿಂದ ಹೊರಟು ಉಚ್ಚಾರದ ಕೊನೆಯ ತನಕ ಒಟ್ಟು ಎಂಟು ಅಕ್ಷರಗಳು. ಅವುಗಳೆಂದರೆ: ಅಕಾರ , ಉಕಾರ, ಮಕಾರ, ನಾದ, ಬಿಂದು, ಕಲೆ, ಶಾಂತ, ಅತಿಶಾಂತ. ಹೀಗೆ ಎಂಟು ಅಕ್ಷರದಿಂದ ವಾಚ್ಯನಾಗಿ; ವಿಶ್ವ, ತೈಜಸ, ಪ್ರಾಜ್ಞ, ತುರೀಯ , ಆತ್ಮ, ಅಂತರಾತ್ಮ, ಪರಮಾತ್ಮ ಮತ್ತು ಜ್ಞಾನಾತ್ಮ ಎನ್ನುವ ಎಂಟು ರೂಪದಲ್ಲಿ ಭಗವಂತ ಈ ಅಷ್ಟವಿಧ ಪ್ರಕೃತಿಯಲ್ಲಿ ತುಂಬಿದ. ಹೀಗೆ ಇಡೀ ಪ್ರಪಂಚ ಅಷ್ಟ ವಿಧದಲ್ಲಿ ವಿಕಾರಗೊಂಡಿತು.
(ಅಧ್ಯಾತ್ಮದಲ್ಲಿ ಪ್ರತಿಯೊಂದು ಸಂಖ್ಯಯ ಹಿಂದೆ ಒಂದು ವೇದಾಂತವಿದೆ. ಸೃಷ್ಟಿ ಪ್ರಕ್ರಿಯೆಯಲ್ಲಿ ಎಂಟರ ಮಹತ್ವವನ್ನು ಇಲ್ಲಿ ನೋಡಿದೆವು. ಬನ್ನಂಜೆಯವರ ‘ಅಂಕೆಯಲ್ಲಿ ಅಧ್ಯಾತ್ಮ’ ಎನ್ನುವ ಪುಟ್ಟ ಪುಸ್ತಕ ಈ ವಿಷಯದ ಮೇಲೆ ಬೆಳಕು ಚಲ್ಲುತ್ತದೆ).
ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು

भूमिरापोऽनलो वायुः खं मनो बुद्धिरेव च।


अहङ्‍कार इतीयं मे भिन्ना प्रकृतिरष्टधा॥


अपरेयमितस्त्वन्यां प्रकृतिं विद्धि मे पराम्‌।


जीवभूतां महाबाहो ययेदं धार्यते जगत्‌॥


पृथ्वी, जल, अग्नि, वायु, आकाश, मन, बुद्धि और अहंकार भी- इस प्रकार ये आठ प्रकार से विभाजित मेरी प्रकृति है। यह आठ प्रकार के भेदों वाली तो अपरा अर्थात मेरी जड़ प्रकृति है और हे महाबाहो! इससे दूसरी को, जिससे यह सम्पूर्ण जगत धारण किया जाता है, मेरी जीवरूपा परा अर्थात चेतन प्रकृति जान


॥4-5॥

Bhoomiraapo’nalo vaayuh kham mano buddhireva cha;


Ahamkaara iteeyam me bhinnaa prakritirashtadhaa.






Earth, water, fire, air, ether, mind, intellect and egoism—thus is My Nature dividedeightfold.
*****



BHAGAVAD-GITA🍁
ಅಧ್ಯಾಯ - 08 : ಶ್ಲೋಕ – 06
ಯಂ ಯಂ ವಾSಪಿ ಸ್ಮರನ್ ಭಾವಂ ತ್ಯಜತ್ಯಂತೇ ಕಳೇಬರಮ್ ।
ತನ್ತಮೇವೈತಿ ಕೌಂತೇಯ ಸದಾ ತದ್ ಭಾವಭಾವಿತಃ ॥೬॥
ಯಮ್ ಯಮ್ ವಾ ಅಪಿ ಸ್ಮರನ್ ಭಾವಮ್ ತ್ಯಜತಿ ಅಂತೇ ಕಳೇಬರಮ್ ।
ತಮ್ ತಮ್ ಏವ ಏತಿ ಕೌಂತೇಯ ಸದಾ ತತ್ ಭಾವ ಭಾವಿತಃ -

ಕೌಂತೇಯ, ಕೊನೆಯಲ್ಲಿ ಯಾವ ಯಾವ ವಿಷಯವನ್ನು ನೆನೆಯುತ್ತ ದೇಹವನ್ನು ತೊರೆಯುತ್ತಾನೆ ಅದರಲ್ಲೆ ಅನುಗಾಲ ಬೇರೂರಿದ ಸಂಸ್ಕಾರದಿಂದ ಅದದನ್ನೆ ಪಡೆಯುತ್ತಾನೆ.

“ಜೀವನ ಯಾತ್ರೆಯ ಅಂತಿಮ ಕ್ಷಣದಲ್ಲಿ ಭಗವಂತನನ್ನು ನೆನೆದವರು ‘ನನ್ನನ್ನು’ ಸೇರುತ್ತಾರೆ” ಎಂದು ಕೃಷ್ಣ ಏಕೆ ಹೇಳಿದ ಎನ್ನುವುದಕ್ಕೆ ಈ ಶ್ಲೋಕದಲ್ಲಿ ಉತ್ತರವಿದೆ. ಇಲ್ಲಿ ಕೃಷ್ಣ ಮರಣ ಕಾಲದ ಒಂದು ಅದ್ಭುತ ಮನಃಶಾಸ್ತ್ರವನ್ನು ನಮ್ಮ ಮುಂದೆ ತೆರೆದಿಡುತ್ತಾನೆ. ಸಾಯುವ ಕ್ಷಣದಲ್ಲಿ ಭಗವಂತನ ಧ್ಯಾನ ಮಾಡಲು ಒಂದು ಉದ್ದೇಶವಿದೆ ಎನ್ನುತ್ತಾನೆ ಕೃಷ್ಣ. ನಾವು ದೇಹ ತ್ಯಾಗ ಮಾಡುವಾಗ ಏನನ್ನು ಸ್ಮರಣೆ ಮಾಡುತ್ತೇವೋ ಮುಂದಿನ ಜನ್ಮದಲ್ಲಿ ಅದನ್ನೇ ಪಡೆಯುತ್ತೇವೆ. ಆದ್ದರಿಂದ ಆ ಕಾಲದಲ್ಲಿ ಭಗವಂತನನ್ನು ಸ್ಮರಿಸಿದರೆ ಭಗವಂತನನ್ನು ಸೇರುತ್ತೇವೆ. ಸಾವಿನ ಕೊನೇ ಕ್ಷಣದಲ್ಲಿ ಬರುವ ಚಿಂತನೆ ಮುಂದಿನ ಜನ್ಮದ ನಿರ್ಣಾಯಕ ಸಂಗತಿ. ಹಾಗಾಗಿ ಮುಂದಿನ ಜನ್ಮದಲ್ಲಿ ಆತ ಏನಾಗಬೇಕೋ ಅದೇ ನೆನಪಾಗುತ್ತದೆ! ಭಗವಂತನನ್ನು ಸೇರುವ ಯೋಗ ಇಲ್ಲದವರಿಗೆ ಭಗವಂತನ ನೆನಪು ಬರುವುದೇ ಇಲ್ಲ! ಇದಕ್ಕೆ ಶಾಸ್ತ್ರದಲ್ಲಿ ಅನೇಕ ದೃಷ್ಟಾಂತಗಳಿವೆ. ಈ ದೇಶಕ್ಕೆ ‘ಭಾರತ’ ಎಂದು ಹೆಸರು ಬರಲು ಕಾರಣನಾದ ವೃಷಭದೇವನ ಮಗ ಭರತನ ಕಥೆ ಈ ವಿಚಾರವನ್ನು ಸ್ಪಷ್ಟವಾಗಿ ಪುರಾವೆ ಸಹಿತ ಹೇಳುವ ಕಥೆ. (ಈ ಭರತ ದುಷ್ಯಂತನ ಮಗ ಭರತನಲ್ಲ, ದುಷ್ಯಂತನ ಮಗ ಭರತ ‘ಭರತವಂಶ’ ದ ಮೂಲ ಪುರುಷ). ಪರಮ ಧಾರ್ಮಿಕನಾದ ಭರತ ತನ್ನ ಮಗ ಪ್ರಾಯ ಪ್ರಬುದ್ಧನಾದ ಮೇಲೆ ತನ್ನೆಲ್ಲಾ ಅಧಿಕಾರವನ್ನು ಅವನಿಗೊಪ್ಪಿಸಿ, ವಾನಪ್ರಸ್ಥಾಶ್ರಮವನ್ನು ಸ್ವೀಕರಿಸಿ ಕಾಡಿನಲ್ಲಿ ಋಷಿಗಳ ಜೊತೆಗೆ ಸದಾ ಭಗವದ್ ನಿಷ್ಠನಾಗಿ ಬದುಕುತ್ತಿದ್ದ. ಒಂದು ದಿನ ಆತನಿಗೆ ಕಾಡಿನಲ್ಲಿ ತಾಯಿ ಸತ್ತ ಒಂದು ಜಿಂಕೆ ಮರಿ ಸಿಕ್ಕಿತು. ಭರತ ಆ ಮರಿಯನ್ನು ತಂದು ಪಾಲನೆ ಪೋಷಣೆ ಮಾಡತೊಡಗಿದ. ಇದರಿಂದ ಆತ ಸದಾ ಆ ಜಿಂಕೆಯನ್ನೇ ಪೋಷಣೆ ಮಾಡುವುದರಲ್ಲಿ ತನ್ನ ಸಮಯವನ್ನು ಕಳೆಯಲಾರಂಭಿಸಿದ. ಇದರಿಂದ ಆತನ ಸಾಧನೆಗೆ ಚ್ಯುತಿ ಬಂತು. ಆ ಜಿಂಕೆಯ ಮರಿ ಬೆಳೆದು ದೊಡ್ಡದಾಗುವ ಮೊದಲೇ ಆತ ಪ್ರಾಣತ್ಯಾಗ ಮಾಡುವ ಪ್ರಸಂಗ ಬಂತು. ಆ ಕಾಲದಲ್ಲಿ ಭರತನಿಗೆ ಭಗವಂತನ ಚಿಂತನೆಯ ಬದಲು ಕಾಡಿದ್ದು ಆ ಜಿಂಕೆ ಮರಿಯ ಚಿಂತೆ! ಇದರಿಂದ ಆತ ತನ್ನ ಮುಂದಿನ ಜನ್ಮದಲ್ಲಿ ಜಿಂಕೆಯಾಗಿ ಹುಟ್ಟಿದ. ಆದ್ದರಿಂದ ಎಂತಹ ಅಪರೋಕ್ಷ ಜ್ಞಾನಿಯನ್ನೂ ಕೂಡ ಪ್ರರಾಬ್ಧ ಬಿಡದು ಎನ್ನುವುದಕ್ಕೆ ಇದು ಶ್ರೇಷ್ಠ ಉದಾಹರಣೆ. ಈ ಕಥೆ ಕೃಷ್ಣ ಇಲ್ಲಿ ಹೇಳುವ ವಿಚಾರಕ್ಕೆ ಜ್ವಲಂತ ದೃಷ್ಟಾಂತ.

ನಾವು ಜೀವನ ಪರ್ಯಂತ ಸಾಧನೆ ಮಾಡಿದರೂ ಕೂಡಾ, ಸಾಯುವ ಕ್ಷಣದಲ್ಲಿ ಭಗವಂತನ ನೆನಪು ಬಾರದೇ ಹೋಗಬಹುದು. ಇದಕ್ಕಾಗಿ ಜೀವನ ಪರ್ಯಂತ ಅಥವಾ ಅನೇಕ ಜನ್ಮಗಳ ಸಾಧನೆ ಅಗತ್ಯ. ಕೃಷ್ಣ ಹೇಳುತ್ತಾನೆ “ಸದಾ ತದ್ ಭಾವಭಾವಿತಃ” ಎಂದು. ಇಲ್ಲಿ ಭಾವ ಅಂದರೆ ತನ್ಮಯತೆ. ಯಾವಾಗಲೂ ಭಗವಂತನಲ್ಲೇ ತನ್ಮಯವಾದ ಮನಸ್ಸಿನಿಂದ ನಿರಂತರ ಭಗವಂತನ ಚಿಂತನೆ ಮಾಡಬೇಕು. ಅಂತ್ಯ ಕಾಲದಲ್ಲಿ ಭಗವಂತನ ನೆನಪು ಬರಬೇಕಾದರೆ, ನಿರಂತರ ಭಗವಂತನಲ್ಲಿ ಮನಸ್ಸನ್ನು ನೆಲೆಗೊಳಿಸುವ ಸಂಸ್ಕಾರ ಬೇಕು. ಇದನ್ನು ಬಿಟ್ಟು ಮರಣ ಕಾಲದಲ್ಲಿ ಭಗವಂತನನ್ನು ನೆನೆದರಾಯ್ತು ಎಂದು ಜೀವನವನ್ನು ವ್ಯರ್ಥವಾಗಿ ಕಳೆದರೆ ಮರಣ ಕಾಲದಲ್ಲಿ ಭಗವಂತನ ನೆನಪು ಬರುವುದೇ ಇಲ್ಲ!

ಭೀಷ್ಮಾಚಾರ್ಯರಿಗೆ ಕೊನೆಗಾಲದಲ್ಲಿ ಎಷ್ಟೇ ಭಗವಂತನ ಬಗ್ಗೆ ಯೋಚಿಸಿದರೂ ಕೂಡಾ ಕಂಡಿದ್ದು ತನ್ನದೇ ಬಾಣದಿಂದ ಗಾಯಗೊಂಡು ನೆತ್ತರು ಸುರಿಸುತ್ತಿರುವ ಕೃಷ್ಣ! ಆನಂದಸ್ವರೂಪ ಭಗವಂತನ ನಿಜ ದರ್ಶನ ಅವರಿಗಾಗಲಿಲ್ಲ. ಇಲ್ಲಿ ನಾವು ಅರಿಯಬೇಕಾದ ವಿಚಾರವೇನೆಂದರೆ-ನಾವು ಯಾವುದೇ ಕೆಟ್ಟ ಸಂಗತಿಯನ್ನು ಗಾಢವಾಗಿ ಮನಸ್ಸಿಗೆ ಹಚ್ಚಿಕೊಳ್ಳಬಾರದು. ಹಚ್ಚಿಕೊಂಡರೆ ಕೊನೆಗಾಲದಲ್ಲಿ ಅದೇ ಕಾಣುತ್ತದೆ! ಇಡೀ ಜೀವನದಲ್ಲಿ ನಾವು ಯಾವತ್ತೂ ಕೆಟ್ಟದ್ದನ್ನು ಯೋಚಿಸಬಾರದು. ಯಾರನ್ನೂ ಕೆಟ್ಟವರೆಂದು ದ್ವೇಷಿಸಬಾರದು. ಒಬ್ಬರನ್ನು ದ್ವೇಷಿಸುವುದು ತುಂಬಾ ಕೆಟ್ಟದ್ದು. ಅದು ನಮ್ಮ ಇಡೀ ಬದುಕನ್ನೇ ಹಾಳುಮಾಡುತ್ತದೆ. ದುಷ್ಟರಿಂದ ದೂರವಿರು ಆದರೆ ದ್ವೇಷಿಸಬೇಡ. ಒಬ್ಬರನ್ನು ದ್ವೇಷಿಸುವುದು, ನಿಂದಿಸುವುದು, ಅದನ್ನು ಗಾಢವಾಗಿ ಹಚ್ಚಿಕೊಳ್ಳುವುದರಿಂದ ಅವರಿಗೆ ಏನೂ ಬಾಧಕವಿಲ್ಲ. ಆದರೆ ನಮ್ಮ ಬದುಕನ್ನು ನಾವು ಹಾಳು ಮಾಡಿಕೊಳ್ಳುತ್ತೇವೆ. ನಾವು ದ್ವೇಷಿಸುವ ವಸ್ತು ನಮ್ಮ ತಲೆಯಲ್ಲಿ ಗಾಢವಾಗಿ ನೆಲೆ ನಿಲ್ಲುತ್ತದೆ ಮತ್ತು ನಮ್ಮನ್ನು ಅಧಃಪಾತಕ್ಕೆ ಕೊಂಡೊಯ್ಯುತ್ತದೆ. ಅದು ಸಾವಿನ ಕಾಲದಲ್ಲಿ ಕೊನೆಗೆ ತಲೆಎತ್ತಿ ಹೆಡೆ ಅರಳಿಸುತ್ತದೆ! ಆದ್ದರಿಂದ ನಾವು ಈ ವಿಚಾರದಲ್ಲಿ ಎಚ್ಚರವಾಗಿರಬೇಕು. ಯಾರನ್ನಾದರು ಟೀಕೆ ಮಾಡಲು ನಾವು ಅರ್ಹರಲ್ಲ. ಏಕೆಂದರೆ ನಮಗೆ ಅಂತರಂಗ ದರ್ಶನವಿಲ್ಲ. ನಾವು ಮಾತನಾಡುವುದು ಕೇವಲ ಹೊರ ನೋಟದಿಂದ. ಒಳಗೆ ಯಾರು ಏನು ಎಂದು ನೋಡುವ ಶಕ್ತಿ ನಮಗಿಲ್ಲ. ಆದ್ದರಿಂದ ಇನ್ನೊಬ್ಬರ ಚಿಂತನೆ ಬಿಟ್ಟು ಸದಾ ಭಗವಂತನ ಚಿಂತನೆ ಮಾಡು ಎನ್ನುತ್ತಾನೆ ಕೃಷ್ಣ. ನಾವು ಚಿಂತಿಸಬೇಕಾದ ಏಕಮಾತ್ರ ವಸ್ತು ಕೇವಲ ಭಗವಂತ.
ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು

यं यं वापि स्मरन्भावं त्यजत्यन्ते कलेवरम्‌।
तं तमेवैति कौन्तेय सदा तद्भावभावितः॥

हे कुन्ती पुत्र अर्जुन! यह मनुष्य अंतकाल में जिस-जिस भी भाव को स्मरण करता हुआ शरीर त्याग करता है, उस-उसको ही प्राप्त होता है क्योंकि वह सदा उसी भाव से भावित रहा है

॥6॥
Yam yam vaapi smaran bhaavam tyajatyante kalevaram;
Tam tamevaiti kaunteya sadaa tadbhaavabhaavitah.

Whosoever at the end leaves the body, thinking of any being, to that being only does hego, O son of Kunti (Arjuna), because of his constant thought of that being!COMMENTARY: The most prominent thought of one’s life occupies the mind at the timeof death. It determines the nature of the body to be attained in the next birth.
******



ಭಗವಂತ “ನಿಷ್ಕಾಮ ಭಕ್ತಿಯಿಂದ ಮಾತ್ರ ನನ್ನನ್ನು ಕಾಣಲು ಸಾಧ್ಯ” ಎಂದು ಹೇಳಿದ.*

ಹೀಗೆ ಹೇಳಿದಾಗ-ಯಾವ ರೀತಿ ಭಗವಂತನಲ್ಲಿ ನಾವು ಭಕ್ತಿ ಮಾಡಬೇಕು, ಯಾವುದು ನಿಜವಾದ ಭಕ್ತಿ, ಭಕ್ತನಲ್ಲಿರಬೇಕಾದ ಗುಣಗಳೇನು, ಇತ್ಯಾದಿ ಪ್ರಶ್ನೆ ನಮ್ಮಲ್ಲಿ ಮೂಡುತ್ತದೆ. ಪ್ರಶ್ನೋಪನಿಷತ್ತಿನಲ್ಲಿ ಹೇಳುವಂತೆ:

ಸ ಪ್ರಾಣಮಸೃಜತ ಪ್ರಾಣಾಚ್ಛ್ರದ್ಧಾಂ 
ಖಂ ವಾಯುರ್ಜ್ಯೋತಿರಾಪಃ ಪೃಥಿವೀಂದ್ರಿಯಂ ಮನಃ |

ಅನ್ನಮನ್ನಾದ್ವೀರ್ಯಂ ತಪೋ ಮಂತ್ರಾಃ ಕರ್ಮ 
ಲೋಕಾ ಲೋಕೇಷು ಚ ನಾಮ ಚ || ೪||

ಭಗವಂತ ಈ ಪ್ರಪಂಚವನ್ನು ಸೃಷ್ಟಿ ಮಾಡಿ, ಹದಿನೈದು ಬೇಲಿಗಳ ಈ ಸಂಸಾರದಲ್ಲಿ ಜೀವವನ್ನು ಇಟ್ಟ. ಈ ಹದಿನೈದು ಬೇಲಿಗಳೆಂದರೆ:

1. ಶ್ರದ್ಧೆಯ ಬೇಲಿ: ಜೀವ ಸ್ವರೂಪಭೂತವಾದ ಬೇಲಿ (ಕಿತ್ತೆಸೆಯಲು ಆಗದ ಬೇಲಿ)- 'ಜೀವ ಸ್ವಭಾವದಿಂದ ಬಂದ ಶ್ರದ್ಧೆ'. ಮತ್ತು ಕಿತ್ತೆಸೆಯಬೇಕಾದ ಬೇಲಿ-ಮನೆತನ ,ಕುಟುಂಬ , ಬೆಳೆದ ವಾತಾವರಣದ ಪ್ರಭಾವದಿಂದ ಬಂದ ಶ್ರದ್ಧೆ.
2 -6. ಪಂಚಭೂತಗಳ ಬೇಲಿ : ಮಣ್ಣು-ನೀರು( ಅನ್ನಮಯ ಕೋಶ) ಬೆಂಕಿ-ಗಾಳಿ-ಆಕಾಶ(ಪ್ರಾಣಮಯ ಕೋಶ).
7. ಇಂದ್ರಿಯಗಳ ಬೇಲಿ: ಐದು ಜ್ಞಾನೇಂದ್ರಿಯಗಳು ಐದು ಕರ್ಮೇಂದ್ರಿಯಗಳು.
8. ಅಂತಃಕರಣದ ಬೇಲಿ: ಕೆಟ್ಟದ್ದನ್ನು ಯೋಚಿಸುವ ಮನಸ್ಸು
9. ಅನ್ನದ ಬೇಲಿ: ಆಹಾರ
10. ವೀರ್ಯದ ಬೇಲಿ: ಶಕ್ತಿ
11. ತಪಃ : ಹಾಗಾಗಬೇಕು ಹೀಗಾಗಬೇಕು ಅನ್ನುವ ಆಲೋಚನೆ (ತಿರುಕನ ಕನಸಿನಂತೆ).
12. ಮಂತ್ರಃ :ತನ್ನ ಕನಸನ್ನು ನನಸು ಮಾಡಲು ಆಡುವ ಮಾತುಗಾರಿಕೆ..
13. ಕರ್ಮಃ : ಕನಸನ್ನು ಸಾಧಿಸಲು ಮಾಡುವ ಕರ್ಮ.
14. ಲೋಕಗಳು : ಸ್ತಿರ-ಚರ ಸೊತ್ತುಗಳು (ನಾನು ಮಾಡಿದ್ದು , ನನ್ನದು ಅನ್ನುವ ಸೊತ್ತುಗಳು)
15. ನಾಮದ ಬೇಲಿ : ಕೀರ್ತಿ(Name and fame).

ಈ ಹದಿನೈದು ಬೇಲಿಯ ಒಳಗೆ ಸಿಕ್ಕಿ ಹಾಕಿಕೊಂಡಿರುವ ಹದಿನಾರನೆಯದಾದ ‘ಕ್ಷರ’. ಜೀವನಿಗೆ ಈ ಮೇಲಿನ ಬೇಲಿ ಎನ್ನುವ ಅಂಗಿ ಹಾಕಿ ಈ ಪ್ರಪಂಚಕ್ಕೆ ಕಳಿಸಿರುವ ಚಿತ್ ಪ್ರಕೃತಿ ಹದಿನೇಳನೆಯವಳಾದ-ಲಕ್ಷ್ಮಿ. ಆಕೆ ಅಕ್ಷರಪುರುಷಳು. ಕ್ಷರ-ಅಕ್ಷರಗಳಿಗಿಂತ ಅತೀತನಾದ ಭಗವಂತ ಹದಿನೆಂಟನೆಯವನಾದ ಪುರುಷಃ. ಆತ ಪುರುಷೋತ್ತಮ. ಗೀತೆಯಲ್ಲಿ ಇಲ್ಲಿಯ ತನಕ ಭಗವಂತ ಹೇಳಿರುವುದೇನೆಂದರೆ “ನನ್ನನ್ನು ಭಕ್ತಿಯಿಂದ ಭಜಿಸುವವನು ಈ ಸಂಸಾರ ಬಂಧದಿಂದ ಮುಕ್ತಿ ಪಡೆದು ನನ್ನನ್ನು ಸೇರುತ್ತಾನೆ” ಎಂದು. ಇಲ್ಲಿ ನಮಗೆ ಬರುವ ಪ್ರಶ್ನೆ ಏನೆಂದರೆ-ಏಕೆ ಹದಿನೇಳನೆಯವಳಾದ ಶ್ರೀತತ್ವವನ್ನು ಪೂಜಿಸಬಾರದು, ತಂದೆಗಿಂತ ತಾಯಿ ಕರುಣಾಮಯಿ. ನಮ್ಮನ್ನು ಸಂಸಾರಬಂಧದಲ್ಲಿ ಹಾಕಿದ ತಾಯಿಯನ್ನು ಪೂಜಿಸುವುದರಿಂದ ನಮಗೆ ಮೋಕ್ಷಪ್ರಾಪ್ತಿ ಸುಲಭವಾಗಬಹುದಲ್ಲವೇ? ಯಾವ ದಾರಿ ಹೆಚ್ಚು ಸೂಕ್ತ ಎನ್ನುವುದು. ಶ್ರೀತತ್ವದಿಂದ ಮುಕ್ತಿ ಸಾಧ್ಯ ಎಂದು ಸ್ತುತಿಯಲ್ಲಿ ಹೇಳಲಾಗಿದೆ. ಉದಾಹರಣೆಗೆ ಎಲ್ಲರೂ ದೇವರ ಪೂಜೆ ಮಾಡಿ ಮಂಗಳಾರತಿ ಮಾಡುವಾಗ ಹೇಳುವ ಈ ಕೆಳಗಿನ ಶ್ರೀಸೂಕ್ತದ ಸಾಲು:

ಶ್ರಿಯೇ ಜಾತಃ ಶ್ರಿಯ ಆನಿರ್ಯಾಯಃ 
ಶ್ರಿಯಂ ವಯೋ ಜನಿತೃಭ್ಯೋದಧಾತು |

ಶ್ರಿಯಂ ವಸಾನಾಃ ಅಮೃತತ್ವಮಾಯನ್ 
ಭಜಂತಿ ಸದ್ಯಸ್ಸಮಿಧಾ ಮಿತದ್ಯೂನ್ ||

ಇಲ್ಲಿ ಹೇಳುವಂತೆ: "ಶ್ರೀತತ್ವದ ಉಪಾಸನೆಗೋಸ್ಕರ ನಾವು ಹುಟ್ಟಿದ್ದೇವೆ. ಶ್ರೀತತ್ವವನ್ನು ಸ್ತೋತ್ರಮಾಡುವವನಿಗೆ ಆಕೆ ಸಂಪತ್ತನ್ನೂ ಧೀರ್ಘಾಯುಷ್ಯವನ್ನು ಕೊಡುತ್ತಾಳೆ. ಶ್ರೀತತ್ವ ಉಪಾಸನೆ ಮಾಡಿದವರು ಅಮೃತತ್ವವನ್ನು ಪಡೆದರು. ದಂಪತಿಗಳು ಶ್ರೀತತ್ವವನ್ನು ಉಪಾಸನೆ ಮಾಡುವುದರಿಂದ ಅವರ ಇಷ್ಟಾರ್ಥ ಸಿದ್ಧಿಯಾಗುತ್ತದೆ. ಆಕೆ ಮೋಕ್ಷಪ್ರದಳು". ಹೀಗೆ ಹೇಳಿರುವುದರಿಂದ ಶ್ರೀತತ್ವದ ಉಪಾಸನೆಯಿಂದ ಕೂಡ ಮೋಕ್ಷ ಪಡೆಯಬಹುದು ಎನ್ನುವ ಅಂಶ ಸ್ಪಷ್ಟ. ಪುರುಷೋತ್ತಮ ಭಗವಂತನ ಉಪಾಸನೆ ಮತ್ತು ಶ್ರೀತತ್ವ ಅಥವಾ ಅಕ್ಷರ ಉಪಾಸನೆ ಇದರಲ್ಲಿ ಯಾವ ದಾರಿ ಹೆಚ್ಚು ಸೂಕ್ತ? ಇದು ಇಲ್ಲಿ ನಮ್ಮ ನಿಮ್ಮೆಲರ ಪ್ರಶ್ನೆ. ನಮ್ಮ ಪ್ರತಿನಿಧಿ ಅರ್ಜುನ ಈ ನಮ್ಮ ಪ್ರಶ್ನೆಯನ್ನು ಭಗವಂತನ ಮುಂದಿಡುವುದರೊಂದಿಗೆ ಈ ಅಧ್ಯಾಯ ಆರಂಭವಾಗುತ್ತದೆ. ಎರಡನೆ ಷಟ್ಕದ ಕೊನೆಯ ಅಧ್ಯಾಯವಾದ ಇಲ್ಲಿ ಕೇವಲ ಇಪ್ಪತ್ತು ಶ್ಲೋಕಗಳಿವೆ. ಅಧ್ಯಾಯ ಚಿಕ್ಕದಾದರೂ ಕೂಡ ಈ ಅಧ್ಯಾಯ ಅಪೂರ್ವ ವಿಷಯಗಳನ್ನೊಳಗೊಂಡ ಅಧ್ಯಾಯ. ಭಗವಂತ ಇಲ್ಲಿ ಹೇಳಿರುವ ವಿಚಾರಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನಮ್ಮ ಬದುಕು ಸಾರ್ಥಕವಾಗುತ್ತದೆ. ಬನ್ನಿ, ಈ ಅಧ್ಯಾಯದಲ್ಲಿ ಹೇಳಿರುವ ಅಪೂರ್ವ ಗುಣ-ಭಕ್ತಿ ಸಂದೇಶವನ್ನು ತಿಳಿಯೋಣ.

ಭಗವಂತ “ನಿಷ್ಕಾಮ ಭಕ್ತಿಯಿಂದ ಮಾತ್ರ ನನ್ನನ್ನು ಕಾಣಲು ಸಾಧ್ಯ” ಎಂದು ಹೇಳಿದ.*
*******



🍁BHAGAVAD-GITA🍁

ಅಧ್ಯಾಯ - 08 : ಶ್ಲೋಕ – 16

ಆ ಬ್ರಹ್ಮಭುವನಾಲ್ಲೋಕಾಃ ಪುನರಾವರ್ತಿನೋರ್ಜುನ ।
ಮಾಮುಪೇತ್ಯ ತು ಕೌಂತೇಯ ಪುನರ್ಜನ್ಮ ನ ವಿದ್ಯತೇ ॥೧೬॥

ಆ ಬ್ರಹ್ಮಭುವನಾತ್ ಲೋಕಾಃ  ಪುನಃ ಆವರ್ತಿನಃ ಅರ್ಜುನ   । 
ಮಾಮ್ ಉಪೇತ್ಯ ತು ಕೌಂತೇಯ ಪುನಃ ಜನ್ಮ ನ ವಿದ್ಯತೇ –

ಅರ್ಜುನ, ಬ್ರಹ್ಮ ಲೋಕದ ತನಕದ ಎಲ್ಲ ಲೋಕಗಳಿಂದಲೂ  ಮರಳಿ ಬರಲೇಬೇಕು. ಕೌಂತೇಯ, ನನ್ನನ್ನು ಪಡೆದಾಗ ಮಾತ್ರ ಮರುಹುಟ್ಟು ಇಲ್ಲ.

ಬ್ರಹ್ಮ ಲೋಕದಿಂದ ಹಿಡಿದು ಇತರ ಎಲ್ಲಾ ಲೋಕಗಳಿಗೂ ಒಂದು ದಿನ ನಾಶವಿದೆ. ಚತುರ್ಮುಖ ಬ್ರಹ್ಮನ ಆಯಸ್ಸು 31,104,000,0000000(ಮೂವತ್ತೊಂದು ಸಾವಿರದ ನೂರಾ ನಾಲ್ಕು ಸಾವಿರ ಕೋಟಿ) ವರ್ಷ. ಇದು ಭಗವಂತನಿಗೆ ಒಂದು ಹಗಲಿನಂತೆ!  ಭಗವಂತ ಕಾಲಾತೀತ. ಆದ್ದರಿಂದ ಕೃಷ್ಣ ಹೇಳುತ್ತಾನೆ “ನನ್ನನ್ನು ಪಡೆದಾಗ ಮಾತ್ರ ಮರುಹುಟ್ಟು ಇಲ್ಲ” ಎಂದು.
ಕೃಪೆ:  ಪದ್ಮಶ್ರೀ  ಶ್ರೀ ಬನ್ನಂಜೆ ಗೋವಿಂದಾಚಾರ್ಯರು

आब्रह्मभुवनाल्लोकाः पुनरावर्तिनोऽर्जुन।
मामुपेत्य तु कौन्तेय पुनर्जन्म न विद्यते॥


हे अर्जुन! ब्रह्मलोकपर्यंत सब लोक पुनरावर्ती हैं, परन्तु हे कुन्तीपुत्र! मुझको प्राप्त होकर पुनर्जन्म नहीं होता, क्योंकि मैं कालातीत हूँ और ये सब ब्रह्मादि के लोक काल द्वारा सीमित होने से अनित्य हैं

॥16॥
Aabrahmabhuvanaallokaah punaraavartino’rjuna;
Maamupetya tu kaunteya punarjanma na vidyate.

(All) the worlds, including the world of Brahma, are subject to return again, O Arjuna!But he who reaches Me, O son of Kunti, has no rebirth!
*********

BHAGAVAD-GITA🍁

ಅಧ್ಯಾಯ - 09: ಶ್ಲೋಕ – 05

ನಚ ಮತ್ ಸ್ಥಾನಿ ಭೂತಾನಿ ಪಶ್ಯ ಮೇ ಯೋಗಮೈಶ್ವರಮ್ ।ಭೂತಭೃನ್ನ ಚ ಭೂತಸ್ಥೋ ಮಮಾSತ್ಮಾ ಭೂತಭಾವನಃ ॥೫॥

ನಚ ಮತ್ ಸ್ಥಾನಿ ಭೂತಾನಿ ಪಶ್ಯ ಮೇ ಯೋಗಮ್ ಈಶ್ವರಮ್ ।
ಭೂತಭೃತ್ ನಚ ಭೂತಸ್ಥಃ ಮಮ ಆತ್ಮಾ ಭೂತಭಾವನಃ –

ನನ್ನಲ್ಲಿ ಎಲ್ಲ ಉಂಟು; ನನಗಿಲ್ಲ ಯಾವುದರ ಅಂಟು. ನೋಡು-ಮಿಗಿಲಾದ ನನ್ನ ಮಹಿಮೆಯನ್ನು. ನನ್ನ ರೂಪ ಇವುಗಳಿಗೆ ರೂಪು ಕೊಟ್ಟಿದೆ. ಹೊತ್ತು ಸಲಹಿದೆ. ಆದರೂ ಇವುಗಳಲ್ಲಿಲ್ಲ.

ಹಿಂದಿನ ಮತ್ತು ಈ ಶ್ಲೋಕದಲ್ಲಿ ಕೃಷ್ಣ ಹೇಳುವ ವಿಚಾರವನ್ನು ನಾವು ಗಮನವಿಟ್ಟು ನೋಡಬೇಕು. ಮೇಲ್ನೋಟಕ್ಕೆ ಇವು ಒಂದೊಕ್ಕೊಂದು ವಿರುದ್ಧವಾಗಿರುವ ಒಗಟಿನ ಹೇಳಿಕೆಯಂತೆ ಕಾಣುತ್ತದೆ. ಕೃಷ್ಣ ಹೇಳುವ ಮಾತು ಹೀಗಿದೆ "ನನ್ನ ಸಾಮರ್ಥ್ಯವನ್ನು ತಿಳಿ, ನಾನು ಎಲ್ಲವುದರಲ್ಲೂ ಇದ್ದೇನೆ-ಆದರೆ ಯಾವುದರಲ್ಲೂ ಇಲ್ಲ. ಎಲ್ಲವೂ ನನ್ನಲ್ಲಿದೆ ಆದರೆ ಯಾವುದೂ ನನ್ನಲ್ಲಿಲ್ಲ” ಇದು ಭಗವಂತನ ಅಚಿಂತ್ಯ ಶಕ್ತಿಯ ಅನುಸಂಧಾನ. ಭಾಗವತದಲ್ಲಿ ಹೇಳುವಂತೆ ‘ನಾವು ಯಾವುದನ್ನು ಪ್ರಪಂಚದಲ್ಲಿ ವಿರೋಧಾತ್ಮಕ(Contradictory) ಎನ್ನುತ್ತೇವೋ ಅವು ಶುಭ ಧರ್ಮವಾದಲ್ಲಿ ಭಗವಂತನಲ್ಲಿ ಅನ್ವಯವಾಗುತ್ತವೆ’. ಈ ವಿರುದ್ಧವಾದ ಧರ್ಮವನ್ನು ಹೇಳುವುದರ ಮೂಲಕ ಇಲ್ಲಿ ಭಗವಂತ ಏನನ್ನು ತಿಳಿಸುತ್ತಿದ್ದಾನೆ ಅಂದರೆ “ ಎಲ್ಲವೂ ನನ್ನಲ್ಲಿದೆ ಆದರೆ ಯಾವ ಮಮಕಾರ(Attachment)ನನಗಿಲ್ಲ”. ಅಂದರೆ ಇದು ಭಗವಂತನ ನಿರ್ಲಿಪ್ತತೆಯನ್ನು ಸೂಚಿಸುತ್ತದೆ. ಆತ ಯಾವುದನ್ನೂ ಅಂಟಿಸಿಕೊಳ್ಳುವುದಿಲ್ಲ. ಆತ ಯಾವುದನ್ನೂ ಆಶ್ರಯಿಸಿಕೊಂಡಿಲ್ಲ ಮತ್ತು ಯಾವುದರ ಲೇಪವೂ ಆತನಿಗಿಲ್ಲ. ಕೃಷ್ಣ ಹೇಳುತ್ತಾನೆ “ಇದು ನನ್ನ ಈಶ್ವರೀಯ ಶಕ್ತಿ” ಎಂದು. ಇದು ಭಗವಂತನ ಸರ್ವಸಮರ್ಥತೆ.

ಈ ವಿಚಾರವನ್ನು ಕೃಷ್ಣ ಇನ್ನೊಮ್ಮೆ ಸಂಕ್ಷಿಪ್ತ(Crisp)ವಾಗಿ “ಭೂತಭೃತ್ ನಚ ಭೂತಸ್ಥಃ” ಎಂದು ವಿವರಿಸುತ್ತಾನೆ. ಇಲ್ಲಿ ‘ನಚ’ ಅನ್ನುವ ಪದ ಹೊಸ್ತಿಲಲ್ಲಿ ಇಟ್ಟ ದೀಪದಂತೆ ಎರಡು ಪದಗಳ ನಡುವೆ ಬಳಕೆಯಾಗಿದೆ. ಇದರರ್ಥ ಹೀಗೆ: “ನಾನು ಭೂತಭೃತ್-ಎಲ್ಲಾ ಜೀವಜಾತಗಳನ್ನು ಧರಿಸಿದ್ದೇನೆ ಮತ್ತು ನಚಭೂತಭೃತ್-ಏನನ್ನೂ ಧರಿಸಿಲ್ಲ; ನಾನು ಭೂತಸ್ಥ-ಎಲ್ಲ ಜೀವಜಾತಗಳು ನನ್ನಲ್ಲಿವೆ ಮತ್ತು ನಾನು ನಚಭೂತಸ್ಥ-ಯಾವುದರಲ್ಲೂ ನಾನಿಲ್ಲ”.

ಕೃಷ್ಣ ಹೇಳುತ್ತಾನೆ “ಮಮ ಆತ್ಮಾ ಭೂತಭಾವನಃ” ಎಂದು. ಅಂದರೆ ಈ ಜಗತ್ತಿನ ಸೃಷ್ಟಿ-ಸ್ಥಿತಿ-ಸಂಹಾರ-ನಿಯಮನ-ಜ್ಞಾನ-ಅಜ್ಞಾನ-ಬಂಧ-ಮೋಕ್ಷ ಎಲ್ಲವೂ ಭಗವಂತನಿಂದ. ಇಲ್ಲಿ ಕೃಷ್ಣ ‘ಮಮ ಆತ್ಮ’ ಎಂದಿದ್ದಾನೆ. ಭಗವಂತ ಜ್ಞಾನಾನಂದ ಸ್ವರೂಪ. ಭಗವಂತ ಬೇರೆ ಆತನ ದೇಹ ಬೇರೆ ಅಲ್ಲ. ಭಗವಂತನ ಗುಣ ಕ್ರಿಯೆಗಳು ಬೇರೆ ಅಲ್ಲ. ಅವೆಲ್ಲವೂ ಅಖಂಡ. ಇದನ್ನು ಪಾಂಚಬೌತಿಕ ಮತ್ತು ತ್ರೈಗುಣ್ಯದ ಪರಿದಿಯಲ್ಲಿ ನಾವು ಕಲ್ಪಿಸಲು ಸಾಧ್ಯವಿಲ್ಲ.

ಭಗವಂತ ಹೇಗೆ ಎಲ್ಲಾ ಕಡೆ ತುಂಬಿದ್ದಾನೆ ಎನ್ನುವುದನ್ನು ಕೃಷ್ಣ ಒಂದು ದೃಷ್ಟಾಂತದ ಮೂಲಕ ಮುಂದಿನ ಶ್ಲೋಕದಲ್ಲಿ ವಿವರಿಸುತ್ತಾನೆ.
ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು

न च मत्स्थानि भूतानि पश्य मे योगमैश्वरम्‌।
भूतभृन्न च भूतस्थो ममात्मा भूतभावनः॥

वे सब भूत मुझमें स्थित नहीं हैं, किंतु मेरी ईश्वरीय योगशक्ति को देख कि भूतों का धारण-पोषण करने वाला और भूतों को उत्पन्न करने वाला भी मेरा आत्मा वास्तव में भूतों में स्थित नहीं है

॥5॥
Na cha matsthaani bhootaani pashya me yogamaishwaram;

Bhootabhrinna cha bhootastho mamaatmaa bhootabhaavanah.

Nor do beings exist in Me (in reality): behold My divine Yoga, supporting all beings, butnot dwelling in them, is My Self, the efficient cause of beings.
******


BHAGAVAD-GITA🍁

ಅಧ್ಯಾಯ - 09: ಶ್ಲೋಕ – 06

ಯಥಾSSಕಾಶಸ್ಥಿತೋ ನಿತ್ಯಂ ವಾಯುಃ ಸರ್ವತ್ರಗೋ ಮಹಾನ್।ತಥಾ ಸರ್ವಾಣಿ ಭೂತಾನಿ ಮತ್ ಸ್ಥಾನೀತ್ಯುಪಧಾರಯ ॥೬॥

ಯಥಾ ಆಕಾಶಸ್ಥಿತಃ ನಿತ್ಯಮ್ ವಾಯುಃ ಸರ್ವತ್ರ ಗಃ ಮಹಾನ್।
ತಥಾ ಸರ್ವಾಣಿ ಭೂತಾನಿ ಮತ್ ಸ್ಥಾನಿ ಇತಿ ಉಪಧಾರಯ –

ಎಲ್ಲೆಡೆ ಹಿಗ್ಗಿ ತುಂಬಿರುವ ಗಾಳಿ ಎಂದೆಂದೂ ಆಗಸದಲ್ಲಿರುವಂತೆ ಜಗದ ಎಲ್ಲ ಇರುವಿಕೆಗಳೂ ನನ್ನಲ್ಲಿವೆ. ಎಂದು ಮನಗಾಣು.

ಗಾಳಿ ಎಲ್ಲಾ ಕಡೆ ಇದೆ. ಅದು ಒಳಗೂ ಇದೆ, ಹೊರಗೂ ಇದೆ. ಗಾಳಿ ನಮಗೆ ಕಾಣುವುದಿಲ್ಲ. ಗಾಳಿ ಈ ಆಕಾಶದಲ್ಲಿ ತುಂಬಿದೆ. ಹೀಗೆ ಭಗವಂತ ನಮ್ಮ ಒಳಗೂ ಹೊರಗೂ ತುಂಬಿ ನಿಂತಿದ್ದಾನೆ. ಆದರೆ ಯಾವುದರ ಲೇಪವೂ ಆತನಿಗಿಲ್ಲ. ಈ ಜಗತ್ತಿನ ಸರ್ವ ಇರುವಿಕೆಯೂ ಭಗವಂತನಲ್ಲಿದೆ.
ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು

यथाकाशस्थितो नित्यं वायुः सर्वत्रगो महान्‌।
तथा सर्वाणि भूतानि मत्स्थानीत्युपधारय॥

जैसे आकाश से उत्पन्न सर्वत्र विचरने वाला महान्‌ वायु सदा आकाश में ही स्थित है, वैसे ही मेरे संकल्प द्वारा उत्पन्न होने से संपूर्ण भूत मुझमें स्थित हैं, ऐसा जान

॥6॥
Yathaakaashasthito nityam vaayuh sarvatrago mahaan;
Tathaa sarvaani bhootaani matsthaaneetyupadhaaraya.

As the mighty wind, moving everywhere, rests always in the ether, even so, know thouthat all beings rest in Me.
*******


BHAGAVAD-GITA🍁

ಅಧ್ಯಾಯ - 09: ಶ್ಲೋಕ – 07

ಸರ್ವಭೂತಾನಿ ಕೌಂತೇಯ ಪ್ರಕೃತಿಂ ಯಾಂತಿ ಮಾಮಿಕಾಮ್ ।
ಕಲ್ಪಕ್ಷಯೇ ಪುನಸ್ತಾನಿ ಕಲ್ಪಾದೌ ವಿಸೃಜಾಮ್ಯಹಮ್ ॥೭॥

ಸರ್ವಭೂತಾನಿ ಕೌಂತೇಯ ಪ್ರಕೃತಿಂ ಯಾಂತಿ ಮಾಮಿಕಾಮ್ ।
ಕಲ್ಪಕ್ಷಯೇ ಪುನಃ ತಾನಿ ಕಲ್ಪ ಆದೌ ವಿಸೃಜಾಮಿ ಅಹಮ್ –


ಸೃಷ್ಟಿಯ ಕೊನೆಯಲ್ಲಿ ಎಲ್ಲ ವಸ್ತುಗಳೂ ನನ್ನದೇ ಆದ ಮೂಲ ಪ್ರಕೃತಿಯನ್ನು ಸೇರುತ್ತವೆ. ಸೃಷ್ಟಿಯ ಮೊದಲಲ್ಲಿ ಮರಳಿ ಅವನ್ನುನಾನು ನಿರ್ಮಿಸುತ್ತೇನೆ.

ಸೃಷ್ಟಿಯಾಗಿ 31,104 ಸಾವಿರ ಕೋಟಿ ವರ್ಷಗಳ ನಂತರ ಮಹಾಪ್ರಳಯ. ಇದು ಚತುರ್ಮುಖ ಬ್ರಹ್ಮನ ನೂರು ವರ್ಷ. ಇದನ್ನು ಕಲ್ಪಕ್ಷಯ ಎನ್ನುತ್ತಾರೆ. ಈ ಮಹಪ್ರಳಯದಲ್ಲಿ ಸತ್ಯಲೋಕದಿಂದ ಹಿಡಿದು ಪ್ರತಿಯೊಂದೂ ತನ್ನ ಸ್ಥೂಲ ರೂಪವನ್ನು ಕಳೆದುಕೊಂಡು ಸೂಕ್ಷ್ಮ ರೂಪದಲ್ಲಿ ಭಗವಂತನ ಅಧೀನವಾದ ಪ್ರಕೃತಿಯನ್ನು ಸೇರುತ್ತವೆ. ಎಲ್ಲಾ ಜೀವ ಜಾತಗಳೂ ಕೂಡಾ ತನ್ನ ಸ್ಥೂಲ ರೂಪವನ್ನು ಕಳೆದುಕೊಂಡು ಭಗವಂತನ ಉದರವನ್ನು ಸೇರುತ್ತದೆ. ಮತ್ತೆ 31,104 ಸಾವಿರ ಕೋಟಿ ವರ್ಷ ಪ್ರಳಯಕಾಲ. ನಂತರ ಮರಳಿ ಈ ಸೃಷ್ಟಿ ನಿರ್ಮಾಣವಾಗುತ್ತವೆ. ಅಂದರೆ ಮರಳಿ ಸೂಕ್ಷ್ಮರೂಪದಿಂದ ಸ್ಥೂಲರೂಪವನ್ನು ಪಡೆಯುತ್ತವೆ.

ಕೃಪೆ: ಪದ್ಮಶ್ರೀ ಶ್ರೀ ಬನ್ನಂಜೆ ಗೋವಿಂದಾಚಾರ್ಯರು


( जगत की उत्पत्ति का विषय )
सर्वभूतानि कौन्तेय प्रकृतिं यान्ति मामिकाम्‌।
कल्पक्षये पुनस्तानि कल्पादौ विसृजाम्यहम्‌॥

हे अर्जुन! कल्पों के अन्त में सब भूत मेरी प्रकृति को प्राप्त होते हैं अर्थात्‌ प्रकृति में लीन होते हैं और कल्पों के आदि में उनको मैं फिर रचता हूँ

॥7॥
Sarvabhootaani kaunteya prakritim yaanti maamikaam;
Kalpakshaye punastaani kalpaadau visrijaamyaham.

All beings, O Arjuna, enter into My Nature at the end of a Kalpa;

I send them forth againat the beginning of (the next) Kalpa!
*******



BHAGAVAD-GITA🍁

ಅಧ್ಯಾಯ - 09: ಶ್ಲೋಕ – 13

ಮಹಾತ್ಮಾನಸ್ತು ಮಾಂ ಪಾರ್ಥ ದೈವೀಂ ಪ್ರಕೃತಿಮಾಶ್ರಿತಾಃ ।
ಭಜಂತ್ಯನನ್ಯಮನಸೋ ಜ್ಞಾತ್ವಾ ಭೂತಾದಿಮವ್ಯಯಮ್ ॥೧೩॥

ಮಹಾ ಆತ್ಮಾನಃ ತು ಮಾಮ್ ಪಾರ್ಥ ದೈವೀಮ್ ಪ್ರಕೃತಿಮ್ ಆಶ್ರಿತಾಃ ।
ಭಜಂತಿ ಅನನ್ಯ ಮನಸಃ ಜ್ಞಾತ್ವಾ ಭೂತ ಆದಿಮ್ ಅವ್ಯಯಮ್ –

ಓ ಪಾರ್ಥ, ಸಾತ್ವಿಕ ಸ್ವಭಾವದ ಹಿರಿಯ ಮಂದಿ, ಅಳಿವ ವಿಶ್ವಕ್ಕೆಲ್ಲ ಅಳಿವಿರದ ನಾನೆ ಕಾರಣ ಎಂದು ತಿಳಿದು, ಒಂದೆ ಬಗೆಯಿಂದ ನನ್ನನ್ನು ಪೂಜಿಸುತ್ತಾರೆ.

ಹಿಂದಿನ ಶ್ಲೋಕದಲ್ಲಿ ಆಸುರೀ ಮತ್ತು ರಾಕ್ಷಸ ಸ್ವಭಾವದವರನ್ನು ವಿವರಿಸಿದ ಕೃಷ್ಣ ಇಲ್ಲಿ ದೈವೀ ಸ್ವಭಾವದವರನ್ನು ವಿವರಿಸುತ್ತಾನೆ. ದೈವೀ ಸ್ವಭಾವದವರು ಸದಾ ಜ್ಞಾನದ, ಬೆಳಕಿನ, ಸತ್ಯದ ದಾರಿಯಲ್ಲಿ ಸಾಗುವವರು. ಅವರು ಭಗವಂತನನ್ನು ತಿಳಿಯುವ ಭಾಗ್ಯ ಪಡೆದವರು. ಇವರನ್ನು ಭಗವಂತ “ಮಹಾತ್ಮರು” ಎನ್ನುತ್ತಾನೆ. ಭಗವಂತನಿಗೆ ಇವರ ಮೇಲೆ ಅಪಾರ ಪ್ರೀತಿ. ಕೃಷ್ಣ ಹೇಳುತ್ತಾನೆ “ಅವರು ನನ್ನನ್ನು ಅನನ್ಯ ಮನಸ್ಸಿನಿಂದ ಭಜನೆ ಮಾಡುತ್ತಾರೆ” ಎಂದು. ನಾವು ದೇವರನ್ನು ಪ್ರೀತಿಸುವುದು ಮತ್ತು ದೇವರು ನಮ್ಮನ್ನು ಪ್ರೀತಿಸುವುದು ನಿಜವಾದ ಭಜನೆ. ದೈವೀ ಸ್ವಭಾವದವರು ಭಗವಂತನನ್ನು ಬಿಟ್ಟು ಉಳಿದುದೆಲ್ಲವೂ ನಶ್ವರ, ಶಾಶ್ವತ ಸತ್ಯ ಭಗವಂತ ಮಾತ್ರ ಎನ್ನುವ ಸತ್ಯವನ್ನು ಅರಿತಿರುತ್ತಾರೆ. ಪ್ರಪಂಚದಲ್ಲಿ ಭಗವಂತ ಮತ್ತು ಆತನ ಜ್ಞಾನ ಮಾತ್ರ ಅವ್ಯಯ. ಉಳಿದ (ದುಡ್ಡು, ಆಸ್ತಿ, ಚಿನ್ನ, ಅಧಿಕಾರ, ಇತ್ಯಾದಿ) ಎಲ್ಲವೂ ವ್ಯಯ. ನಶ್ವರವಲ್ಲದ ಸಂಪತ್ತು ಭಗವಂತ ಮತ್ತು ಆತನ ಜ್ಞಾನ. ಈ ರೀತಿ ಭಗವಂತನ ಚಿಂತನೆ ಮಾಡುವವರು ಮಹಾತ್ಮರು.

ಈ ಶ್ಲೋಕದಲ್ಲಿ ಬಂದಿರುವ ವಿಶೇಷಣ ‘ಪಾರ್ಥ’. “ಪ್ರಥೆಯ ಮಗನೆ” ಎಂದು ಕೃಷ್ಣ ಅರ್ಜುನನನ್ನು ಸಂಬೋಧಿಸುತ್ತಿದ್ದಾನೆ ಎನ್ನುವುದು ಮೇಲ್ನೋಟದ ಅರ್ಥ. ವ್ಯುತ್ಪತ್ತಿ ಶಾಸ್ತ್ರೀಯ ದೃಷ್ಟಿಯಿಂದ(Etymologically) ನೋಡಿದರೆ ಈ ವಿಶೇಷಣದ ಹಿಂದೆ ಅಧ್ಯಾತ್ಮಿಕವಾಗಿ ಬೇರೆಯೇ ಅರ್ಥವಿದೆ. ‘ಪ್ರಥ- ವಿಸ್ತಾರೆ’ ಧಾತು. ಯಾವುದು ಹಬ್ಬಿಕೊಂಡಿದೆಯೋ, ಯಾವುದು ಎಲ್ಲಾ ಕಡೆ ತುಂಬಿದೆಯೋ ಅದು ‘ಪ್ರಥ’. ಇದು ಭಗವಂತನ ಸರ್ವಗತತ್ವವನ್ನು ಸೂಚಿಸುತ್ತದೆ. ಭಗವಂತ ಸರ್ವಗತ ಎನ್ನುವ ಸತ್ಯವನ್ನು ಅರಿತು ಅವನನ್ನು ಎಲ್ಲ ಕಡೆ ಕಾಣುವವರು ‘ಪಾರ್ಥರು’. ಇನ್ನೊಂದು ಅರ್ಥದಲ್ಲಿ ವೇದಾರ್ಥಭೂತನಾದ ಭಗವಂತನನ್ನು, ಅವನ ಗುಣಗಳನ್ನು, ಸದಾ ಪಾನ ಮಾಡುವವರು ‘ಪಾರ್ಥರು’. ನಾವೆಲ್ಲರೂ ವೇದಾರ್ಥವನ್ನು ಪಾನ ಮಾಡುತ್ತಾ ಪಾರ್ಥರಾಗಬೇಕು. ಎಲ್ಲೆಡೆ ಹಬ್ಬಿರುವ ಸರ್ವಗತವಾದ ಶಕ್ತಿಯನ್ನು ನಮ್ಮೊಳಗೂ ಕಾಣಬೇಕು ಎನ್ನುವುದು ಈ ಸಂಬೋಧನೆಯ ಹಿಂದಿರುವ ಸಂದೇಶ.

ದೈವೀ ಸ್ವಭಾವದವರು ಭಗವಂತನನ್ನು ಯಾವಯಾವ ಬಗೆಯಲ್ಲಿ ಉಪಾಸನೆ ಮಾಡುತ್ತಾರೆ ಎನ್ನುವುದನ್ನು ಕೃಷ್ಣ ಮುಂದಿನ ಶ್ಲೋಕದಲ್ಲಿ ವಿವರಿಸುತ್ತಾನೆ.

ಕೃಪೆ: ಪದ್ಮಶ್ರೀ  ಶ್ರೀ ಬನ್ನಂಜೆ ಗೋವಿಂದಾಚಾರ್ಯರು

महात्मानस्तु मां पार्थ दैवीं प्रकृतिमाश्रिताः।
भजन्त्यनन्यमनसो ज्ञात्वा भूतादिमव्यम्‌॥

परंतु हे कुन्तीपुत्र! दैवी प्रकृति के (इसका विस्तारपूर्वक वर्णन गीता अध्याय 16 श्लोक 1 से 3 तक में देखना चाहिए) आश्रित महात्माजन मुझको सब भूतों का सनातन कारण और नाशरहित अक्षरस्वरूप जानकर अनन्य मन से युक्त होकर निरंतर भजते हैं

॥13॥
Mahaatmaanastu maam paartha daiveem prakritimaashritaah;
Bhajantyananyamanaso jnaatwaa bhootaadimavyayam.

But the great souls, O Arjuna, partaking of My divine nature, worship Me with a singlemind (with the mind devoted to nothing else), knowing Me as the imperishable source of beings!
********



ಅಧ್ಯಾಯ - 07 : ಶ್ಲೋಕ – 17
ತೇಷಾಂ ಜ್ಞಾನೀ ನಿತ್ಯಯುಕ್ತ ಏಕಭಕ್ತಿರ್ವಿಶಿಷ್ಯತೇ ।
ಪ್ರಿಯೋ ಹಿ ಜ್ಞಾನಿನೋSತ್ಯರ್ಥಮಹಂ ಸ ಚ ಮಮ ಪ್ರಿಯಃ ॥೧೭॥

ತೇಷಾಮ್ ಜ್ಞಾನೀ ನಿತ್ಯಯುಕ್ತಃ ಏಕಭಕ್ತಿಃ ವಿಶಿಷ್ಯತೇ ।
ಪ್ರಿಯಃ ಹಿ ಜ್ಞಾನಿನಃ ಅತ್ಯರ್ಥಮ್ ಅಹಮ್ ಸಃ ಚ ಮಮ ಪ್ರಿಯಃ –


ಅವರಲ್ಲಿ ತಿಳಿದವನು ಮಿಗಿಲಾದವನು ; ನನ್ನಲ್ಲೇ ಭಕ್ತಿಯನ್ನಿಟ್ಟು, ನನ್ನನೇ ಸದಾ ನೆನೆಯುವವನು. ತಿಳಿದವನಿಗೆ ನಾನೆಂದರೆ ತುಂಬಾ ಇಷ್ಟ, ಅವನೆಂದರೆ ನನಗೂ ತುಂಬಾ ಇಷ್ಟ.

ಮೇಲೆ ಹೇಳಿದ ನಾಲ್ಕು ರೀತಿಯ ಭಕ್ತರಲ್ಲಿ ಜ್ಞಾನಿ ಎಲ್ಲರಿಗಿಂತ ಶ್ರೇಷ್ಠ. ಆತ ಜ್ಞಾನಪೂರ್ವಕವಾಗಿ ಯಾವುದೇ ಫಲಾಪೇಕ್ಷೆ ಇಲ್ಲದೆ ಭಗವಂತನನ್ನು ತಿಳಿದು ಸಹಜವಾಗಿ ಪ್ರೀತಿಸುತ್ತಾನೆ. ಹಿಂದಿನ ಅಧ್ಯಾಯಗಳಲ್ಲಿ ನೋಡಿದಂತೆ ನಾವು ಏನನ್ನು ಮಾಡುತ್ತೇವೋ ಅದನ್ನೇ ಪಡೆಯುತ್ತೇವೆ. ಭಗವಂತನನ್ನು ಹೇಗೆ ಕಾಣುತ್ತೇವೋ ಹಾಗೇ ಭಗವಂತ ನಮ್ಮನ್ನು ಕಾಣುತ್ತಾನೆ. ಈ ಕಾರಣದಿಂದ ಜ್ಞಾನಪೂರ್ವಕವಾದ, ಫಲಾಪೇಕ್ಷೆ ಇಲ್ಲದ, ಏಕಭಕ್ತಿಯುಳ್ಳ ಜ್ಞಾನಿ ಭಗವಂತನಿಗೆ ಬಹಳ ಹತ್ತಿರದಲ್ಲಿರುತ್ತಾನೆ.

ಕೃಪೆ: ಪದ್ಮಶ್ರೀ  ಶ್ರೀ ಬನ್ನಂಜೆ ಗೋವಿಂದಾಚಾರ್ಯರು

तेषां ज्ञानी नित्ययुक्त एकभक्तिर्विशिष्यते।
प्रियो हि ज्ञानिनोऽत्यर्थमहं स च मम प्रियः॥

उनमें नित्य मुझमें एकीभाव से स्थित अनन्य प्रेमभक्ति वाला ज्ञानी भक्त अति उत्तम है क्योंकि मुझको तत्व से जानने वाले ज्ञानी को मैं अत्यन्त प्रिय हूँ और वह ज्ञानी मुझे अत्यन्त प्रिय है
॥17॥

Teshaam jnaanee nityayukta eka bhaktirvishishyate;
Priyo hi jnaanino’tyarthamaham sa cha mama priyah.

Of them, the wise, ever steadfast and devoted to the One, excels (is the best);
for, I am exceedingly dear to the wise and he is dear to Me.
*******


World's 1st biggest Bhagavat Gita in Italy 
It's weight is 800kg 
2.84*2.00 meters
670 pages 

On 11th November 2018 it was presented to the world





ಭಗವದ್ಗೀತೆಯ ಕಿರು ಪರಿಚಯ..
ಪ್ರಶ್ನೋತ್ತರಮಾಲಿಕೆ..
ಪ್ರತಿಯೊಬ್ಬರೂ ಓದಿ..
ಶೇರ್ ಮಾಡಿ..
* ಭಗವದ್ಗೀತೆಯನ್ನು ಯಾರು ಯಾರಿಗೆ
ಬೋಧಿಸಿದರು..?
ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ.
* ಯಾವಾಗ ಬೋಧಿಸಿದ..?
ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ
ಹಿಂದೆ.
* ಯಾವ ದಿನ ಬೋಧಿಸಿದ..?
ಉತ್ತರ : ರವಿವಾರ.
* ಯಾವ ತಿಥಿಯಲ್ಲಿ..?
ಉತ್ತರ : ಏಕಾದಶಿಯಂದು.
* ಎಲ್ಲಿ ಬೋಧಿಸಿದ..?
ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ.
* ಎಷ್ಟು ಸಮಯ ಬೋಧಿಸಿದ..?
ಉತ್ತರ : ೪೫ ನಿಮಿಷ.
* ಅರ್ಜುನನಿಗೇಕೆ ಗೀತೆಯನ್ನು ಬೋಧಿಸಿದ..?
ಉತ್ತರ : ಕ್ಷತ್ರಿಯನಿಗೆ
ಕರ್ತವ್ಯವಾದದ್ದು ಯುದ್ಧ..
ತನ್ನ ಕರ್ತವ್ಯದಿಂದ ಅರ್ಜುನ
ವಿಮುಖನಾಗಲು ಬಯಸುತ್ತಾನೆ..
ಯುದ್ಧಮಾಡದಿರಲು ನಿಶ್ಚಯಿಸುತ್ತಾನೆ..
ಆತನಿಗೆ ತನ್ನ ಕರ್ತವ್ಯಗಳನ್ನು ಮನದಟ್ಟು
ಮಾಡಲು ಹಾಗೂ ಭವಿಷ್ಯದ
ಮಾನವಸಂತತಿಗೆ ಧರ್ಮಜ್ಞಾನವನ್ನು
ನೀಡಲು ಕೃಷ್ಣ ಗೀತೆಯನ್ನು ಬೋಧಿಸಿದ.
* ಭಗವದ್ಗೀತೆಯಲ್ಲಿ ಎಷ್ಟು ಅಧ್ಯಾಯಗಳಿವೆ..?
ಉತ್ತರ : ಹದಿನೆಂಟು.
* ಎಷ್ಟು ಶ್ಲೋಕಗಳಿವೆ..?
ಉತ್ತರ : ೭೦೦ ಶ್ಲೋಕಗಳು.
* ಗೀತೆಯಲ್ಲಿರುವ ವಿಷಯಗಳಾವವು..?
ಉತ್ತರ : ಜ್ಞಾನ - ಭಕ್ತಿ - ಕರ್ಮ - ಯೋಗ
ಮಾರ್ಗಗಳ ವಿಸ್ತೃತವಾದ ವ್ಯಾಖ್ಯಾನ..ಈ
ಮಾರ್ಗಗಳಲ್ಲಿ
ನಡೆಯುವವರು ಖಂಡಿತವಾಗಲೂ ಪರಮಸ್ಥಾನವನ್ನು ಪಡೆಯುತ್ತಾರೆಂದು
ಹೇಳಲಾಗಿದೆ..
* ಅರ್ಜುನನನ್ನು ಬಿಟ್ಟರೆ
ಗೀತೆಯನ್ನು ಮತ್ತ್ಯಾರು ಕೇಳಿದ್ದಾರೆ..?
ಉತ್ತರ : ಧೃತರಾಷ್ಟ್ರ ಹಾಗೂ ಸಂಜಯ.
* ಅರ್ಜುನನಿಗಿಂತಲೂ ಮೊದಲು ಗೀತೆಯ ಪವಿತ್ರ
ಜ್ಞಾನ ಯಾರಿಗೆ ತಿಳಿದಿತ್ತು...?
ಉತ್ತರ : ಭಗವಾನ್ ಸೂರ್ಯದೇವನಿಗೆ.
* ಭಗವದ್ಗೀತೆಯನ್ನು ಯಾವ ಧರ್ಮಗ್ರಂಥದಲ್ಲಿ
ಸೇರಿಸಲಾಗಿದೆ..?
ಉತ್ತರ : ಉಪನಿಷತ್ತಿನಲ್ಲಿ.
* ಗೀತೆ ಯಾವ ಗ್ರಂಥದ ಭಾಗವಾಗಿದೆ..?
ಉತ್ತರ : ಮಹಾಭಾರತದ ಭೀಷ್ಮಪರ್ವದ
ಒಂದು ಭಾಗವಾಗಿದೆ.
* ಭಗವದ್ಗೀತೆಯ ಇನ್ನೊಂದು ಹೆಸರು..?
ಉತ್ತರ : ಗೀತೋಪನಿಷತ್.
* ಗೀತೆಯ ಸಾರವೇನು..?
ಉತ್ತರ : ಕರ್ಮಫಲಗಳನ್ನು ಬಿಟ್ಟು , ಭಗವಂತನಲ್ಲಿ
ಶರಣಾಗತಿಯನ್ನು ಹೊಂದುವುದು..
* ಭಗವದ್ಗೀತೆಯಲ್ಲಿ
ಯಾರು ಎಷ್ಟು ಶ್ಲೋಕಗಳನ್ನು ಹೇಳಿದ್ದಾರೆ..?
ಉತ್ತರ : ಶ್ರೀಕೃಷ್ಣ - ೫೭೪.
ಅರ್ಜುನ - ೮೫
ಧೃತರಾಷ್ಟ್ರ - ೦೧
ಸಂಜಯ - ೪೦

ಶ್ರೀಕೃಷ್ಣಾರ್ಪಣಮಸ್ತು
**************
BHAGWAD GITA was conveyed by lord ದೇವ- ಕೃಷ್ಣ krishna to his die hard follower Madhya Pandava (Arjuna), while the great war was about to start between Pandavas and Kauravas. Here is the gist of it in one sentence per chapter...
Chapter 1
Wrong thinking is the only problem in life
Chapter 2
Right knowledge is the ultimate solution to all our problems
Chapter 3
Selflessness is the only way to progress & prosperity
Chapter 4
Every act can be an act of prayer
Chapter 5
Renounce the ego of individuality & rejoice in the bliss of infinity
Chapter 6
Connect to the Higher consciousness daily
Chapter 7
Live what you learn
Chapter 8
Never give up on yourself
Chapter 9
Value your blessings
Chapter 10
See divinity all around
Chapter 11
Have enough surrender to see the Truth as it is


Chapter 12
Absorb your mind in the Higher
Chapter 13
Detach from maya & attach to Divine
Chapter 14
Live a lifestyle that matches your vision
Chapter 15
Give priority to Divinity
Chapter 16
Being good is a reward in itself
Chapter 17
Choosing the right over the pleasant is a sign of power

Chapter 18
Let Go, Lets move to union with God

*****
ಪ್ರಶ್ನೋತ್ತರಮಾಲಿಕೆ..

* ಭಗವದ್ಗೀತೆಯನ್ನು ಯಾರು ಯಾರಿಗೆ
ಬೋಧಿಸಿದರು..?
ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ.
* ಯಾವಾಗ ಬೋಧಿಸಿದ..?
ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ
ಹಿಂದೆ.
* ಯಾವ ದಿನ ಬೋಧಿಸಿದ..?
ಉತ್ತರ : ರವಿವಾರ.
* ಯಾವ ತಿಥಿಯಲ್ಲಿ..?
ಉತ್ತರ : ಏಕಾದಶಿಯಂದು.
* ಎಲ್ಲಿ ಬೋಧಿಸಿದ..?
ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ.
* ಎಷ್ಟು ಸಮಯ ಬೋಧಿಸಿದ..?
ಉತ್ತರ : ೪೫ ನಿಮಿಷ.
* ಅರ್ಜುನನಿಗೇಕೆ ಗೀತೆಯನ್ನು ಬೋಧಿಸಿದ..?
ಉತ್ತರ : ಕ್ಷತ್ರಿಯನಿಗೆ
ಕರ್ತವ್ಯವಾದದ್ದು ಯುದ್ಧ..
ತನ್ನ ಕರ್ತವ್ಯದಿಂದ ಅರ್ಜುನ
ವಿಮುಖನಾಗಲು ಬಯಸುತ್ತಾನೆ..
ಯುದ್ಧಮಾಡದಿರಲು ನಿಶ್ಚಯಿಸುತ್ತಾನೆ..
ಆತನಿಗೆ ತನ್ನ ಕರ್ತವ್ಯಗಳನ್ನು ಮನದಟ್ಟು
ಮಾಡಲು ಹಾಗೂ ಭವಿಷ್ಯದ
ಮಾನವಸಂತತಿಗೆ ಧರ್ಮಜ್ಞಾನವನ್ನು
ನೀಡಲು ಕೃಷ್ಣ ಗೀತೆಯನ್ನು ಬೋಧಿಸಿದ.
* ಭಗವದ್ಗೀತೆಯಲ್ಲಿ ಎಷ್ಟು ಅಧ್ಯಾಯಗಳಿವೆ..?
ಉತ್ತರ : ಹದಿನೆಂಟು.
* ಎಷ್ಟು ಶ್ಲೋಕಗಳಿವೆ..?
ಉತ್ತರ : ೭೦೦ ಶ್ಲೋಕಗಳು.
* ಗೀತೆಯಲ್ಲಿರುವ ವಿಷಯಗಳಾವವು..?
ಉತ್ತರ : ಜ್ಞಾನ - ಭಕ್ತಿ - ಕರ್ಮ - ಯೋಗ
ಮಾರ್ಗಗಳ ವಿಸ್ತೃತವಾದ ವ್ಯಾಖ್ಯಾನ..ಈ
ಮಾರ್ಗಗಳಲ್ಲಿ
ನಡೆಯುವವರು ಖಂಡಿತವಾಗಲೂ ಪರಮಸ್ಥಾನವನ್ನು ಪಡೆಯುತ್ತಾರೆಂದು
ಹೇಳಲಾಗಿದೆ..
* ಅರ್ಜುನನನ್ನು ಬಿಟ್ಟರೆ
ಗೀತೆಯನ್ನು ಮತ್ತ್ಯಾರು ಕೇಳಿದ್ದಾರೆ..?
ಉತ್ತರ : ಧೃತರಾಷ್ಟ್ರ ಹಾಗೂ ಸಂಜಯ.
* ಅರ್ಜುನನಿಗಿಂತಲೂ ಮೊದಲು ಗೀತೆಯ ಪವಿತ್ರ
ಜ್ಞಾನ ಯಾರಿಗೆ ತಿಳಿದಿತ್ತು...?
ಉತ್ತರ : ಭಗವಾನ್ ಸೂರ್ಯದೇವನಿಗೆ.
* ಭಗವದ್ಗೀತೆಯನ್ನು ಯಾವ ಧರ್ಮಗ್ರಂಥದಲ್ಲಿ
ಸೇರಿಸಲಾಗಿದೆ..?
ಉತ್ತರ : ಉಪನಿಷತ್ತಿನಲ್ಲಿ.
* ಗೀತೆ ಯಾವ ಗ್ರಂಥದ ಭಾಗವಾಗಿದೆ..?
ಉತ್ತರ : ಮಹಾಭಾರತದ ಭೀಷ್ಮಪರ್ವದ
ಒಂದು ಭಾಗವಾಗಿದೆ.
* ಭಗವದ್ಗೀತೆಯ ಇನ್ನೊಂದು ಹೆಸರು..?
ಉತ್ತರ : ಗೀತೋಪನಿಷತ್.
* ಗೀತೆಯ ಸಾರವೇನು..?
ಉತ್ತರ : ಕರ್ಮಫಲಗಳನ್ನು ಬಿಟ್ಟು , ಭಗವಂತನಲ್ಲಿ
ಶರಣಾಗತಿಯನ್ನು ಹೊಂದುವುದು..
* ಭಗವದ್ಗೀತೆಯಲ್ಲಿ
ಯಾರು ಎಷ್ಟು ಶ್ಲೋಕಗಳನ್ನು ಹೇಳಿದ್ದಾರೆ..?
ಉತ್ತರ : ಶ್ರೀಕೃಷ್ಣ - ೫೭೪.
ಅರ್ಜುನ - ೮೫
ಧೃತರಾಷ್ಟ್ರ - ೦೧
ಸಂಜಯ - ೪೦
ಶ್ರೀಕೃಷ್ಣಾರ್ಪಣಮಸ್ತು
***********


*******
ಯದಾ ಯದಾ ಹಿ ಧರ್ಮಸ್ಯ
 ಗ್ಲಾನಿರ್ಭವತಿ ಭಾರತ|
ಅಭ್ಯುತ್ಥಾನಮಧರ್ಮಸ್ಯ
 ತದಾತ್ಮಾನಂ ಸೃಜಾಮ್ಯಹಂ||

ಪರಿತ್ರಾಣಾಯ ಸಾಧೂನಾಂ
 ವಿನಾಶಾಯ ಚ ದುಷ್ಕೃತಾಂ|
ಧರ್ಮಸಂಸ್ಥಾಪನಾರ್ಥಾಯ
 ಸಂಭವಾಮಿ ಯುಗೇ ಯುಗೇ||🚩

🚩ಯಾವಾಗ ಧರ್ಮದ ಅವನತಿಯಾಗುವುದೋ ಅಧರ್ಮದ ಉನ್ನತಿಯಾಗುವುದೋ ಆಗ ನಾನು ಅವತರಿಸುತ್ತೇನೆ. ಸಾಧುಗಳ ರಕ್ಷಣೆಗಾಗಿ, ದುಷ್ಟರ ವಿನಾಶಕ್ಕಾಗಿ ಮತ್ತು ಧರ್ಮದ ಸಂಸ್ಥಾಪನೆಗಾಗಿ ಪ್ರತಿಯುಗದಲ್ಲೂ ಅವತರಿಸುತ್ತೇನೆ.

🚩- ಭಗವಾನ್ ಶ್ರೀಕೃಷ್ಣ, ಭಗವದ್ಗೀತೆ
***

No comments:

Post a Comment