SEARCH HERE

Showing posts with label ಆರೋಗ್ಯ- ಬಜೆ ಬೇರಿನ ಉಪಯೋಗ baje beru uses. Show all posts
Showing posts with label ಆರೋಗ್ಯ- ಬಜೆ ಬೇರಿನ ಉಪಯೋಗ baje beru uses. Show all posts

Tuesday, 1 January 2019

ಬಜೆ ಬೇರಿನ ಉಪಯೋಗ baje beru uses


ಬಜೆ ಬೇರಿನ ಉಪಯೋಗ

ಬಜೆಯನ್ನು ತೇಯ್ದು ತುಪ್ಪದೊಡನೆ ಕಲಸಿ ಮಕ್ಕಳಿಗೆ ತಿನ್ನಿಸುವುದರಿಂದ ವಾಕ್ ಶಕ್ತಿ, ಬುದ್ಧಿಶಕ್ತಿ ಮತ್ತು ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.

ಬಟ್ಟೆಯಲ್ಲಿ ಶೋಧಿಸಿದ ಬಜೆಯ ಚೂರ್ಣ ೧೦ಗ್ರಾಂನಷ್ಟನ್ನು ದಿವಸಕ್ಕೊಮ್ಮೆ ಬೆಳಗ್ಗೆ ಬಿಸಿ ನೀರಿನಲ್ಲಿ ಅಥವಾ ಜೇನಿನಲ್ಲಾಗಲೀ ಇಟ್ಟು ೪೦ ದಿನ ಸೇವಿಸಿದರೆ ಮೂರ್ಛೆ ಗುಣವಾಗುತ್ತದೆ.

ಬಜೆಯನ್ನು ಅರೆದು ಲೇಪಿಸುವುದರಿಂದ, ಸಂಧಿವಾತ ಮತ್ತು ಲಕ್ವ ಗುಣವಾಗುತ್ತದೆ.

ಹಸಿ ಬಜೆಯ ರಸವನ್ನು ಕಿವಿಗೆ ಹಿಂಡುವುದರಿಂದ ಕಿವಿನೋವು ಕಡಿಮೆಯಾಗುತ್ತದೆ.
*****

ಬಜೆ, ನಾಗಕೇಸರಿ, ಹಿಪ್ಪಲಿ ಬೇರಿನ ಚೂರ್ಣಗಳನ್ನು ಸೇರಿಸಿ ಸೇವಿಸಿದರೆ ಸುಖ ಪ್ರಸವವಾಗುತ್ತದೆ.

ಬಜೆಯ ಕಷಾಯ ಸೇವನೆಯಿಂದ ಮೂತ್ರಕೋಶದ ಕಲ್ಲು ಕರಗಿ ಹೋಗುತ್ತದೆ. ಮೂತ್ರ ಬಂಧವೂ ನಿವಾರಣೆಯಾಗುತ್ತದೆ.

ಬಜೆ ಮತ್ತು ಸೈಂಧಲವಣ ಇವೆರಡನ್ನು ನೀರಿನೊಡನೆ ಕುಡಿಯುವುದರಿಂದ ಕಫ ವಾಂತಿಯಾಗಿ ಕೆಮ್ಮು ಶಮನವಾಗುತ್ತದೆ.
***
"ಬಜೆ"

ಅಕೊರಸ್ ಕೆಲಾಮಸ್ (Acorus calamus L) ಎಂದು ಕರೆಯಲ್ಪಟ್ಟ ಬಜೆ ‘ಏರೇಸಿ’ ಕುಟುಂಬಕ್ಕೆ ಸೇರಿದ ಸಸ್ಯಮೂಲಿಕೆ. ಇದು ಸಾಮಾನ್ಯವಾಗಿ ಜೌಗು ಪ್ರದೇಶದಲ್ಲಿ ಬೆಳೆಯುತ್ತದೆ. ನೀರಿನಂಶ ಜಾಸ್ತಿ ಇರುವ ಕಡೆ ಬೆಳೆಯುತ್ತದೆ.
ಇದು ದೇಹಕ್ಕೆ ತುಂಬಾ ತಂಪು. ಇದು ನೀರಿನಾಸರೆ ಇರುವ ಕಡೆ ಬೆಳೆಯುವ ಸಸಿ. ಬೇರುಗಳಿಗೆ ಸುವಾಸನೆಯಿರುವುದು. ರುಚಿ ಖಾರವಾಗಿರುವಿದು. ಹೊಗಳು ಸಣ್ಣ ಸಣ್ಣದಾಗಿದ್ದು ತಿಳಿ ಹಸಿರಾಗಿರುವುವು. ಗ್ರಾಮವಾಸಿಗಳಿಗೆ, ಅಜ್ಜಿಯಂದಿಯರಿಗೆ ಚಿರಪರಿಚಿತ ಮೂಲಿಕೆ..
ಬಜೆ ಸಸ್ಯ ಮಲೆನಾಡಿನಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಅಧಿಕ ನೀರನ್ನು ಹೀರಿಕೊಳ್ಳುವ ಈ ಸಸ್ಯ ಭದ್ರವಾಗಿ ಬೇರೂರುತ್ತದೆ. ಜೊತೆಗೆ, ಮನೆ ಮದ್ದಾಗಿ ಬಳಸುವ ಈ ಗಿಡ ಬಜೆ ಬೇರು ಎಂಬ ಹೆಸರಿನಿಂದ ಜನಪ್ರಿಯವಾಗಿದೆ. ಚಿಕ್ಕಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರೂ  ಔಷಧವಾಗಿ ಇದನ್ನು ಬಳಸುತ್ತಾರೆ. ರುಚಿಯಲ್ಲಿ ಸ್ವಲ್ಪ ಖಾರ.. ಆದರೆ, ಇದರಿಂದ ಹೊರಹೊಮ್ಮುವ ಸುವಾಸನೆ ಮಾತ್ರ ಅದ್ಭುತ..!

ಇದರ ಉಪಯೋಗ :

೧. ಬಜೆಯನ್ನು ಸುಟ್ಟು ಭಸ್ಮವನ್ನು ಮಾಡಿ, ಅರ್ಧ ಚಮಚ ಭಸ್ಮಕ್ಕೆ ಸ್ವಲ್ಪ ಜೇನುತುಪ್ಪ ಸೇರಿಸಿ ದಿವಸಕ್ಕೆ 2 – 3 ವೇಳೆ ತಿನ್ನುವುದರಿಂದ ನೆಗಡಿ, ಕೆಮ್ಮು ಕಡಿಮೆಯಾಗುತ್ತದೆ.

೨. ಬಜೆಯನ್ನು ತೇಯ್ದು ತುಪ್ಪದೊಡನೆ ಕಲಸಿ ಮಕ್ಕಳಿಗೆ ತಿನ್ನಿಸುವುದರಿಂದ ವಾಕ್ ಶಕ್ತಿ, ಬುದ್ಧಿಶಕ್ತಿ ಮತ್ತು ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.

೩. ಬಟ್ಟೆಯಲ್ಲಿ ಶೋಧಿಸಿದ ಬಜೆಯ ಚೂರ್ಣ 10ಗ್ರಾಂನಷ್ಟನ್ನು ದಿವಸಕ್ಕೊಮ್ಮೆ ಬೆಳಗ್ಗೆ ಬಿಸಿ ನೀರಿನಲ್ಲಿ ಅಥವಾ ಜೇನಿನಲ್ಲಾಗಲೀ ಇಟ್ಟು 40 ದಿನ ಸೇವಿಸಿದರೆ ಮೂರ್ಛೆ ಗುಣವಾಗುತ್ತದೆ...

೪. ಬಜೆಯನ್ನು ಅರೆದು ಲೇಪಿಸುವುದರಿಂದ, ಸಂಧಿವಾತ ಮತ್ತು ಲಕ್ವ ಗುಣವಾಗುತ್ತದೆ.

೫. ಹಸಿ ಬಜೆಯ ರಸವನ್ನು ಕಿವಿಗೆ ಹಿಂಡುವುದರಿಂದ ಕಿವಿನೋವು ಕಡಿಮೆಯಾಗುತ್ತದೆ.

೬. ಬಜೆ, ನಾಗಕೇಸರಿ, ಹಿಪ್ಪಲಿ ಬೇರಿನ ಚೂರ್ಣಗಳನ್ನು ಸೇರಿಸಿ ಸೇವಿಸಿದರೆ ಸುಖ ಪ್ರಸವವಾಗುತ್ತದೆ.

೭. ಬಜೆ ಸೇವಿಸುವುದರಿಂದ ಜಂತುಹುಳುಗಳು ನಾಶವಾಗುತ್ತವೆ.

೮. ಬಜೆಯ ಕಷಾಯ ಸೇವನೆಯಿಂದ ಮೂತ್ರಕೋಶದ ಕಲ್ಲು ಕರಗಿ ಹೋಗುತ್ತದೆ. ಮೂತ್ರ ಬಂಧವೂ ನಿವಾರಣೆಯಾಗುತ್ತದೆ.

೯. ಮಕ್ಕಳಲ್ಲಿ ಹಲ್ಲು ಹುಟ್ಟುವಾಗ ಜ್ವರ ಕಾಣಿಸಿಕೊಂಡಲ್ಲಿ ಬಜೆಯನ್ನು ಅರೆದು ತಿನ್ನಿಸುವುದರಿಂದ ಜ್ವರ ವಾಸಿಯಾಗುತ್ತದೆ.

೧೦. ಬಜೆ ಮತ್ತು ಸೈಂಧಲವಣ ಇವೆರಡನ್ನು ನೀರಿನೊಡನೆ ಕುಡಿಯುವುದರಿಂದ ಕಫ ವಾಂತಿಯಾಗಿ ಕೆಮ್ಮು ಶಮನವಾಗುತ್ತದೆ.

೧೧. ಬಜೆಯ ಗಂಧ ತಯಾರಿಸಿ ಸೇವಿಸುವುದರಿಂದ ಅಜೀರ್ಣ, ಹೊಟ್ಟೆನೋವು ಮತ್ತು ಮೂಲವ್ಯಾಧಿ ಗುಣವಾಗುತ್ತದೆ.

೧೨. ಒಂದು ತಿಂಗಳಿಂದ ಆರು ತಿಂಗಳ ಮಕ್ಕಳಲ್ಲಿ ಭೇದಿಯಾಗುತ್ತಿದ್ದಲ್ಲಿ ಹಾಗೂ ಹೊಟ್ಟೆ ಉಬ್ಬರವಿದ್ದಲ್ಲಿ ಬಜೆಪುಡಿಯನ್ನು ಹರಳೆಣ್ಣೆಯಲ್ಲಿ ಬೆರೆಸಿ ಹೊಟ್ಟೆಯ ಮೇಲೆ ಲೇಪಿಸಬೇಕು.

ಉತ್ತಮ ಜೀರ್ಣಕ್ರಿಯೆ: ಬಜೆ ಬೇರನ್ನು ತಿಂಗಳಿಗೆ 2 ಬಾರಿ ತೇಯ್ದು ಒಂದು ಚಮಚ ಸೇವಿಸುವುದರಿಂದ ಆಹಾರ ಸರಿಯಾಗಿ ಜೀರ್ಣವಾಗುತ್ತದೆ. ಜೊತೆಗೆ, ಹೊಟ್ಟೆ ನೋವು, ಜಂತು ಹುಳು ಈ ರೀತಿಯ ಸಮಸ್ಯೆಗಳ ನಿವಾರಣೆಗೆ ಬಜೆ ಬೇರು ಬಹಳ ಪರಿಣಾಮಕಾರಿ.

ಚಿಕ್ಕ ಮಕ್ಕಳಲ್ಲಿ ಮಾತು ಶುದ್ಧತೆ: ಮಕ್ಕಳ ಉಚ್ಛಾರಣೆಯಲ್ಲಿ ತೊದಲು ಕಂಡುಬಂದರೆ ಪ್ರತಿದಿನ ಬಜೆ ಬೇರನ್ನು ತೇಯ್ದು ಕೊಡುವುದರಿಂದ ಮಾತಿನಲ್ಲಿ ಶುದ್ಧತೆ ಕಂಡುಬರುತ್ತದೆ. ಕೇವಲ ಮಕ್ಕಳಲ್ಲದೆ ವಯಸ್ಕರೂ ಸಹ ಈ ಬೇರನ್ನು ಸೇವಿಸುವ ಮೂಲಕ ಸ್ಪಷ್ಟವಾಗಿ ಉಚ್ಛರಿಸಬಹುದಾಗಿದೆ.

ಶ್ವಾಸಕೋಶ ಸಂಬಂಧಿ ಸಮಸ್ಯೆಗೆ ಪರಿಹಾರ: ಉಸಿರಾಟ ಕ್ರಿಯೆ, ಕೆಮ್ಮು, ಕಫದಂತಹ ಸಮಸ್ಯೆಗಳಿಗೆ ಬಜೆ ಬೇರನ್ನು ಕುಟ್ಟಿ, ಪುಟಿ ಮಾಡಿ, ನೀರಿನಲ್ಲಿ ಕುದಿಸಿ, ಕಷಾಯ ಮಾಡಿ ಸೇವಿಸುವುದು ಉತ್ತಮ. ನೆಗಡಿ(ಶೀತ), ಜ್ವರದ ಸಮಸ್ಯೆಗಳಿಗೂ ಬಜೆ ಬೇರಿನ ಕಷಾಯ ಅತ್ಯಂತ ಪರಿಣಾಮಕಾರಿ...
 ( ಆಯುರ್ವೇದ )
****